ವಿಶ್ವಕಪ್ | ನೆದರ್‌ಲ್ಯಾಂಡ್ಸ್‌ ವಿರುದ್ಧವೂ ಜಯ ಸಾಧಿಸಿ ಟೀಮ್ ಇಂಡಿಯಾ ‘ಅಜೇಯ’

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಏಕದಿನ ವಿಶ್ವಕಪ್‌ನ ಕೊನೆಯ ಲೀಗ್ ಪಂದ್ಯದಲ್ಲೂ ಕೂಡ ನೆದರ್‌ಲ್ಯಾಂಡ್ಸ್‌ ವಿರುದ್ಧವೂ ಟೀಮ್ ಇಂಡಿಯಾ 160 ರನ್‌ಗಳ ಭರ್ಜರಿ ದಾಖಲಿಸುವ ಮೂಲಕ ಲೀಗ್ ಮಟ್ಟದಲ್ಲಿ ಆಡಿರುವ ಎಲ್ಲ 9 ಪಂದ್ಯಗಳಲ್ಲಿ ಯಾವುದೇ ಸೋಲು ಕಾಣದೆ ಅಜೇಯರಾಗಿ ಉಳಿದಿದೆ.

- Advertisement -

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾ, ಕೆ ಎಲ್ ರಾಹುಲ್-ಶ್ರೇಯಸ್ ಅಯ್ಯರ್ ಭರ್ಜರಿ ಶತಕದ ನೆರವಿನಿಂದ ನೆದರ್‌ಲ್ಯಾಂಡ್ಸ್‌ ಗೆಲುವಿಗೆ 411 ರನ್‌ಗಳ ಬೃಹತ್ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಗುರಿಯನ್ನು ಬೆನ್ನತ್ತಿದ ನಾಯಕ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ಡಚ್ಚರ ತಂಡ, 47.5 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 250 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಟೀಮ್ ಇಂಡಿಯಾ 160 ರನ್‌ಗಳ ಭರ್ಜರಿ ದಾಖಲಿಸಿತು.

ನೆದರ್‌ಲ್ಯಾಂಡ್ಸ್‌ ಪರ ಬ್ಯಾಟಿಂಗ್‌ನಲ್ಲಿ ತೇಜ ನಿಡಮನೂರು ಅರ್ಧ ಶತಕ(54 ರನ್) ಗಳಿಸಿ, ರೋಹಿತ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ಉಳಿದಂತೆ ಸೈಬ್ರಾಂಡ್ ಎಂಗಲ್ಬ್ರೆಕ್ಟ್ 45 ರನ್, ಕಾಲಿನ್ ಅಕರ್ಮನ್ 35, ಮ್ಯಾಕ್ಸ್​ ಓಡೌಡ್ 30, ಸ್ಕಾಟ್ ಎಡ್ವರ್ಡ್ಸ್ 17 ರನ್ ಗಳಿಸಿದರು.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬುಮ್ರಾ, ಕುಲ್‌ದೀಪ್ ಯಾದವ್, ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಅಪರೂಪಕ್ಕೆ ಬೌಲಿಂಗ್ ನಡೆಸಿದ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಟೀಮ್ ಇಂಡಿಯಾ ಪರ ಬ್ಯಾಟಿಂಗ್‌ನಲ್ಲಿ ಔಟಾಗದೆ 128*(94 ಎಸೆತ, 5 ಸಿಕ್ಸ್, 10 ಬೌಂಡರಿ) ರನ್ ಗಳಿಸಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

9 ಮಂದಿ ಆಟಗಾರರಿಂದ ಬೌಲಿಂಗ್

ನೆದರ್‌ಲ್ಯಾಂಡ್ಸ್‌ ವಿರುದ್ಧದ ಇಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಇಬ್ಬರನ್ನು ಬಿಟ್ಟರೆ ಒಂಭತ್ತು ಮಂದಿ ಆಟಗಾರರು ಬೌಲಿಂಗ್ ನಡೆಸಿದ್ದು ವಿಶೇಷವಾಗಿತ್ತು. ಶುಭಮನ್ ಗಿಲ್, ಸೂರ್ಯ ಕುಮಾರ್ ಯಾದವ್ ಕೂಡ ಬೌಲಿಂಗ್ ನಡೆಸಿದ್ದು, ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿತು.

ಸೆಮಿಫೈನಲ್‌ನಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಟೀಮ್ ಇಂಡಿಯಾ ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...