ಭಾರತ-ಪಾಕ್‌ ನಡುವೆ ಕ್ರಿಕೆಟ್ ಸಂಬಂಧ ಮುಂದುವರಿಯಬೇಕು: ಸೌರವ್ ಗಂಗೂಲಿ

Date:

ಭಾರತ ಮತ್ತು ಪಾಕಿಸ್ತಾನ ತಂಡಗಳು 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲು ಸಜ್ಜಾಗಿರುವ ಹಿನ್ನೆಲೆಯಲ್ಲಿ, ಎರಡೂ ದೇಶಗಳು ತಮ್ಮ ಕ್ರಿಕೆಟ್ ಸಂಬಂಧವನ್ನು ಮುಂದುವರಿಸಬೇಕು ಎಂಬ ಅಭಿಪ್ರಾಯವನ್ನು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐದ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವ್ಯಕ್ತಪಡಿಸಿದ್ದಾರೆ.

- Advertisement -

“ಕ್ರಿಕೆಟ್ ಮುಂದುವರಿಯಬೇಕು. ಆದರೆ ಪಹಲ್ಗಾಮ್ ಘಟನೆಯಂಥ ಭಯೋತ್ಪಾದಕ ದಾಳಿಗಳು ನಡೆಯಬಾರದು. ಭಾರತ ಭಯೋತ್ಪಾದನೆಯ ವಿರುದ್ಧ ಸದಾ ಬಲವಾದ ನಿಲುವು ಹೊಂದಿದೆ. ಅಂತಹ ದಾಳಿಗಳನ್ನು ಖಂಡಿಸಲೇಬೇಕು. ಆದರೆ, ಅದರ ನಡುವೆ ಕ್ರೀಡೆಗಳು ನಿಲ್ಲಬಾರದು” ಎಂದು ಗಂಗೂಲಿ ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

2025ರ ಏಷ್ಯಾ ಕಪ್ ಟೂರ್ನಿಯ ವೇಳಾಪಟ್ಟಿ ಇತ್ತೀಚೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಬಿಡುಗಡೆ ಮಾಡಿದೆ. ಭಾರತ ಹಾಗೂ ಪಾಕಿಸ್ತಾನವನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಒಮಾನ್ ತಂಡಗಳೊಂದಿಗೆ ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಸೆಪ್ಟೆಂಬರ್ 14ರಂದು ಈ ಎರಡೂ ಬಲಿಷ್ಠ ತಂಡಗಳು ಮೊದಲ ಪಂದ್ಯದಲ್ಲಿ ಸೆಣಸಲಿವೆ. ಎರಡೂ ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆದರೆ, ಸೆಪ್ಟೆಂಬರ್ 21ರಂದು ಮತ್ತೊಮ್ಮೆ ಎದುರಾಗಲಿದೆ. ಫೈನಲ್‌ಗೆ ತಲುಪಿದರೆ, ಭಾರತ–ಪಾಕ್‌ ನಡುವೆ ಮೂರನೇ ಬಾರಿಗೆ ಪಂದ್ಯ ನಡೆಯುವ ಸಾಧ್ಯತೆ ಇದೆ.

ಇದನ್ನು ಓದಿದ್ದೀರಾ? ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ಜಯಗಳಿಸಿದ್ದು ಹೇಗೆ? ಗೆಲುವಿಗೆ ತಂತ್ರ ರೂಪಿಸಿದ್ದು ಹೇಗಿತ್ತು?

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡಲು ಒಪ್ಪಿಕೊಂಡಿರುವುದು ಟೀಕೆಗೆ ಗುರಿಯಾಗಿದೆ. ಆದರೆ ಬಿಸಿಸಿಐನ ನಿರ್ಧಾರವನ್ನು ಬೆಂಬಲಿಸಿದ ಗಂಗೂಲಿ, “ರಾಷ್ಟ್ರೀಯ ಭದ್ರತೆ ಬಗ್ಗೆ, ಭಾರತ ಭಯೋತ್ಪಾದನೆಯ ವಿರುದ್ಧ ಸದಾ ಬಲವಾದ ನಿಲುವು ಹೊಂದಿದೆ. ಅಂತಹ ದಾಳಿಗಳನ್ನು ಖಂಡಿಸಲೇಬೇಕು. ಆದರೆ ಕ್ರೀಡಾಕ್ಷೇತ್ರದಲ್ಲಿ ಸ್ನೇಹದ ಬಾಗಿಲು ಸದಾ ತೆರೆದಿರಬೇಕು” ಎಂದು ಹೇಳಿದ್ದಾರೆ.

ಈ ಬಾರಿ ಏಷ್ಯಾ ಕಪ್‌ನಲ್ಲಿ ಒಟ್ಟು 19 ಪಂದ್ಯಗಳು ನಡೆಯಲಿದ್ದು, 8 ತಂಡಗಳು ಭಾಗವಹಿಸುತ್ತಿವೆ. ಹಿಂದಿನ ಆವೃತ್ತಿಯ ಹೋಲಿಕೆಗಿಂತ ಈ ಬಾರಿ ಎರಡು ತಂಡಗಳು ಹೆಚ್ಚಾಗಿವೆ. ಟೂರ್ನಿಯ ಪಂದ್ಯಗಳು ಯುಎಇನ ಅಬುಧಾಬಿ ಮತ್ತು ದುಬೈನಲ್ಲಿ ನಡೆಯಲಿದ್ದು, ನಿರ್ದಿಷ್ಟ ಪಂದ್ಯಗಳ ಸ್ಥಳಗಳನ್ನು ಇನ್ನೂ ಘೋಷಿಸಲಾಗಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...