ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್ | ವಿಶ್ವಕಪ್‌ ಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳುವುದೆ ಭಾರತ?

Date:

ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಪ್ರಮುಖ ಘಟ್ಟ ತಲುಪಲಿದೆ. ಇಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

- Advertisement -

ಮಧ್ಯಾಹ್ನ 2.30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, 2023ರ ಏಕದಿನ ವಿಶ್ವಕಪ್‌ ಫೈನಲ್‌ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ ಈವರೆಗೆ ಭಾರತ ಮತ್ತು ಆಸೀಸ್‌ ನಡುವೆ 4 ಪಂದ್ಯಗಳು ನಡೆದಿದ್ದು, 2 ರಲ್ಲಿ ಭಾರತ, 1ರಲ್ಲಿ ಆಸ್ಟ್ರೇಲಿಯಾ ಗೆದ್ದರೆ, 2009ರಲ್ಲಿ ಒಂದು ಪಂದ್ಯ ಮಳೆಗೆ ಬಲಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಳಸಿದ ಪಿಚ್‌ನಲ್ಲಿಯೇ ಈ ಪಂದ್ಯ ನಡೆಯಲಿದೆ. ಇನ್ನೂ ದುಬೈನ ಯಾವುದೇ ಅಂಗಳದಲ್ಲಿ ಪಂದ್ಯ ನಡೆದರೂ, ಪಂದ್ಯ ಸಾಗಿದಂತೆ ಪಿಚ್‌ ನಿಧಾನಗೊಳ್ಳುತ್ತದೆ. ಹೀಗಾಗಿ ಸ್ಪಿನ್‌ ಮಾಂತ್ರಿಕರು ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳನ್ನ ಕಣಕ್ಕಿಳಿಸುವ ಸಾಧ್ಯತೆಯಿದೆ. ವರುಣ್ ಚಕ್ರವರ್ತಿ ಜೊತೆಗೆ ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ವೇಗಿ ಮೊಹಮ್ಮದ್ ಶಮಿ ಜೊತೆಗೆ ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್‌ನಲ್ಲಿ ಜೊತೆಯಾಗಲಿದ್ದಾರೆ.

ಇಬ್ಬನಿಯ ಸಮಸ್ಯೆ ಇಲ್ಲದಿರುವ ಕಾರಣ, ಟಾಸ್‌ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸುವ ಸಾಧ್ಯತೆ ಹೆಚ್ಚು. 270-280 ರನ್‌ ಗಳಿಸಿದರೆ ಗೆಲುವು ಸುಲಭವಾಗುವುದು. ಆದರೆ ಸದ್ಯ ಟೀಂ ಇಂಡಿಯಾ ಮೊದಲು ಬ್ಯಾಟ್‌ ಮಾಡಿದರೆ 300 ರನ್‌ ಅಥವಾ ಮೊದಲು ಬೌಲಿಂಗ್‌ ಮಾಡಿದರೆ ಆಸೀಸ್‌ ತಂಡವನ್ನು 250 ರನ್‌ಗಳಿಗೆ ಕಟ್ಟಿಹಾಕುವ ಯೋಚನೆಯಲ್ಲಿದೆ. ಸದ್ಯ ಸತತ 13 ಬಾರಿ ಟಾಸ್‌ ಸೋತಿರುವ ಟೀಂ ಇಂಡಿಯಾ ಈ ಬಾರಿಯಾದರೂ ಟಾಸ್‌ ಗೆಲ್ಲುತ್ತದೆಯೆ ಎಂಬುದನ್ನು ಕಾದುನೋಡಬೇಕಿದೆ.

ಈ ಸುದ್ದಿ ಓದಿದ್ದೀರಾ? 1800 ಕೋಟಿ ಖರ್ಚು ಮಾಡಿ ಕೇವಲ 16 ಗಂಟೆ ಆಟವಾಡಿದ ಪಾಕಿಸ್ತಾನ ತಂಡ

ಟೀಂ ಇಂಡಿಯಾ ಬ್ಯಾಟರ್‌ಗಳು ಫಾರ್ಮ್‌ನಲ್ಲಿ ಇರುವುದರಿಂದ ಆಸೀಸ್ ವಿರುದ್ಧ ಹೆಚ್ಚು ರನ್ ಕಲೆ ಹಾಕುವ ಸಾಧ್ಯತೆಯಿದೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ, ಶುಭಮನ್ ಗಿಲ್, ಆರಂಭದಲ್ಲಿ ಬಿಗ್ ಇನಿಂಗ್ಸ್ ಕಟ್ಟಬೇಕಿದೆ. 3ನೇ ಕ್ರಮಾಂಕದಲ್ಲಿ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದರೆ, ಕನ್ನಡಿಗ ಕೆ ಎಲ್ ರಾಹುಲ್, ಅಕ್ಷರ್‌ ಪಟೇಲ್‌ ಹಾಗೂ ಹಾರ್ದಿಕ್ ಪಾಂಡ್ಯ ಮ್ಯಾಚ್ ಫಿನಿಶರ್‌ಗಳಾಗಿ ಕಣಕ್ಕಿಳಿಯಲು ಕಾದುಕುಳಿತಿದ್ದಾರೆ.

ಟೀಂ ಇಂಡಿಯಾದಂತೆ ಆಸ್ಟ್ರೇಲಿಯಾ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿದೆ. ಅದರಲ್ಲೂ ಐಸಿಸಿ ಟ್ರೋಫಿ ಟೂರ್ನಿಗಳಾದರೆ, ಕಾಂಗರೂಗಳು ಎದುರಾಳಿ ತಂಡಗಳ ವಿರುದ್ಧ ಬಲಿಷ್ಠವಾಗಿ ಸೆಣಸುತ್ತವೆ. ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡಕ್ಕೆ ಟ್ರಾವಿಸ್‌ ಹೆಡ್‌ ಮತ್ತೆ ಕಾಡುತ್ತಾರಾ? ಅಥವಾ ಶಮಿ ಸಾರಥ್ಯ ಬೌಲಿಂಗ್‌ ಪಡೆ ಬಹುಬೇಗನೆ ವಿಕೆಟ್‌ ಪಡೆದು ಪೆವಿಲಿಯನ್‌ಗಟ್ಟುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಉಭಯ ತಂಡಗಳ ಸಂಭಾವ್ಯ ಆಟಗಾರರು

ಭಾರತ:

ರೋಹಿತ್‌ ಶರ್ಮ(ನಾಯಕ), ಶುಭಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ರಿಷಬ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್‌ ಸುಂದರ್‌, ಮೊಹಮ್ಮದ್‌ ಶಮಿ, ಕುಲ್ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ.

ಆಸ್ಟ್ರೇಲಿಯಾ:

ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕೂಪರ್ ಕೊನೊಲಿ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...