IND vs AUS | ಆಸೀಸ್‌ನಿಂದ 237 ರನ್‌ಗಳ ಗುರಿ; ಭಾರತದ ಮೊದಲ ವಿಕೆಟ್‌ ಪತನ

Date:

ಸಿಡ್ನಿಯಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ ಹರ್ಷಿತ್ ರಾಣಾ 39‌‌\4 ಬೌಲಿಂಗ್‌ ದಾಳಿಗೆ 46.4 ಓವರ್‌ಗಳಲ್ಲಿ 236 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಆಲೌಟ್ ಆಗಿದೆ. ಆ ಮೂಲಕ ಭಾರತದ ಗೆಲುವಿಗೆ 237 ರನ್‌ಗಳ ಗುರಿ ನೀಡಿದೆ.

- Advertisement -

ಆಸೀಸ್‌ನ ಗುರಿ ಬೆನ್ನಟ್ಟಿರುವ ಭಾರತ 13 ಓವರ್‌ಗಳಲ್ಲಿ ನಾಯಕ ಶುಭ್‌ಮನ್‌ ಗಿಲ್‌ (24) ವಿಕೆಟ್‌ ಕಳೆದುಕೊಂಡು 83 ರನ್‌ ಗಳಿಸಿದೆ. ರೋಹಿತ್‌ ಶರ್ಮಾ 32 ಹಾಗೂ ವಿರಾಟ್‌ ಕೊಹ್ಲಿ 14 ರನ್‌ನೊಂದಿಗೆ ಬ್ಯಾಟಿಂಗ್‌ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕ ಬ್ಯಾಟರ್‌ಗಳಾದ ಮಿಚಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 61 ರನ್‌ಗಳ ಜೊತೆಯಾಟ ಆಡಿದರು. ಈ ಹಂತದಲ್ಲಿ 29 ರನ್ ಗಳಿಸಿದ್ದ ಹೆಡ್ ಸಿರಾಜ್‌ಗೆ ವಿಕೆಟ್ ಒಪ್ಪಿಸಿ ಹೊರನಡೆದರು.

ಇದನ್ನು ಓದಿದ್ದೀರಾ? ಏಕದಿನ ವೃತ್ತಿ ಜೀವನದಲ್ಲಿ ಸತತ 2 ಬಾರಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ಔಟ್; ನಿವೃತ್ತಿ ಮುನ್ಸೂಚನೆಯೇ?

ನಂತರ ಬಂದ ಮ್ಯಾಥ್ಯೂ ಶಾರ್ಟ್ (30 ), ನಾಯಕ ಮಿಚೆಲ್ ಮಾರ್ಷ್ (41) ಹಾಗೂ ರೆನ್‌ಶಾ (56) ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಮಧ್ಯಮ ಕ್ರಮಾಂಕದಲ್ಲಿ ಅಲೆಕ್ಸ್ ಕ್ಯಾರಿ (24) ಹಾಗೂ ಕೂಪರ್ ಕೊನೊಲಿ (23) ರನ್‌ ಸಿಡಿಸುವ ಮೂಲಕ ತಂಡದ ಮೊತ್ತ 200ರ ಗಡಿದಾಟಲು ನೆರವಾದರು. ಅಂತಿಮವಾಗಿ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ಗಳಿಗೆ ಆಲೌಟ್ ಆಯಿತು.

ಭಾರತದ ಪರ ಹರ್ಷಿತ್ ರಾಣಾ 39‌‌‌‌\4 ಹಾಗೂ ವಾಷಿಂಗ್ಟನ್ ಸುಂದರ್ 44\2 ಆಸ್ಟ್ರೇಲಿಯಾ ಕುಸಿತದಲ್ಲಿ ಪ್ರಮುಖ ಪಾತ್ರವಹಿಸಿದರು. ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್, ಅಕ್ಸರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...