ಟಿ20 ವಿಶ್ವಕಪ್ ಫೈನಲ್ | ವಿರಾಟ್ ಕೊಹ್ಲಿ ಅರ್ಧಶತಕ; ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ ನೀಡಿದ ಟೀಮ್ ಇಂಡಿಯಾ

Date:

ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆರಂಭಿಕ ಆಘಾತದ ಹೊರತಾಗಿಯೂ ವಿರಾಟ್ ಕೊಹ್ಲಿಯವರ ಅರ್ಧಶತಕದ ನೆರವಿನಿಂದ 177 ರನ್‌ಗಳ ಸವಾಲಿನ ಗುರಿ ನೀಡಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನಾಯಕ ರೋಹಿತ್ ಶರ್ಮಾ ಬಳಗ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೊತ್ತವು ಪುರುಷರ T20 ವಿಶ್ವಕಪ್ ಫೈನಲ್‌ನಲ್ಲಿ ಇದುವರೆಗೆ ದಾಖಲಾದ ಗರಿಷ್ಠ ಮೊತ್ತವಾಗಿದೆ. 2ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ದಕ್ಷಿಣ ಆಫ್ರಿಕಾವನ್ನು ಬೌಲಿಂಗ್ ದಾಳಿ ಮೂಲಕ ನಿಯಂತ್ರಿಸಬೇಕಿದೆ.

ಟೀಮ್ ಇಂಡಿಯಾಗೆ ಆರಂಭಿಕ ಆಘಾತ

ಮಾರ್ಕೊ ಜಾನ್ಸೆನ್ ಎಸೆದ ಮೊದಲ ಓವರ್‌ನಲ್ಲಿ ಮೂರು ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು. ಬಳಿಕ ಎರಡನೇ ಓವರ್ ಎಸೆದ ಕೇಶವ್ ಮಹಾರಾಜ್ ರೋಹಿತ್ ಶರ್ಮಾ ಹಾಗೂ ರಿಷಭ್ ಪಂತ್ ಅವರ ವಿಕೆಟ್ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.

ಆ ಬಳಿಕ ದಾಳಿಗಿಳಿದ ಕಗೀಸೋ ರಬಾಡಾ ಸೂರ್ಯ ಕುಮಾರ್ ಯಾದವ್ ಅವರ ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತ ನೀಡಿದರು. 4.3 ಓವರ್‌ನ ವೇಳೆ ಟೀಮ್ ಇಂಡಿಯಾ 34 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ವೇಳೆ ಕ್ರೀಸ್‌ನಲ್ಲಿದ್ದ ವಿರಾಟ್ ಕೊಹ್ಲಿ ಜೊತೆಗೆ ಜೊತೆಯಾಟ ನಡೆಸಿದ ಮಧ್ಯಮ ಕ್ರಮಾಂಕದ ಎಡಗೈ ಬ್ಯಾಟರ್, ಸೆಮಿಫೈನಲ್ ಪಂದ್ಯದ ಹೀರೋ ಅಕ್ಷರ್ ಪಟೇಲ್ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ಇನ್ನಿಂಗ್ಸ್ ಕಟ್ಟಿದರು. 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 1 ಬೌಂಡರಿಯ ನೆರವಿನಿಂದ 47 ರನ್‌ ಗಳಿಸಿದ್ದಾಗ ಕ್ವಿಂಟನ್ ಡಿ ಕಾಕ್ ಎಸೆದ ಅದ್ಭುತವಾದ ಥ್ರೋಗೆ ಅನಿರೀಕ್ಷಿತವಾಗಿ ರನೌಟ್ ಆದರು. ಆ ಮೂಲಕ ಈ ಜೋಡಿಯನ್ನು ಬೇರ್ಪಡಿಸಿದರು.

ಆರಂಭಿಕ ಆಘಾತದ ಬಳಿಕ ಉತ್ತಮ ಜೊತೆಯಾಟ ನಡೆಸಿದ ಕೊಹ್ಲಿ-ಅಕ್ಷರ್ ಪಟೇಲ್ ಜೋಡಿಯು 72 ರನ್‌ಗಳ ಜೊತೆಯಾಟ ನಡೆಸಿದರು. ಬಳಿಕ ಕ್ರೀಸ್‌ನಲ್ಲಿ ನಿಂತು ಸಾವಧಾನದ ಆಟವಾಡಿದ ಕಿಂಗ್ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿ ಅರ್ಧಶತಕ ಗಳಿಸಿದರು. ಶಿವಂ ದುಬೆ 27 ರನ್ ಗಳಿಸುವ ಮೂಲಕ ಅಗತ್ಯ ಕೊಡುಗೆ ನೀಡಿದರು. ಕೊನೆಯಲ್ಲಿ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ದಾಖಲಿಸಿ, ಮಾರ್ಕರಮ್ ಬಳಗಕ್ಕೆ ಸವಾಲಿನ ಗುರಿ ನೀಡುವಲ್ಲಿ ಯಶಸ್ವಿಯಾಯಿತು.

ಇದನ್ನು ಓದಿದ್ದೀರಾ? ಮಹಿಳೆಯರ ಟೆಸ್ಟ್ ಕ್ರಿಕೆಟ್ | 603 ರನ್ ಕಲೆ ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ದಕ್ಷಿಣ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ಕೇಶವ್ ಮಹಾರಾಜ್ 23ಕ್ಕೆ 2, ನೋರ್ಜೆ 26ಕ್ಕೆ 2 ವಿಕೆಟ್ ಗಳಿಸಿದರು. ಉಳಿದಂತೆ ರಬಾಡ ಹಾಗೂ ಜಾನ್ಸೆನ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...