ಏಕದಿನ ವಿಶ್ವಕಪ್ 2023 | ಭಾರತಕ್ಕೆ ಸವಾಲಿನ ಗುರಿ ನೀಡಿದ ಬಾಂಗ್ಲಾ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತಕ್ಕೆ 257 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

- Advertisement -

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾ ಬ್ಯಾಟಿಂಗ್‌ ಆಯ್ದುಕೊಂಡು ಲಿಟ್ಟನ್‌ ದಾಸ್, ತಂಝೀದ್ ಹಸನ್, ಮುಶ್ಫಿಕರ್ ರಹೀಮ್ ಹಾಗೂ ಮಹಮ್ಮದುಲ್ಲಾ ಅವರ ಸಮಯೋಚಿತ ಆಟದಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್‌ ಪೇರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆರಂಭಿಕರಾಗಿ ಕಣಕ್ಕಿಳಿದ ಲಿಟ್ಟನ್‌ ದಾಸ್ ಹಾಗೂ ತಂಝೀದ್ ಹಸನ್ ಬಿರುಸಿನ ಹೊಡೆತಗಳ ಮೂಲಕ ಮೊದಲ 14 ಓವರ್‌ಗಳಲ್ಲಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. 14.4 ಓವರ್‌ನಲ್ಲಿ ತಂಡದ ಮೊತ್ತ 93 ಆಗಿದ್ದಾಗ ತಂಝೀದ್ ಹಸನ್(51)  ಅವರನ್ನು ಎಲ್‌ಬಿ ಬಲೆಗೆ ಕೆಡವುದರ ಮೂಲಕ ಇವರಿಬ್ಬರ ಜೋಡಿಯನ್ನು ಕುಲದೀಪ್‌ ಯಾದವ್‌ ಮುರಿದರು.

ನಂತರ ಬಂದ ನಜ್ಮುಲ್ ಹೊಸೈನ್ ಶಾಂಟೊ(8), ಮೆಹಿದಿ ಹಸನ್ ಮಿರಾಜ್(3) ಹಾಗೂ ತೌಹಿದ್ ಹೃದಯೋಯ್(16) ಅವರು ಸಿರಾಜ್‌ ಹಾಗೂ ಜಡೇಜಾ ದಾಳಿಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯದೆ ಪೆವಿಲಿಯನ್‌ ಕಡೆ ಮುಖಮಾಡಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಲಿಟ್ಟನ್‌ ದಾಸ್‌ (66) ಔಟಾದ ನಂತರ ತಂಡಕ್ಕೆ ಚೇತರಿಕೆ ನೀಡಿದವರು ಮುಶ್ಫಿಕರ್ ರಹೀಮ್(38) ಹಾಗೂ ಮಹಮ್ಮದುಲ್ಲಾ(46). ಅಂತಿಮವಾಗಿ 50 ಓವರ್‌ಗಳಲ್ಲಿ ಬಾಂಗ್ಲಾದೇಶ 256 ರನ್‌ ಕಲೆ ಹಾಕಿತು.

ಭಾರತದ ಪರ ರವೀಂದ್ರ ಜಡೇಜಾ 38/2, ಮೊಹಮ್ಮದ್ ಸಿರಾಜ್ 52/2, ಜಸ್ಪ್ರೀತ್ ಬುಮ್ರಾ 41/2 ಗಳಿಸಿದರೆ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಗಾಯಗೊಂಡ ಹಾರ್ದಿಕ್, ಕೊಹ್ಲಿ ಬೌಲಿಂಗ್

ಮೂರು ಚೆಂಡುಗಳನ್ನು ಹಾಕಿದ ನಂತರ ಬೌಲಿಂಗ್‌ ಮಾಡುವ ವೇಳೆ ಗಾಯಗೊಂಡ ಮಧ್ಯಮ ವೇಗಿ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊರಗುಳಿದರು. ಹಾರ್ದಿಕ್‌ನ ಬಾಕಿ ಮೂರು ಎಸೆತವನ್ನು ವಿರಾಟ್‌ ಕೊಹ್ಲಿ ಮಾಡಿ 2 ರನ್‌ಗಳಷ್ಟನ್ನೇ ನೀಡಿದರು. ಇದರೊಂದಿಗೆ 6 ವರ್ಷಗಳ ನಂತರ ಕೊಹ್ಲಿ ಬೌಲಿಂಗ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...