ಚೆನ್ನೈ ಟೆಸ್ಟ್ | ಬೃಹತ್‌ ಮುನ್ನಡೆಯತ್ತ ಭಾರತ; 149 ರನ್‌ಗಳಿಗೆ ಬಾಂಗ್ಲಾ ಆಲೌಟ್

Date:

ಚೆನ್ನೈನ ಎಂ ಎ ಚಿದಂಬರಮ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಪ್ರವಾಸಿ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ಸಿಲುಕಿ 149 ರನ್‌ಗಳಿಗೆ ಆಲೌಟ್‌ ಆಗಿದೆ. ಫಾಲೋಆನ್‌ ಅವಕಾಶ ನೀಡದೆ ಎರಡನೇ ಇನಿಂಗ್ಸ್‌ ಆರಂಭಿಸಿರುವ ಭಾರತ ಎರಡನೇ ದಿನದಾಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 81 ರನ್‌ ಗಳಿಸಿ 308 ರನ್‌ಗಳ ಮುನ್ನಡೆ ಪಡೆದಿದೆ.

- Advertisement -

6 ವಿಕೆಟ್ ನಷ್ಟಕ್ಕೆ 339 ರನ್‌ಗಳೊಂದಿಗೆ ಎರಡನೇ ದಿನದಾಟ ಶುರುಮಾಡಿದ ಭಾರತ 91.2 ಓವರ್‌ಗಳಲ್ಲಿ ಆಲೌಟ್‌ ಆಯಿತು. ಟೀಂ ಇಂಡಿಯಾದ 376 ರನ್‌ ಮೊತ್ತಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113), ರವೀಂದ್ರ ಜಡೇಜಾ (86) ಹಾಗೂ ಯಶಸ್ವಿ ಜೈಸ್ವಾಲ್‌ (56) ಪ್ರಮುಖ ಕಾರಣಕರ್ತರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಂತರ ಮೊದಲ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಟೀಂ ಇಂಡಿಯಾದ ಬೌಲರ್‌ಗಳ ಕರಾರುವಾಕ್‌ ದಾಳಿಗೆ 47.1 ಓವರ್‌ಗಳಲ್ಲಿ 149 ರನ್‌ಗಳಿಗೆ ಆಲೌಟ್‌ ಆಗಿ 227 ರನ್‌ ಹಿನ್ನಡೆ ಅನುಭವಿಸಿತು. ಬೂಮ್ರಾ 50 ರನ್‌ಗಳಿಗೆ 4 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು. ಮೊಹಮದ್‌ ಸಿರಾಜ್‌, ಆಕಾಶ್ ದೀಪ್‌ ಹಾಗೂ ರವೀಂದ್ರ ಜಡೇಜಾ ಕೂಡ ತಲಾ 2 ವಿಕೆಟ್‌ ಕಿತ್ತು ಪ್ರವಾಸಿಗರ ಪತನಕ್ಕೆ ಕಾರಣರಾದರು.

ಈ ಸುದ್ದಿ ಓದಿದ್ದೀರಾ? ಬಾಂಗ್ಲಾ ವಿರುದ್ಧದ ಟೆಸ್ಟ್: ಮೊದಲ ಇನಿಂಗ್ಸ್‌ನಲ್ಲಿ 376 ಪೇರಿಸಿದ ಭಾರತ, ಪ್ರವಾಸಿಗರಿಗೆ ಆರಂಭಿಕ ಆಘಾತ

ಬಾಂಗ್ಲಾದೇಶದ ಪರ ಶಕೀಬ್‌(32), ಲಿಟ್ಟನ್(22), ಮೆಹದಿ(27) ಹಾಗೂ ಶಾಂಟೋ(20) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳ್ಯಾರು ಹೆಚ್ಚು ಪ್ರತಿರೋಧ ತೋರಲಿಲ್ಲ.

ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತ 23 ಒವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 81 ರನ್‌ ಗಳಿಸಿದೆ. ಶುಭಮನ್‌ ಗಿಲ್ ಅಜೇಯ 32 ಹಾಗೂ ರಿಷಬ್‌ ಪಂತ್‌ ಅಜೇಯ 12 ರನ್‌ ಗಳಿಸಿ ಆಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...