Ind vs AUS | ರೋಹಿತ್ ಸ್ಫೋಟಕ ಶತಕ: ಕೊನೆಯ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Date:

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಮೊದಲೆರಡು ಪಂದ್ಯಗಳನ್ನು ಸೋತು ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಗೆದ್ದು ಭಾರತ ಕ್ಲೀನ್ ಸ್ವೀಪ್ ಮುಜುಗರದಿಂದ ಪಾರಾಯಿತು.

- Advertisement -

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ 237 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಸ್ಟಾರ್‌ ಆಟಗಾರರಾದ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ 38.3 ಓವರ್‌ಗಳಲ್ಲಿ ಅಜೇಯ ಜೊತೆಯಾಟದ ಮೂಲಕ ಗೆಲುವು ತಂದುಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ರೋಹಿತ್ ಶರ್ಮಾ 125 ಎಸೆತಗಳಲ್ಲಿ 121 ರನ್‌ಗಳ ಸ್ಫೋಟಕ ಶತಕ ಬಾರಿಸಿದರೆ, ವಿರಾಟ್ ಕೊಹ್ಲಿ 81 ಎಸೆತಗಳಲ್ಲಿ 74 ರನ್‌ಗಳನ್ನು ಕಲೆಹಾಕಿದರು. ಇಬ್ಬರ ನಡುವಿನ ಎರಡನೇ ವಿಕೆಟ್‌ಗೆ 168 ರನ್‌ಗಳ ಅಜೇಯ ಪಾಲುದಾರಿಕೆ ತಂಡವನ್ನು 38.3 ಓವರ್‌ಗಳಲ್ಲಿ ಗುರಿ ತಲುಪುವಂತೆ ಮಾಡಿತು. ರೋಹಿತ್ ಶರ್ಮಾ (121* ರನ್, 125 ಎಸೆತ, 13 ಬೌಂಡರಿ, 3 ಸಿಕ್ಸರ್) ಮತ್ತು ವಿರಾಟ್ ಕೊಹ್ಲಿ (74* ರನ್, 81 ಎಸೆತ, 7 ಬೌಂಡರಿ) ಎರಡನೇ ವಿಕೆಟ್‌ಗೆ 168 ರನ್‌ಗಳ ಭದ್ರ ಜೊತೆಯಾಟ ನೀಡಿದರು.

237 ರನ್‌ಗಳ ಗುರಿ ಎದುರಿಸಿದ ಭಾರತಕ್ಕೆ ಶುಭಮನ್ ಗಿಲ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದರು. ಇಬ್ಬರು ಮೊದಲ ವಿಕೆಟ್‌ಗೆ 69 ರನ್‌ಗಳ ಜೊತೆಯಾಟ ನೀಡಿದರು. ಗಿಲ್ ಔಟಾದ ನಂತರ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ ಆರಂಭದಿಂದಲೇ ವಿಶ್ವಾಸದ ಆಟ ಪ್ರದರ್ಶಿಸಿದರು. ಹಳೆಯ ದಿನಗಳನ್ನು ನೆನಪಿಸುವಂತೆ ರೋಹಿತ್ ಹಾಗೂ ಕೊಹ್ಲಿ ಅಮೋಘ ಬ್ಯಾಟಿಂಗ್‌ ಮೂಲಕ ಆಸ್ಟ್ರೇಲಿಯಾ ಬೌಲರ್‌ಗಳಿಗೆ ಬೆವರಿಳಿಸಿದರು.

ಇದನ್ನು ಓದಿದ್ದೀರಾ? IND vs AUS | ರೋಚಕ ಹಣಾಹಣಿಯಲ್ಲಿ ಸರಣಿ ಸೋತ ಭಾರತ

ಅಭಿಮಾನಿಗಳ ಆಸೆ ಈಡೇರಿಸಿದ ರೋಹಿತ್-ಕೊಹ್ಲಿ

ಸರಣಿಯ ಆರಂಭದಿಂದಲೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯವರ ಪ್ರದರ್ಶನವೇ ಅಭಿಮಾನಿಗಳ ಗಮನದ ಕೇಂದ್ರವಾಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ಸರಣಿಯ ಫಲಿತಾಂಶ ನಿರ್ಧಾರವಾಗಿದ್ದರೂ, ಕೊನೆಯ ಪಂದ್ಯದಲ್ಲಿ ಈ ಇಬ್ಬರು ದಿಗ್ಗಜರು ತಮ್ಮ ಅದ್ಭುತ ಆಟದ ಮೂಲಕ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವನ್ನೇ ನೀಡಿದರು. ರೋಹಿತ್ ತಮ್ಮ 33ನೇ ಏಕದಿನ ಶತಕವನ್ನು (ಆಸ್ಟ್ರೇಲಿಯಾದಲ್ಲಿ 6ನೇ ಶತಕ) ಬಾರಿಸಿದರೆ, ಕೊಹ್ಲಿ 75ನೇ ಅರ್ಧಶತಕದೊಂದಿಗೆ ಮಿಂಚಿದರು. ಈ ಜೋಡಿಯ 19ನೇ ಶತಕದ ಜೊತೆಯಾಟವು ಭಾರತದ ಗೆಲುವಿಗೆ ಮುನ್ನುಡಿಯಾಯಿತು.

ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆದ್ದುಕೊಂಡಿದ್ದರೂ, ಅಂತಿಮ ಪಂದ್ಯದಲ್ಲಿ ರೋಹಿತ್–ಕೊಹ್ಲಿಯ ಪ್ರದರ್ಶನ ಅಭಿಮಾನಿಗಳಿಗೆ ಅಪಾರ ಸಂತೋಷ ನೀಡಿತು. ಮೂರು ಪಂದ್ಯಗಳಲ್ಲಿ ಉತ್ತಮ ಆಟವಾಡಿದ ಕಾರಣ ಸರಣಿ ಹಾಗೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ರೋಹಿತ್‌ ಶರ್ಮಾ ಪಾಲಾಯಿತು.

  • ಆಸ್ಟ್ರೇಲಿಯಾ: 236 (46.4 ಓವರ್‌)
  • ಭಾರತ: 237/1 (38.3 ಓವರ್‌)
  • ರೋಹಿತ್ ಶರ್ಮಾ: 121(125), ಕೊಹ್ಲಿ: 74(81)
  • ಭಾರತಕ್ಕೆ 9 ವಿಕೆಟ್‌ಗಳಿಂದ ಗೆಲುವು
    • ಫಲಿತಾಂಶ : ಆಸ್ಟ್ರೇಲಿಯಾಕ್ಕೆ 2–1 ಜಯ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...