ಭಾರತೀಯ ಪುರುಷರ ಹಾಗೂ ಮಹಿಳೆಯರ ಖೋ ಖೋ ತಂಡಗಳು ಒಂದೇ ದಿನ ಮೊದಲ ಆವೃತ್ತಿಯ ಖೋ ಖೋ ವಿಶ್ವಕಪ್ ಎತ್ತಿ ಹಿಡಿದು ಐತಿಹಾಸಿಕ ಸಾಧನೆ ಮಾಡಿವೆ.
ಭಾನುವಾರ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ತಂಡವು ನೇಪಾಳ ತಂಡವನ್ನು 54-36 ಅಂಕಗಳ ಅಂತರದಿಂದ ರೋಚಕವಾಗಿ ಮಣಿಸಿತು.
ಭಾರತದ ಮಹಿಳೆಯರ ಖೋ ಖೋ ತಂಡ ನೇಪಾಳ ತಂಡವನ್ನು ಸೋಲಿಸಿ ವಿಶ್ವಕಪ್ ಜಯಿಸಿ ವಿಶ್ವ ಚಾಂಪಿಯನ್ ಕಿರೀಟ ಧರಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!
ಭಾರತ-ನೇಪಾಳ ಪುರುಷರ ತಂಡಗಳು ಟೂರ್ನಿಯಲ್ಲಿ 2ನೇ ಬಾರಿ ಮುಖಾಮುಖಿಯಾದವು. ಟೂರ್ನಿಯ ಮೊದಲ ಪಂದ್ಯದಲ್ಲಿ ಪ್ರತಿಕ್ ವೈಕರ್ ಬಳಗವು ನೇಪಾಳ ತಂಡವನ್ನು 42-37 ಅಂತರದಿಂದ ಮಣಿಸಿತ್ತು. ಆ ನಂತರ ಆತಿಥೇಯ ತಂಡವು ಅಜೇಯ ಓಟವನ್ನು ಮುಂದುರಿಸಿತು.ಶನಿವಾರ ನಡೆದ ಸೆಮಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 62-42 ಅಂಕಗಳಿಂದ ಮಣಿಸಿದ ಭಾರತ ಪುರುಷರ ತಂಡ ಫೈನಲ್‌ಗೆ ತಲುಪಿತು.
19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತಾದರೂ, ಅಂತಿಮವಾಗಿ 78-40ರಿಂದ ಆತಿಥೇಯ ಬಳಗವು ಪಾರಮ್ಯ ಮೆರೆಯಿತು.
