ಬಿಸಿಸಿಐ ಇಂಗ್ಲೆಂಡ್ ವಿರುದ್ಧ ಹಿಮಾಚಲ ಪ್ರದೇಶ ಧರ್ಮಶಾಲದಲ್ಲಿ ನಡೆಯುವ ಐದನೇ ಹಾಗೂ ಅಂತಿಮ ಟೆಸ್ಟ್‌ಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೆ ಎಲ್ ರಾಹುಲ್ ಅಲಭ್ಯರಾಗಿದ್ದಾರೆ.
ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ ಎಲ್ ರಾಹುಲ್ ಅವರನ್ನು ಬಿಸಿಸಿಐ ವೈದ್ಯಕೀಯ ತಜ್ಞರ ತಂಡ ನಿಕಟವಾಗಿ ಮೇಲ್ವಿಚಾರಣೆ ನಡೆಸುತ್ತಿದೆ.
ಈ ನಡುವೆ ರಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಅಲಭ್ಯರಾಗಿದ್ದ ಜಸ್‌ಪ್ರೀತ್ ಬುಮ್ರಾ ಧರ್ಮಶಾಲಾದಲ್ಲಿ ನಡೆಯುವ ಐದನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ.
ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸುಂದರ್ ಅವರು ಮಾ.02 ರಂದು ಮುಂಬೈ ವಿರುದ್ಧ ನಡೆಯುವ ರಣಜಿ ಟ್ರೋಫಿ ಪಂದ್ಯದಲ್ಲಿ ಆಡಲಿದ್ದಾರೆ. ರಣಜಿ ಪಂದ್ಯ ಮುಗಿದ ನಂತರ ಅಗತ್ಯವಿದ್ದರೆ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ
ವೇಗದ ಬೌಲರ್ ಮೊಹಮ್ಮದ್ ಶಮಿ ಫೆ.26ರಂದು ಬಲಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಶೀಘ್ರದಲ್ಲೆ ಚೇತರಿಸಿಕೊಂಡು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಅಭ್ಯಾಸ ಮುಂದುವರೆಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಐದನೇ ಟೆಸ್ಟ್ ಆಡುವ ಭಾರತದ ತಂಡ:
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.