ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಎರಡನೇ ದಿನದಾಟದ ವೇಳೆ ಟೀಮ್ ಇಂಡಿಯಾದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾಗೆ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬುಮ್ರಾ ಪಂದ್ಯದ ನಡುವೆಯೇ ಆಸ್ಪತ್ರೆಗೆ ತೆರಳಿದ್ದರಿಂದ, ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ.
2ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವನ್ನು 181 ರನ್‌ಗಳಿಗೆ ಟೀಮ್ ಇಂಡಿಯಾ ಆಲೌಟ್ ಮಾಡಿದೆ. ಈ ನಡುವೆ, ಬುಮ್ರಾ ಕಾಲಿಗೆ ಪೆಟ್ಟು ಬಿದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಸ್ಕ್ಯಾನಿಂಗ್ ಮಾಡಿಸಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.
ಬುಮ್ರಾ ಮೈದಾನ ತೊರೆಯುವ ಮುನ್ನ ಕೊಹ್ಲಿ ಜೊತೆ ಮಾತುಕತೆ ನಡೆಸಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
Jasprit Bumrah has left the SCG: https://t.co/0nmjl6Qp2a pic.twitter.com/oQaygWRMyc
— cricket.com.au (@cricketcomau) January 4, 2025
ಸರಣಿಯಲ್ಲಿ ಬುಮ್ರಾ ಅವರು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಸರಣಿಯ ಐದು ಪಂದ್ಯಗಳಲ್ಲಿ 32 ವಿಕೆಟ್‌ಗಳನ್ನು ಪಡೆದಿದ್ದಾರೆ.