- ಶತಕದಂಚಿನಲ್ಲಿ ಎಡವಿದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ
- 48.5 ಓವರ್‌ಗಳಲ್ಲಿ ಆಲೌಟಾಗಿ 266 ರನ್ ದಾಖಲಿಸಿದ ರೋಹಿತ್ ಪಡೆ
2023ರ ಏಪ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವನ್ನಾಡುತ್ತಿರುವ ಟೀಮ್ ಇಂಡಿಯಾ, 48.5 ಓವರ್‌ಗಳಲ್ಲಿ 266 ರನ್‌ಗಳಿಸಿ ಆಲೌಟ್ ಆಗಿದೆ.
ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಮಳೆಬಾಧಿತ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರವಾಗಿ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಸಮಯೋಚಿತ ಜೊತೆಯಾಟ ನಡೆಸಿದ ಪರಿಣಾಮ, ಈ ಗೌರವಯುತ ಮೊತ್ತವನ್ನು ದಾಖಲಿಸಿದೆ.
ಪಾಕಿಸ್ತಾನದ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಆಟಗಾರರು ಬೇಗನೆ ವಿಕೆಟ್ ಒಪ್ಪಿಸಿದರೂ, ಈ ಜೋಡಿ ಅಮೋಘ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಆಸರೆಯಾದರು.
66 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾದ ಈ ಜೋಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಜವಾಬ್ಧಾರಿಯನ್ನು ವಹಿಸಿಕೊಂಡರು. ಎಚ್ಚರಿಕೆಯಿಂದ ಇನ್ನಿಂಗ್ಸ್‌ಕಟ್ಟಿದ ಈ ಜೋಡಿ 5ನೇ ವಿಕೆಟ್‌ಗೆ ಭರ್ಜರಿ 138 ರನ್‌ಗಳ ಜೊತೆಯಾಟವನ್ನು ನೀಡಿದರು. ಈ ಸಂದರ್ಭದಲ್ಲಿ ಶತಕದತ್ತ ಹೆಜ್ಜೆಯಿಡುತ್ತಿದ್ದ ಇಶಾನ್ ಕಿಶನ್ ಅವರನ್ನು ಹ್ಯಾರಿಸ್ ರೌಪ್ ಔಟ್ ಮಾಡುವ ಮೂಲಕ ಈ ಜೊಡಯನ್ನು ಬೇರಪಡಿಸುವಲ್ಲಿ ಯಶಸ್ವಿಯಾದರು.
ಇಶಾನ್ ಕಿಶನ್ 83 ರನ್‌ಗಳಿಸಿ ಔಟಾದರೆ ಹಾರ್ದಿಕ್ ಪಾಂಡ್ಯ 87 ರನ್‌ಗಳಿಸಿದಾಗ ಶಾಹೀನ್ ಅಫ್ರಿದಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ಇಬ್ಬರು ಆಟಗಾರರು ಕೂಡ ಅದ್ಭುತ ಶತಕಗಳಿಸುವ ಅವಕಾಶವನ್ನು ಕಳೆದುಕೊಂಡರು.
ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ನಾಲ್ವರು ಆಟಗಾರರು 66 ರನ್‌ಗಳಾಗಿದ್ದಾಗ ವಿಕೆಟ್ ಕಳೆದುಕೊಂಡಿದ್ದರು. ಅದರಲ್ಲೂ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಕೇವಲ 43 ರನ್‌ಗಳಾಗಿದ್ದಾಗಲೇ ಪೆವಿಲಿಯನ್ ಸೇರಿದ್ದರು.
ಪಾಕ್ ಪರ ಬೌಲಿಂಗ್‌ನಲ್ಲಿ ವೇಗಿಗಳಾದ ಶಾಹೀನ್ ಅಫ್ರಿದಿ 35 ರನ್ ನೀಡಿ 4 ವಿಕೆಟ್ ಗಳಿಸಿ ಯಶಸ್ವಿಯಾದರೆ, ಹಾರಿಸ್ ರವೂಫ್ ನಸೀಂ ಶಾ ತಲಾ ಮೂರು ವಿಕೆಟ್‌ಗಳನ್ನು ಪಡೆಯುವಲ್ಲಿ ಸಫಲರಾದರು.
ಏಕದಿನ ಕ್ರಿಕೆಟ್ನಲ್ಲಿ ಭಾರತ-ಪಾಕಿಸ್ತಾನ್ ಇದುವರೆಗೆ 132 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು ಕೇವಲ 55 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಮತ್ತೊಂದೆಡೆ ಪಾಕಿಸ್ತಾನ್ ತಂಡವು 73 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇದಾಗ್ಯೂ ಕೊನೆಯ 5 ಏಕದಿನ ಪಂದ್ಯಗಳಲ್ಲಿ ಭಾರತ ತಂಡವು 4 ಬಾರಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ.