ಟೆಸ್ಟ್ ಸರಣಿಯಲ್ಲಿ ವಿಶ್ವ ದಾಖಲೆ ಬರೆದ ಭಾರತ ತಂಡ

Date:

ಇಂಗ್ಲೆಂಡ್‌ನಲ್ಲಿ ನಡೆಯುತ್ತಿದ್ದ ಆ್ಯಂಡರ್ಸನ್-ತೆಂಡುಲ್ಕರ್ ಟ್ರೋಫಿಯ ಟೆಸ್ಟ್‌ ಪಂದ್ಯಾವಳಿ ಶನಿವಾರ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್‌ ತಂಡ ಹೊಸ ದಾಖಲೆ ಬರೆದಿದೆ. ಗರಿಷ್ಠ ರನ್‌ ಗಳಿಸಿ, ವಿಶ್ವದ ಗಮನ ಸೆಳೆದಿದೆ. ಹೆಚ್ಚು ರನ್‌ಗಳಿಸಿದ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ.

- Advertisement -

ಕಳೆದ ಕೆಲವು ದಿನಗಳಿಂದ ಇಂಗ್ಲೆಂಡ್‌ ಮತ್ತು ಭಾರತ ಕ್ರಿಕೆಟ್‌ ತಂಡಗಳ ನಡುವೆ ಆ್ಯಂಡರ್ಸನ್-ತೆಂಡುಲ್ಕರ್ ಟ್ರೋಫಿಗಾಗಿ ಟೆಸ್ಟ್‌ ಟೂರ್ನಿ ನಡೆಯುತ್ತಿತ್ತು. ಶನಿವಾರ, ಟೂರ್ನಿಯ ಕೊನೆಯ ಪಂದ್ಯವಾದ 5ನೇ ಪಂದ್ಯ ನಡೆದಿದೆ. ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಗೆದ್ದು ಬೀಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಟೂರ್ನಿಯಲ್ಲಿ ಭಾರತ ತಂಡವು ಬರೋಬ್ಬರಿ 3,468 ರನ್‌ಗಳು ಗಳಿಸಿದೆ. ಟೆಸ್ಟ್‌ ಸರಣಿಯಲ್ಲಿ ಅಧಿಕ ರನ್‌ಗಳನ್ನು ಗಳಿಸಿದ ತಂಡಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾ ನಂತರದ 2ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದ್ದು, 1989ರಲ್ಲಿ ಇಂಗ್ಲೆಂಡ್‌ ವಿರುದ್ಧವೇ ನಡೆದಿದ್ದ ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡು 3,877 ರನ್‌ ಬಾರಿಸಿತ್ತು.

ಈ ಹಿಂದೆ, ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವೇ ಗಣಿಸಿದ್ದ ಅಧಿಕ ರನ್‌ಗಳ (3,270 ರನ್‌) ದಾಖಲೆಯನ್ನು ಮುರಿದಿದೆ. ಈ ರನ್‌ಗಳನ್ನು 1978-79ರಲ್ಲಿ ವೆಸ್ಟ್‌ಇಂಡೀಸ್‌ ವಿರುದ್ಧ ನಡೆದಿದ್ದ 6 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವು 3,270 ರನ್ ಗಳಿಸಿತ್ತು.

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 10 ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 471, 364, 587, 427/6 ಡಿಕ್ಲೇರ್, 387, 170, 358, 425/4, 224 ಹಾಗೂ 181/3* ರನ್‌ಗಳನ್ನು ಕಲೆ ಹಾಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...