ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಇಂದು ನಡೆಯಲಿರುವ ವಿಶ್ವಕಪ್ ಸೆಮಿಫೈನಲ್-1ರಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಕೊಂಡಿದ್ದು, ಬ್ಯಾಟಿಂಗ್ ಆಯ್ದುಕೊಂಡಿದೆ.
INDIA HAVE WON THE TOSS AND THEY’VE DECIDED TO BAT FIRST….!!! pic.twitter.com/HLpVPiNAOR
— Mufaddal Vohra (@mufaddal_vohra) November 15, 2023
ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. 2019ರ ಅಂದರೆ ನಾಲ್ಕು ವರ್ಷಗಳ ಹಿಂದೆ ಇದೇ ನ್ಯೂಜಿಲ್ಯಾಂಡ್ ತಂಡ ಮ್ಯಾಂಚೆಸ್ಟರ್‌ನಲ್ಲಿ ನಡೆದಿದ್ದ ವಿಶ್ವಕಪ್ನಲ್ಲಿ ಭಾರತದ ಚಾಂಪಿಯನ್ ಕನಸನ್ನು ಭಗ್ನಗೊಳಿಸಿತ್ತು. ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿ, ಫೈನಲ್ ತಲುಪಿತ್ತು. ಫೈನಲ್‌ನಲ್ಲಿ ಇಂಗ್ಲೆಂಡ್ ತಂಡ, ನ್ಯೂಝಿಲ್ಯಾಂಡ್ ತಂಡವನ್ನು ರೋಚಕವಾಗಿ ಸೋಲಿಸಿ, ಚಾಂಪಿಯನ್ ಆಗಿತ್ತು.
ನ್ಯೂಝಿಲ್ಯಾಂಡ್ ಹಾಗೂ ಭಾರತದ ಮಧ್ಯೆ ಇಂದು ನಡೆಯುತ್ತಿರುವ ಈ ಬಾರಿಯ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಆಗಿದ್ದು, ನಾಳೆ(ನ.16) ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಮಧ್ಯೆ ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಎರಡನೇ ಸೆಮಿಫೈನಲ್ ನಡೆಯಲಿದೆ. ಸೆಮಿಫೈನಲ್‌ನಲ್ಲಿ ಗೆದ್ದ ತಂಡಗಳ ಮಧ್ಯೆ ನವೆಂಬರ್ 19ರ ಭಾನುವಾರದಂದು ಫೈನಲ್ ಪಂದ್ಯವು ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
🚨 Toss Update from Mumbai 🚨
Rohit Sharma wins the toss and #TeamIndia have elected to bat in Semi-Final 1 🙌
Follow the match ▶️ https://t.co/FnuIu53xGu#CWC23 | #MenInBlue | #INDvNZ pic.twitter.com/HZW9piWA4u
— BCCI (@BCCI) November 15, 2023
ಟೀಮ್ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್‌ದೀಪ್ ಯಾದವ್
ನ್ಯೂಝಿಲ್ಯಾಂಡ್ ತಂಡ:
ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲೇಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
A toss win for Rohit Sharma who opts to bat first in the Semi-Final in Mumbai. An unchanged XI from the last match against Sri Lanka. Follow play LIVE in NZ with @skysportnz. LIVE scoring | https://t.co/aNkBrDiAuv #CWC23 pic.twitter.com/XxS5Idhjll
— BLACKCAPS (@BLACKCAPS) November 15, 2023