ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 318 ರನ್‌ಗಳ ಹಿನ್ನಡೆಯಲ್ಲಿ ಟೀಮ್‌ ಇಂಡಿಯಾ

Date:

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್‌ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ದಾಟಲು ರೋಹಿತ್‌ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ.

- Advertisement -

ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 469 ರನ್‌ಗಳಿಗೆ ಆಲೌಟ್‌ ಮಾಡುವಲ್ಲಿ ಭಾರತದ ಬೌಲರ್‌ಗಳು ಯಶಸ್ವಿಯಾಗಿದ್ದರು. ಆದರೆ ಆ ಬಳಿಕ ಬ್ಯಾಟಿಂಗ್‌ ಆರಂಭಿಸಿದ ಭಾರತ ಆರಂಭದಲ್ಲೇ ಕುಸಿಯಿತು. ತಂಡದ ಮೊತ್ತ 30 ತಲುಪುವಷ್ಟರಲ್ಲಿ ಆರಂಭಿಕರಿಬ್ಬರು ಪೆವಿಲಿಯನ್‌ ಸೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೈಕೊಟ್ಟ ಅಗ್ರ ಕ್ರಮಾಂಕ!

ನಾಯಕ ರೋಹಿತ್‌ ಶರ್ಮಾ 15 ರನ್‌ಗಳಿಸಿದ್ದ ವೇಳೆ ಕಮ್ಮಿನ್ಸ್‌ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಆದರು. ಮುಂದಿನ ಓವರ್‌ನಲ್ಲೇ ಶುಭ್‌ಮನ್‌ ಗಿಲ್‌ (13) ಬೊಲಾಂಡ್‌ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆದರು. ಅನುಭವಿ ಚೆತೇಶ್ವರ ಪುಜಾರ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ಕಾಣಿಗೆ ತಲಾ 14 ರನ್‌.

ಐಪಿಎಲ್‌ ಗುಂಗಿನಲ್ಲೇ ಬ್ಯಾಟ್‌ ಬೀಸಿದ ರವೀಂದ್ರ ಜಡೇಜಾ, ಬೌಂಡರಿಗಳ ಮೂಲಕವೇ ರನ್‌ ಗಳಿಸುತ್ತಾ ಸಾಗಿದರು. ಕೇವಲ 50 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್‌ ಸಿಡಿಸುವ ಮೂಲಕ 48 ರನ್‌ ಕಲೆಹಾಕಿದ್ದ ಜಡ್ಡು, ಲಿಯಾನ್‌ ಸ್ಪಿನ್‌ ಬೌಲಿಂಗ್‌ನಲ್ಲಿ ಸ್ಲಿಪ್‌ನಲ್ಲಿ ಕ್ಯಾಚಿತ್ತು ನಿರಾಸೆಯಿಂದ ನಿರ್ಗಮಿಸಿದರು.

29 ರನ್‌ಗಳಿಸಿರುವ ಅಜಿಂಕ್ಯಾ ರಹಾನೆ ಮತ್ತು 5 ರನ್‌ಗಳಿಸಿರುವ ಎಸ್‌ ಭರತ್‌, ಶುಕ್ರವಾರ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ.

ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮ್ಮಿನ್ಸ್‌, ಸ್ಕಾಟ್‌ ಬೊಲಾಂಡ್‌, ಕ್ಯಾಮರೂನ್‌ ಗ್ರೀನ್‌ಹಾಗೂ ನಾಥನ್‌ ಲಿಯಾನ್‌ ತಲಾ 1 ವಿಕೆಟ್‌ ಪಡೆದರು.

469 ರನ್‌ಗಳಿಗೆ ಆಸ್ಟ್ರೇಲಿಯಾ  ಆಲೌಟ್‌

3 ವಿಕೆಟ್ ನಷ್ಟದಲ್ಲಿ 327 ರನ್ ಗಳಿಂದ ಎರಡನೇ ದಿನದಾಟ ಆರಂಭಿಸಿದ್ದ ಆಸೀಸ್‌ ಪಡೆ, ಗುರುವಾರ, 121.3 ಓವರ್‌ಗಳಲ್ಲಿ 469 ರನ್‌ಗಳಿಗೆ ಆಲೌಟ್‌ ಆಯಿತು.

95 ರನ್‌ಗಳಿಂದ ಗುರುವಾರ ಬ್ಯಾಟಿಂಗ್‌ ಆರಂಭಿಸಿದ್ದ ಸ್ಮಿತ್‌, ಸಿರಾಜ್‌ ಎಸೆದ ದಿನದಾಟದ ಮೊದಲ ಓವರ್‌ನಲ್ಲೇ ಸತತ ಎರಡು ಬೌಂಡರಿಗಳನ್ನು ಬಾರಿಸುವ ಶತಕ ಪೂರ್ತಿಗೊಳಿಸಿದರು.‌ ಟ್ರಾವಿಸ್‌ ಹೆಡ್‌163 ರನ್‌ಗಳಿಸಿ ನಿರ್ಗಮಿಸಿದರು. ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ 48 ರನ್‌ಗಳಿಸಿದ್ದ ವೇಳೆ ಜಡೇಜಾ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂಗೆ ಬಲಿಯಾದರು.

ಟೀಮ್‌ ಇಂಡಿಯಾ ಪರ ಮುಹಮ್ಮದ್‌ ಸಿರಾಜ್‌ 4 ವಿಕೆಟ್‌ ಪಡೆದರೆ, ಮುಹಮ್ಮದ್‌ ಶಮಿ ಮತ್ತು ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...