ಆಸೀಸ್ ವಿರುದ್ಧ ಐದನೇ ಟೆಸ್ಟ್ | ಟೀಂ ಇಂಡಿಯಾ ಮತ್ತೆ ವೈಫಲ್ಯ: 185ಕ್ಕೆ ಆಲೌಟ್

Date:

ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್‌ – ಗವಾಸ್ಕರ್‌ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿರುವ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲೌಟ್‌ ಆಗಿದೆ. ಈ ಟೆಸ್ಟ್‌ ಪಂದ್ಯದಲ್ಲೂ ಟೀಮ್ ಇಂಡಿಯಾದ ಸ್ಟಾರ್‌ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ಮತ್ತೆ ವಿಫಲರಾದರು.

- Advertisement -

ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಜಸ್ಪ್ರಿತ್ ಬುಮ್ರಾ ಅವರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಟೀಮ್ ಇಂಡಿಯಾಗೆ ಇದು ಮಹತ್ವದ ಪಂದ್ಯವಾಗಿತ್ತು. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ದೃಷ್ಟಿಯಿಂದ ಈ ಪಂದ್ಯ ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿತ್ತು. ಆದರೆ ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಯಶಸ್ವಿ ಜೈಸ್ವಾಲ್‌ (10), ಕೆ ಎಲ್ ರಾಹುಲ್ (4) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ನಾಲ್ಕನೇ ಟೆಸ್ಟ್‌ನಲ್ಲಿ ತಂಡದಿಂದ ಹೊರಗುಳಿದಿದ್ದ ಶುಭಮನ್‌ ಗಿಲ್‌, ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಅವಕಾಶವನ್ನು ಪಡೆದರು. ಆದರೆ ಇವರು ಸಹ 20 ರನ್‌ಗಳ ಮೇಲೆ ದೊಡ್ಡ ಕಾಣಿಕೆ ನೀಡಲಿಲ್ಲ. ಹಳೆಯ ದಾಟಿಯಲ್ಲಿ ಔಟ್ ಆದ ವಿರಾಟ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವ ಸೂಚನೆ ನೀಡಿದ್ದರು. ಆದರೆ 17 ರನ್‌ಗಳಿಸಿ ಔಟಾದರು.

ಈ ಸುದ್ದಿ ಓದಿದ್ದೀರಾ? ನಾಲ್ಕನೇ ಟೆಸ್ಟ್‌ | ಕೈಕೊಟ್ಟ ಬ್ಯಾಟಿಂಗ್: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ ಹೀನಾಯ ಸೋಲು

48 ರನ್‌ಗಳ ಜೊತೆಯಾಟ 72 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಜೋಡಿ ಕೊಂಚ ಆಸರೆ ಆಯಿತು. ಇವರಿಬ್ಬರ ಜೋಡಿ 151 ಎಸೆತಗಳನ್ನು ಎದುರಿಸಿ 48 ರನ್‌ಗಳ ಪೇರಿಸಿತು. ರಿಷಭ್‌ ಪಂತ್‌ 98 ಎಸೆತಗಳಲ್ಲಿ 40 ರನ್‌ ಬಾರಿಸಿ ನಿರ್ಗಮಿಸಿದರು. ರವೀಂದ್ರ ಜಡೇಜಾ 95 ಎಸೆತಗಳಲ್ಲಿ 26 ರನ್‌ ಸಿಡಿಸಿದರು. ಕೆಳ ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್‌ ಸುಂದರ್ 14, ಜಸ್ಪ್ರಿತ್ ಬುಮ್ರಾ 22 ರನ್ ಬಾರಿಸಿ ತಂಡದ ಮೊತ್ತವನ್ನು 180ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾದ ಪರ ವೇಗದ ಬೌಲರ್‌ಗಳು ಬಿಗುವಿನ ದಾಳಿಯನ್ನು ನಡೆಸಿದರು. ಸ್ಕಾಟ್‌ ಬೋಲೆಂಡ್‌ 31 ರನ್‌ ನೀಡಿ 4 ವಿಕೆಟ್‌ ಪಡೆದರೆ, ಮಿಚೆಲ್ ಸ್ಟಾರ್ಕ್‌ 3, ಪ್ಯಾಟ್‌ ಕಮಿನ್ಸ್‌ 2 ವಿಕೆಟ್‌ ಪಡೆದರು, ಲಿಯೋನ್‌ 1 ವಿಕೆಟ್ ಕಬಳಿಸಿದರು.

ಮೊದಲ ಇನಿಂಗ್ಸ್ ಆರಂಭಿಸಿರುವ ಆಸೀಸ್ ಆರಂಭಿಕ ಪತನ ಕಂಡಿದ್ದು 3 ಓವರ್‌ಗಳಲ್ಲಿ 9 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...