ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿರುವ ವಿರಾಟ್ ಕೊಹ್ಲಿ

Date:

ಜನವರಿ 25ರಿಂದ ಭಾರತದಲ್ಲಿ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಂದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ.

- Advertisement -

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ, ”ವಿರಾಟ್ ಕೊಹ್ಲಿ ಅವರು ನಾಯಕ ರೋಹಿತ್ ಶರ್ಮಾ, ತಂಡದ ನಿರ್ವಹಣೆ ಹಾಗೂ ಆಯ್ಕೆ ಸಮಿತಿಗೆ ಈ ವಿಷಯ ತಿಳಿಸಿದ್ದಾರೆ. ದೇಶದ ತಂಡದ ಭಾಗವಹಿಸುವಿಕೆಯಲ್ಲಿ ಅವರಿಗೆ ಸದಾ ಪ್ರಮುಖ ಆದ್ಯತೆಯನ್ನು ನೀಡಲಾಗುತ್ತದೆ. ಕೆಲವೊಂದು ವೈಯಕ್ತಿಕ ಕಾರಣಗಳಿಂದ ಅವರ ಉಪಸ್ಥಿತಿಯನ್ನು ನಿರಾಕರಿಸಲಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ವಿರಾಟ್ ನಿರ್ಧಾರದ ನಂತರವೂ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸವನ್ನು ಬಿಸಿಸಿಐ ವ್ಯಕ್ತಪಡಿಸಿದೆ. ಸೂಕ್ತ ಸಮಯದಲ್ಲಿ ಅವರ ಬದಲಿ ಆಟಗಾರರ ಹೆಸರನ್ನು ಘೋಷಿಸುವುದಾಗಿ ಬಿಸಿಸಿಐ ತಿಳಿಸಿದೆ. ಈಗಾಗಲೇ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ವಿರಾಟ್ ಕೊಹ್ಲಿ ದೇಶೀಯ ಪಿಚ್‌ಗಳಲ್ಲಿ ಉತ್ತಮ ಲಯ ಹೊಂದಿದ್ದಾರೆ. ಮೊದಲ ಪಂದ್ಯ ನಡೆಯುವ ಹೈದರಾಬಾದ್‌ನಲ್ಲಿ ಕೊಹ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಕಳೆದ ವರ್ಷದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ 4 ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಒಂದು ಅರ್ಧ ಶತಕದೊಂದಿಗೆ 172 ರನ್ ಬಾರಿಸಿದ್ದರು.

ಇಂಗ್ಲೆಂಡ್ ವಿರುದ್ಧ ಮೊದಲ ಎರಡು ಟೆಸ್ಟ್ ಪಂದ್ಯವಾಡುವ ಟೀಂ ಇಂಡಿಯಾ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್‌ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್‌ ಅಯ್ಯರ್, ಕೆ ಎಲ್‌ ರಾಹುಲ್ (ವಿಕೆಟ್ ಕೀಪರ್), ಕೆ ಎಸ್ ಭರತ್ (ವಿಕೆಟ್ ಕೀಪರ್), ಧ್ರುವ ಜರುಲ್(ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್‌ದೀಪ್ ಯಾದವ್, ಮೊಹಮದ್‌ ಸಿರಾಜ್, ಮುಕೇಶ್ ಕುಮಾರ್, ಜಸ್‌ಪ್ರೀತ್ ಬೂಮ್ರಾ(ಉಪ ನಾಯಕ), ಆವೇಶ್ ಖಾನ್.

ಪಂದ್ಯಗಳ ವೇಳಾಪಟ್ಟಿ:

ಮೊದಲ ಟೆಸ್ಟ್ – ಹೈದರಾಬಾದ್ , ಜನವರಿ 25 ರಿಂದ 29

ಎರಡನೇ ಟೆಸ್ಟ್ – ವಿಶಾಖ ಪಟ್ಟಣ – ಫೆಬ್ರವರಿ 2 ರಿಂದ 6

ಮೂರನೇ ಟೆಸ್ಟ್ – ರಾಜ್‌ ಕೋಟ್ – ಫೆಬ್ರವರಿ 15 ರಿಂದ 19

ನಾಲ್ಕನೇ ಟೆಸ್ಟ್ – ರಾಂಚಿ – ಫೆಬ್ರವರಿ 23 ರಿಂದ 27

ಐದನೇ ಟೆಸ್ಟ್ – ಧರ್ಮಶಾಲಾ – ಮಾರ್ಚ್‌ 7 ರಿಂದ 11

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...