IND vs ENG 2ND Test: ಜಯದ ಮೂಲಕ ಇತಿಹಾಸ ನಿರ್ಮಿಸಲು ಟೀಂ ಇಂಡಿಯಾಗೆ ಬೇಕು 7 ವಿಕೆಟ್‌

Date:

Advertisements

ಬರ್ಮಿಂಗ್‌ ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸುವ ಕನಸಿನಿಂದ ಏಳು ಹೆಜ್ಜೆ ಹಿಂದೆ ನಿಂತಿದೆ. ಟೀಮ್ ಇಂಡಿಯಾ ಎರಡನೇ ಟೆಸ್ಟ್‌ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್ ತಂಡದ ಏಳು ವಿಕೆಟ್‌ ಪಡೆಯುವ ಅವಶ್ಯಕತೆ ಇದೆ. ನಾಲ್ಕನೇ ದಿನದಾಟದ ಕೊನೆಯ ಅವಧಿಯಲ್ಲಿ ಎರಡನೇ ಇನಿಂಗ್ಸ್‌ ಆರಂಭಿಸಿದ ಆತಿಥೇಯ ತಂಡ 3 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಎರಡನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟವನ್ನು ಭಾರತ ಒಂದು ವಿಕೆಟ್‌ಗೆ 64 ರನ್‌ಗಳಿಂದ ಎರಡನೇ ಇನಿಂಗ್ಸ್ ಮುಂದುವರೆಸಿತು. ಟೀಮ್ ಇಂಡಿಯಾದ ಪರ ನಾಯಕ ಶುಭಮನ್‌ ಗಿಲ್‌ (161 ರನ್) ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದರು. ಅಲ್ಲದೆ ಆಲ್‌ರೌಂಡರ್‌ ರವೀಂದ್ರ ಜಡೇಜಾ (ಅಜೇಯ 69 ರನ್) ಹಾಗೂ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್ ಪಂತ್ (65 ರನ್) ಬಾರಿಸಿ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ 6 ವಿಕೆಟ್‌ಗೆ 427 ರನ್‌ ಕಳೆದುಕೊಂಡಾಗ ಡಿಕ್ಲೇರ್ ಮಾಡಿಕೊಂಡು 608 ರನ್‌ ಬೃಹತ್‌ ಗುರಿ ನೀಡಿತು.

ಎರಡನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟವನ್ನು ಭಾರತ ಒಂದು ವಿಕೆಟ್‌ಗೆ 64 ರನ್‌ಗಳಿಂದ ಎರಡನೇ ಇನಿಂಗ್ಸ್ ಮುಂದುವರೆಸಿತು. ಟೀಮ್ ಇಂಡಿಯಾದ ಪರ ನಾಯಕ ಶುಭಮನ್‌ ಗಿಲ್‌ (161 ರನ್) ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದರು. ಅಲ್ಲದೆ ಆಲ್‌ರೌಂಡರ್‌ ರವೀಂದ್ರ ಜಡೇಜಾ (ಅಜೇಯ 69 ರನ್) ಹಾಗೂ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್ ಪಂತ್ (65 ರನ್) ಬಾರಿಸಿ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ 6 ವಿಕೆಟ್‌ಗೆ 427 ರನ್‌ ಕಳೆದುಕೊಂಡಾಗ ಡಿಕ್ಲೇರ್ ಮಾಡಿಕೊಂಡಿತು.

Advertisements

ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್ | ದ್ವಿಶತಕ ಬಾರಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್

ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 180 ರನ್‌ ಮುನ್ನಡೆ ಸಾಧಿಸಿತ್ತು. ಇದರ ಫಲವಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ಗೆಲುವಿಗೆ 608 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿದೆ. ಮೊದಲ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ 371 ರನ್‌ಗಳನ್ನು ಮೆಟ್ಟಿನಿಂತಿದ್ದರಿಂದ ಟೀಮ್ ಇಂಡಿಯಾ ಈ ಬಾರಿ ಇನ್ನು ಹೆಚ್ಚಿನ ಮೊತ್ತವನ್ನು ಬೆನ್ನಟ್ಟಲು ಗುರಿ ನೀಡಿತು. ಗೆಲುವಿಗೆ 7 ವಿಕೆಟ್‌ 608 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುತ್ತಿರುವ ಇಂಗ್ಲೆಂಡ್ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆರಂಭಿಕ ಆಟಗಾರ ಜಾಕ್ ಕ್ರಾಲಿ (0), ಬೆನ್ ಡಕೆಟ್ (25) ಇಂಗ್ಲೆಂಡ್ ತಂಡದ ಭರವಸೆಯ ಬ್ಯಾಟರ್‌ ಜೋ ರೂಟ್‌ (6) ಟೀಮ್ ಇಂಡಿಯಾದ ಶಿಸ್ತು ಬದ್ಧ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಭಾರತದ ಪರ ಆಕಾಶ್ ದೀಪ್‌ 2, ಮೊಹಮ್ಮದ್‌ ಸಿರಾಜ್‌ 1 ವಿಕೆಟ್‌ ಪಡೆದರು.

ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನಲ್ಲಿ ಇತಿಹಾಸ ನಿರ್ಮಿಸಲು 7 ವಿಕೆಟ್‌ ಬೇಕಿವೆ. ಕೊನೆಯ ದಿನದಾಟದ ಮೊದಲಾವಧಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಈ ಪಂದ್ಯದಲ್ಲಿ ಡ್ರಾ ಸಾಧ್ಯತೆಯೂ ಇದೆ. ಇಂಗ್ಲೆಂಡ್‌ ಸೋಲಿನಿಂದ ಪಾರಾಗಲು ಈ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಹೋರಾಟ ನಡೆಸಲಿದೆ. ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಲು ಭರ್ಜರಿ ಯೋಜನೆ ಮಾಡಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X