ಟಿ20 ವಿಶ್ವಕಪ್ | ಪಾಕ್ ವಿರುದ್ಧ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಮ್ ಇಂಡಿಯಾ; 119ಕ್ಕೆ ಆಲೌಟ್!

Date:

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತೀವ್ರ ಕಳಪೆ ಪ್ರದರ್ಶನ ನೀಡಿದ್ದು, 119ಕ್ಕೆ ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ 19 ಓವರ್‌ಗಳಲ್ಲಿ 119 ರನ್ ಗಳಿಸುವ ವೇಳೆಗೆ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದ್ದು, ಪಾಕಿಸ್ತಾನಕ್ಕೆ ಗೆಲ್ಲಲು 120 ರನ್‌ಗಳ ಸಾಧಾರಣ ಗುರಿ ನೀಡಿದೆ.

11 ಓವರ್‌ಗಳ ಮುಕ್ತಾಯದ ವೇಳೆ ಕೇವಲ ಮೂರು ವಿಕೆಟ್ ಕಳೆದುಕೊಂಡು 89 ರನ್ ಗಳಿಸಿದ್ದ ಟೀಮ್ ಇಂಡಿಯಾ, ನಾಟಕೀಯ ಕುಸಿತ ಕಂಡು ಮತ್ತೆ 30 ರನ್‌ ಸೇರಿಸುವಷ್ಟರಲ್ಲಿ ಆಲೌಟ್ ಆಗಿದೆ. 119 ರನ್ ಗಳಿಸುವ ಮೂಲಕ ಟಿ20 ವಿಶ್ವಕಪ್‌ನ ಇತಿಹಾಸದಲ್ಲಿ ಅತೀ ಕಡಿಮೆ ಮೊತ್ತ ಕಲೆ ಹಾಕಿದ ಬೇಡದ ದಾಖಲೆ ಬರೆದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟೀಮ್ ಇಂಡಿಯಾ ಪರವಾಗಿ ಮಧ್ಯಮ ಕ್ರಮಾಂಕದ ಬ್ಯಾಟರ್ ರಿಷಭ್ ಪಂತ್ 31 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 42 ರನ್ ಗಳಿಸಿ, ಮೊಹಮ್ಮದ್ ಆಮಿರ್‌ಗೆ ವಿಕೆಟ್ ಒಪ್ಪಿಸಿದರು. ಉಳಿದಂತೆ ಅಕ್ಷರ್ ಪಟೇಲ್ 20 ರನ್, ನಾಯಕ ರೋಹಿತ್ ಶರ್ಮಾ 13 ಗಳಿಸಿದರೆ, ಉಳಿದ ಯಾವ ಬ್ಯಾಟರ್‌ಗಳೂ ಕೂಡ ಎರಡಂಕೆ ದಾಟಲಿಲ್ಲ. ಮೊದಲ ಪಂದ್ಯದಲ್ಲಿ ವಿಫಲರಾಗಿದ್ದ ವಿರಾಟ್ ಕೊಹ್ಲಿ ಮತ್ತೆ ಇಂದಿನ ಪಂದ್ಯದಲ್ಲೂ ವಿಫಲರಾದರು.

ಸಂಘಟಿತ ಬೌಲಿಂಗ್ ಪ್ರದರ್ಶನ ನೀಡಿದ ಪಾಕಿಸ್ತಾನದ ಬೌಲರ್‌ಗಳು

ತನ್ನ ಸಾಂಪ್ರದಾಯಿಕ ಎದುರಾಳಿ ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದಿದ್ದನ್ನು ಬಳಸಿಕೊಂಡ ಪಾಕಿಸ್ತಾನದ ಬೌಲರ್‌ಗಳು, ಸಂಘಟಿತ ಬೌಲಿಂಗ್ ಪ್ರದರ್ಶನ ನೀಡಿದರು.

ಪಾಕ್ ಪರ 4 ಓವರ್ ಎಸೆದ ನಸೀಮ್ ಶಾ ಕೇವಲ 21 ರನ್ ನೀಡಿ, ಮೂರು ವಿಕೆಟ್ ಪಡೆದು ಮಿಂಚಿದರು. ಮೂರು ಓವರ್ ಎಸೆದಿದ್ದ ಹಾರಿಸ್ ರೌಫ್ 21ಕ್ಕೆ ಮೂರು ವಿಕೆಟ್ ಪಡೆದರು.  ಉಳಿದಂತೆ ಮೊಹಮ್ಮದ್ ಆಮಿರ್ 23ಕ್ಕೆ 2, ಶಾಹೀನ್ ಶಾ ಅಫ್ರೀದಿ 29ಕ್ಕೆ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

 

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ...

2026ರ ಫಿಫಾ ವಿಶ್ವಕಪ್​ ಅರ್ಹತಾ ಟೂರ್ನಿ | ಕತಾರ್​ ಮೋಸದಾಟಕ್ಕೆ ಭಾರತ ಫುಟ್ಬಾಲ್​ ತಂಡ ‘ಔಟ್’; ವ್ಯಾಪಕ ಆಕ್ರೋಶ

ಕ್ರಿಕೆಟ್​​ನಂತೆ ಫುಟ್ಬಾಲ್​ನಲ್ಲಿ ಮಹತ್ತರ ಬದಲಾವಣೆ ತರಬೇಕಿದೆ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ...

ಜಿಜ್ಞಾಸೆ | ರಿಷಬ್ ಪಂತ್‌ಗೆ ಸಿಕ್ಕ ಸೌಲಭ್ಯ ಸಾಮಾನ್ಯರಿಗೇಕಿಲ್ಲ, ಸರ್ಕಾರಗಳ ಆದ್ಯತೆಗಳೇನು?

ಕ್ರಿಕೆಟಿಗ ರಿಷಬ್ ಪಂತ್ ಅಪಘಾತಕ್ಕೀಡಾಗಿ, ಅಷ್ಟೇ ವೇಗವಾಗಿ ಚೇತರಿಸಿಕೊಂಡು, ಮತ್ತೆ ಆಟವಾಡುತ್ತಿದ್ದಾರೆ....