ಶ್ರೀಲಂಕಾ ವಿರುದ್ಧ ಟಿ20 ಸರಣಿ: ಭಾರತಕ್ಕೆ 2-0 ಜಯ

Date:

ಯಶಸ್ವಿ ಜೈಸ್ವಾಲ್‌ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್‌ ಹಾಗೂ ಭಾರತದ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ಟೀಂ ಇಂಡಿಯಾ ತನ್ನದಾಗಿಸಿಕೊಂಡಿತು.

- Advertisement -

ಟಾಸ್‌ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಶ್ರೀಲಂಕಾ ಕುಶಾಲ ಪೆರೆರಾ (53) ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್‌ನಷ್ಟಕ್ಕೆ 161 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 162 ರನ್ ಗಳ ಗುರಿ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪಥುಮ್ ನಿಸಾಂಕ (32; 24ಎ) ಮತ್ತು ಕುಶಾಲ ಮೆಂಡಿಸ್ (10, 11ಎ) ಅವರು ಉತ್ತಮ ಆರಂಭ ನೀಡುವ ಪ್ರಯತ್ನ ಮಾಡಿದರು. ಆದರೆ ನಾಲ್ಕನೇ ಒವರ್‌ನಲ್ಲಿ ಮೆಂಡಿಸ್ ವಿಕೆಟ್ ಗಳಿಸಿದ ಆರ್ಷದೀಪ್ ಸಿಂಗ್  ಜೊತೆಯಾಟವನ್ನು ಮುರಿದರು. ಈ ಹಂತದಲ್ಲಿ ಪಥುಮ್ ಮತ್ತು ಪೆರೆರಾ ಅವರು ಜೊತೆಗೂಡಿದರು. ಎರಡನೇ ವಿಕೆಟ್‌ಗೆ ಜೊತೆಯಾಟದಲ್ಲಿ 54 ರನ್‌ ಸೇರಿಸಿದರು. ಹತ್ತನೇ ಓವರ್‌ನಲ್ಲಿ ಪಥುಮ್ ವಿಕೆಟ್ ಪಡೆದ ರವಿ ಬಿಷ್ಣೋಯಿ ಜೊತೆಯಾಟಕ್ಕೆ ತಡೆಯೊಡ್ಡಿದರು. ಕೊನೆಯಲ್ಲಿ 22 ರನ್‌ಗಳ ಅಂತರದಲ್ಲಿ ಶ್ರೀಲಂಕಾದ 5 ವಿಕೆಟ್‌ಗಳು ಪತನವಾದವು.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024: ಪಿ ವಿ ಸಿಂಧು ಸೇರಿ ಭಾರತದ ಆರು ಕ್ರೀಡಾಪಟುಗಳ ಶುಭಾರಂಭ

ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದ ಕಾರಣ ಓವರ್‌ಗಳನ್ನು ಪರಿಷ್ಕರಿಸಿ ಗೆಲುವಿಗೆ 8 ಓವರ್‌ಗಳಲ್ಲಿ 78 ರನ್‌ಗಳ ಗುರಿ ನೀಡಲಾಯಿತು. ಟೀಂ ಇಂಡಿಯಾ 6.3 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ 81 ರನ್‌ ಗಳಿಸಿ ಗೆಲುವಿನ ಗಡಿ ದಾಟಿತು. ಜೈಸ್ವಾಲ್‌ (30; 15ಎ), ಸೂರ್ಯಕುಮಾರ್ (26, 12ಎ) ಮತ್ತು ಹಾರ್ದಿಕ್‌ ಪಾಂಡ್ಯ (ಅಜೇಯ 22; 9ಎ) ರನ್‌ ಗಳಿಸಿ ಗೆಲುವಿನ ರೂವಾರಿಯಾದರು. ಕೊನೆಯ ಪಂದ್ಯವು ಮಂಗಳವಾರ(ಜುಲೈ 30) ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್:

ಶ್ರೀಲಂಕಾ: 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 161 (ಪಥುಮ್ ನಿಸಾಂಕ 32, ಕುಶಾಲ ಪೆರೆರಾ 53, ಕಮಿಂದು ಮೆಂಡಿಸ್ 26, ಅಸಲಂಕಾ 14, ಅರ್ಷದೀಪ್ ಸಿಂಗ್ 24/2, ಅಕ್ಷರ್ ಪಟೇಲ್ 30ಕ್ಕೆ/2, ರವಿ ಬಿಷ್ಣೋಯಿ 26/3, ಹಾರ್ದಿಕ್ ಪಾಂಡ್ಯ 23/2).

ಭಾರತ: 6.3 ಓವರ್‌ಗಳಲ್ಲಿ 81/3 (ಜೈಸ್ವಾಲ್‌ 30, ಸೂರ್ಯಕುಮಾರ್‌ 26, ಹಾರ್ದಿಕ್‌ ಪಾಂಡ್ಯ ಅಜೇಯ 22). ಫಲಿತಾಂಶ: ಭಾರತಕ್ಕೆ ಡಕ್ವರ್ಥ್‌ ಲೂಯಿಸ್‌ ನಿಯಮದಡಿ 7 ವಿಕೆಟ್‌ಗಳ ಜಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...