ಏಕದಿನ ಸರಣಿ; ಸೋಲಿನ ದಾಖಲೆ ಬರೆದ ಭಾರತ!

Date:

  • 2 ವರ್ಷಗಳಲ್ಲಿ ಭಾರತಕ್ಕೆ ಎದುರಾದ 3ನೇ 10 ವಿಕೆಟ್ ಸೋಲು
  • 234 ಎಸೆತ‌ ಬಾಕಿ ಉಳಿಸಿ ನಿರ್ಣಾಯಕ ಪಂದ್ಯ ಗೆದ್ದ ಆಸ್ಟ್ರೇಲಿಯ

ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ, 10 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ವಿಶಾಖಪಟ್ಟಣದಲ್ಲಿ ನಡೆದ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಭಾರತ ಮುಂದಿಟ್ಟ 117 ರನ್‌ಗಳ ಸುಲಭ ಸವಾಲನ್ನು ಪ್ರವಾಸಿ ಪಡೆ, ಕೇವಲ 11 ಓವರ್‌ಗಳಲ್ಲಿ (121 ರನ್) ಯಾವುದೇ ವಿಕೆಟ್‌ ನಷ್ಟವಿಲ್ಲದೆ ಚೇಸ್‌ ಮಾಡಿತು.‌

ಅತಿ ಹೆಚ್ಚು ಓವರ್‌ಗಳನ್ನು ಬಾಕಿ ಉಳಿಸಿಕೊಂಡು (234 ಎಸೆತ) ಟೀಮ್‌ ಇಂಡಿಯಾ ಸೋತ ಪಂದ್ಯ ಎಂಬ ಕೆಟ್ಟ ದಾಖಲೆ ಭಾನುವಾರ ದಾಖಲಾಗಿದೆ. ಮತ್ತೊಂದೆಡೆ ಅತಿ ಹೆಚ್ಚು ಓವರ್‌ಗಳನ್ನು ಬಾಕಿ ಉಳಿಸಿಕೊಂಡು ಆಸೀಸ್‌ ಪಡೆ ದಾಖಲಿಸಿದ ಮೂರನೇ ಅತಿದೊಡ್ಡ ಗೆಲವು ಇದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತವರು ನೆಲದಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತ ದಾಖಲಿಸಿದ ಕನಿಷ್ಠ ಮೊತ್ತ ಮತ್ತು ಮೊದಲು ಬ್ಯಾಟ್‌ ಮಾಡುವ ವೇಳೆ ಟೀಮ್‌ ಇಂಡಿಯಾ ಒಟ್ಟುಗೂಡಿಸಿದ ಎರಡನೇ ಕನಿಷ್ಠ ಮೊತ್ತ ಇದಾಗಿದೆ.

2019ರಲ್ಲಿ ಹ್ಯಾಮಿಲ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧದ ನ್ಯೂಜಿಲೆಂಡ್‌ ಗೆಲುವಿನ ದಾಖಲೆಯನ್ನು ಆಸ್ಟ್ರೇಲಿಯ ಹಿಂದಿಕ್ಕಿದೆ. ಅಂದಿನ ಪಂದ್ಯದಲ್ಲಿ ಭಾರತ ಮುಂದಿಟ್ಟಿದ 92 ರನ್‌ಗಳ ಗೆಲುವಿನ ಗುರಿಯನ್ನು ಆತಿಥೇಯ ಕಿವೀಸ್‌ ಪಡೆ, 14.4 ಓವರ್‌ಗಳಲ್ಲಿ ಬೆನ್ನಟ್ಟಿತ್ತು. ಇದೀಗ ಆ ದಾಖಲೆಯನ್ನು ಸ್ಟೀವ್‌ ಸ್ಮಿತ್‌ ಪಡೆ ತನ್ನದಾಗಿಸಿಕೊಂಡಿದೆ. ಕಾಕತಾಳೀಯವೆಂದರೆ ಈ ಎರಡೂ ಸೋಲುಗಳು ರೋಹಿತ್ ಶರ್ಮಾ ನಾಯಕತ್ವದಲ್ಲಿ ದಾಖಲಾಗಿವೆ.

ಕಳೆದ ಎರಡು ವರ್ಷಗಳಲ್ಲಿ ಭಾರತಕ್ಕೆ ಎದುರಾದ 3ನೇ 10 ವಿಕೆಟ್ ಸೋಲು ಇದಾಗಿದೆ.

  1. 2021ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ
  2. 2022ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್  ವಿರುದ್ಧ

ಸರಣಿಯ ಮೂರನೇ ನಿರ್ಣಾಯಕ ಪಂದ್ಯ ಮಾರ್ಚ್‌ 22, ಬುಧವಾರದಂದು ಚೆನ್ನೈನಲ್ಲಿ ನಡೆಯಲಿದೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...