IND -ENG 2ND Test: ಮೊದಲ ದಿನ ಭಾರತ ಶುಭಾರಂಭ; ಗಿಲ್‌ ಶತಕ, ಜೈಸ್ವಾಲ್‌ ಅರ್ಧ ಶತಕ

Date:

ನಾಯಕ ಶುಭಮನ್‌ ಗಿಲ್ ಅವರ ಆಕರ್ಷಕ ಶತಕ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಜವಾಬ್ದಾರಿಯುತ ಅರ್ಧ ಶತಕದ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಮೊದಲ ದಿನ ಇಂಗ್ಲೆಂಡ್‌ ವಿರುದ್ಧ ದಿನದ ಗೌರವಕ್ಕೆ ಪಾತ್ರವಾಗಿದೆ. ಮೊದಲ ದಿನದಾಟ ಮುಗಿದಾಗ ಭಾರತ 85 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 310 ರನ್‌ ಪೇರಿಸಿದೆ.

- Advertisement -

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಸಮಯೋಚಿತ ಬ್ಯಾಟಿಂಗ್ ನಡೆಸುವಲ್ಲಿ ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ವಿಫಲರಾದರು. ಪ್ರವಾಸಿ ತಂಡ 15 ರನ್‌ ಕಲೆ ಹಾಕುವಷ್ಟರಲ್ಲಿ ಒಂದು ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಈ ವೇಳೆ ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್‌ ಹಾಗೂ ಕರುಣ್ ನಾಯರ್‌ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 90 ಎಸೆತಗಳಲ್ಲಿ 80 ರನ್‌ ಸೇರಿಸಿತು. ಇನ್ನು ಕರುಣ್‌ ನಾಯರ್‌ (31) ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮೂವರು ಸ್ಟಾರ್ ಆಟಗಾರರ ದಾಖಲೆ ಮುರಿಯುವ ಹೊಸ್ತಿಲಲ್ಲಿ ಯಶಸ್ವಿ ಜೈಸ್ವಾಲ್‌

ಮೂರನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್‌ ಹಾಗೂ ನಾಯಕ ಶುಭಮನ್‌ ಗಿಲ್ ಜೋಡಿ ವಿಕೆಟ್‌ ಬೀಳದಂತೆ ಕಾಯ್ದುಕೊಳ್ಳುವಲ್ಲಿ ಸಫಲವಾಯಿತು. ಈ ಜೋಡಿ 131 ಎಸೆತಗಳಲ್ಲಿ 66 ರನ್‌ ಸೇರಿಸಿತು. ಈ ವೇಳೆ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದ ಯಶಸ್ವಿ ಜೈಸ್ವಾಲ್‌ ಕಳಪೆ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಇವರು 107 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ 87 ರನ್‌ ಬಾರಿಸಿ ಅಬ್ಬರಿಸಿದರು.

ಮೊದಲ ಟೆಸ್ಟ್‌ನ ಎರಡೂ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಭರವಸೆ ಮೂಡಿಸಿದ್ದ ಉಪನಾಯಕ ರಿಷಭ್‌ ಪಂತ್, ನಾಯಕನ ಜೊತೆಗೂಡಿದರು. 1 ಬೌಂಡರಿ, 1 ಸಿಕ್ಸರ್ ನೆರವಿನಿಂದ 25 ರನ್‌ ಬಾರಿಸಿದ್ದಾಗ ಇಲ್ಲದ ಹೊಡೆತಕ್ಕೆ ಮುಂದಾಗಿ ಪೆವಿಲಿಯನ್‌ಗೆ ತೆರಳಿದರು. ಎರಡನೇ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆದ ನಿತೀಶ್ ಕುಮಾರ್ ರೆಡ್ಡಿ (1) ರನ್‌ ಕಲೆ ಹಾಕುವಲ್ಲಿ ವಿಫಲರಾದರು.

ನಾಯಕ ಶುಭಮನ್‌ ಗಿಲ್‌ ಅವರನ್ನು ಸೇರಿಕೊಂಡ ಆಲ್‌ರೌಂಡರ್ ರವೀಂದ್ರ ಜಡೇಜಾ ಸಮಯೋಚಿತ ಬ್ಯಾಟಿಂಗ್ ನಡೆಸಿದರು. ಈ ಜೋಡಿ 142 ಎಸೆತಗಳಲ್ಲಿ ಅಜೇಯ 99 ರನ್‌ ಸೇರಿಸಿ ತಂಡಕ್ಕೆ ಆಧಾರವಾಗಿದೆ. ಅಲ್ಲದೆ ಈ ಜೊಡಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದೆ. ಈ ವೇಳೆ ರವೀಂದ್ರ ಜಡೇಜಾ 5 ಬೌಂಡರಿ ನೆರವಿನಿಂದ ಅಜೇಯ 41 ರನ್‌ ಬಾರಿಸಿದರು. ನಾಯಕ ಶುಭಮನ್‌ ಗಿಲ್‌ ಜವಾಬ್ದಾರಿಯನ್ನು ಅರಿತು ಬ್ಯಾಟ್ ಮಾಡಿದರು. ಶುಭಮನ್‌ 216 ಎಸೆತಗಳಲ್ಲಿ 12 ಬೌಂಡರಿ ನೆರವಿನಿಂದ ಅಜೇಯ 114 ರನ್‌ ಬಾರಿಸಿ ಗುರುವಾರಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನಾಯಕನಾಗಿ ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸತತ ಶತಕ ಸಿಡಿಸುವ ಮೂಲಕ ಭಾರತದ ವಿಜಯ್‌ ಹಜಾರೆ, ಸುನಿಲ್‌ ಗವಾಸ್ಕರ್‌, ವಿರಾಟ್‌ ಕೊಹ್ಲಿ ಸಾಧನೆಯನ್ನು ಗಿಲ್‌ ಸರಿಗಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...