ಭಾರತ vs ಐರ್ಲೆಂಡ್ ಎರಡನೇ ಟಿ20: ಸರಣಿ ಗೆಲ್ಲುವ ತವಕದಲ್ಲಿರುವ ಬೂಮ್ರಾ ಪಡೆಗೆ ಆರಂಭಿಕ ಆಘಾತ

Date:

ಭಾರತ-ಐರ್ಲೆಂಡ್ ನಡುವೆ ಇಂದು(ಆಗಸ್ಟ್ 20) ಡಬ್ಲಿನ್​ನ ದಿ ವಿಲೇಜ್ ಮೈದಾನದಲ್ಲಿ ಎರಡನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಡಕ್ವರ್ಥ್​ ಲೂಯಿಸ್ ನಿಯಮದ ಅಡಿಯಲ್ಲಿ 2 ರನ್​ಗಳಿಂದ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

ಎರಡನೇ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಐರ್ಲೆಂಡ್‌ ತಂಡದ ನಾಯಕ ಪೌಲ್ ಸ್ಟಿರ್ಲಿಂಗ್ ಕ್ಷೇತ್ರ ರಕ್ಷಣೆ ಆಯ್ದುಕೊಂಡಿದ್ದಾರೆ. ಭಾರತ ತಂಡ ಬ್ಯಾಂಟಿಂಗ್‌ಗೆ ಇಳಿದಿದ್ದು 5 ಓವರ್‌ಗಳಲ್ಲಿ ಎರಡು ವಿಕೆಟ್‌ ಕಳೆದುಕೊಂಡು 37 ರನ್‌ ಪೇರಿಸಿದೆ. ಯಶಸ್ವಿ ಜೈಸ್ವಾಲ್‌ 18, ತಿಲಕ್‌ ವರ್ಮಾ 1 ರನ್‌ ಗಳಿಸಿ ಔಟಾಗಿದ್ದಾರೆ. ಋತುರಾಜ್ ಗಾಯಕ್ವಾಡ್ ಅಜೇಯ 15 ರನ್‌, ಸಂಜು ಸ್ಯಾಮ್ಸನ್‌ 2 ರನ್‌ ಗಳಿಸಿ ಆಡುತ್ತಿದ್ದಾರೆ.

ಮೊದಲ ಪಂದ್ಯದಲ್ಲಿ ಯುವ ಆಟಗಾರರು ಅಚ್ಚುಕಟ್ಟಾಗಿ ಪ್ರದರ್ಶನ ನೀಡಿದ ಹಿನ್ನೆಲೆ ಆಡುವ 11ರ ಬಳಗದಲ್ಲಿ ಬದಲಾವಣೆ ಮಾಡದಿರುವ ನಾಯಕ ಜಸ್​ಪ್ರೀತ್ ಬೂಮ್ರಾ ಗೆಲುವಿನ ತಂಡವನ್ನೇ ಕಣಕ್ಕಿಳಿಸಿದ್ದಾರೆ. ಅಲ್ಲದೆ ವಿಶ್ವಕಪ್ ಸಲುವಾಗಿ ಬೂಮ್ರಾರನ್ನು ಈ ಸರಣಿಗೆ ಕಳುಹಿಸಲಾಗಿದೆ. ಹಾಗಾಗಿ, ಇಂದು ಕೂಡ ಅವರ ಪ್ರದರ್ಶನ ಮೇಲೆ ಕಣ್ಣು ನೆಟ್ಟಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಬ್ಯಾಟಿಂಗ್​​ನಲ್ಲಿ ಆಟಗಾರರಿಗೆ ಅವಕಾಶ ಸಿಕ್ಕಿಲ್ಲ. ಮಳೆ ಬಂದ ಕಾರಣ, ಪ್ರದರ್ಶನ ಹೊರ ಬರಲು ಸಾಧ್ಯವಾಗಿಲ್ಲ. ಆರಂಭಿಕರಾಗಿ ಕಣಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್ ಹಾಗೂ ಋತುರಾಜ್ ಗಾಯಕ್ವಾಡ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಆದರೆ ನಿಧಾನಗತಿಯಲ್ಲಿ ಸ್ಕೋರ್​ ಮಾಡಿದ್ದರು. ಮೊದಲ ವಿಕೆಟ್​ಗೆ 47 ರನ್​ಗಳ ಜೊತೆಯಾಟ ತಂದುಕೊಟ್ಟರು. ಜೈಸ್ವಾಲ್​ ಫುಲ್​ ಫಾರ್ಮ್​​ನಲ್ಲಿದ್ದರೆ, ಋತುರಾಜ್ ತಂಡದ ಉಪನಾಯಕ. ಹೀಗಾಗಿ ಬದಲಾವಣೆ ಅನುಮಾನ.

ವೆಸ್ಟ್​ ಇಂಡೀಸ್ ಸರಣಿಯಲ್ಲಿ ಉತ್ತಮವಾಗಿ ಆಡಿದ್ದ ಎಡಗೈ ಆಟಗಾರ ತಿಲಕ್ ವರ್ಮಾ ಶೂನ್ಯಕ್ಕೆ ಔಟಾಗಿ​ ನಿರಾಸೆ ಮೂಡಿಸಿದ್ದರು. ಆದರೆ, ಈ ಹಿಂದಿನ ಪ್ರದರ್ಶನವನ್ನೇ ಆಧಾರವಾಗಿಟ್ಟುಕೊಂಡು ಮತ್ತೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಗದ ಕಾರಣ ಈ ಪಂದ್ಯದಲ್ಲೂ ಅವರು ಆಡುವುದು ಖಚಿತವಾಗಿದೆ.

ಈ ಸುದ್ದಿ ಓದಿದ್ದೀರಾ? ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಡಿಎಲ್‌ಎಸ್ ನಿಯಮದಂತೆ ಭಾರತಕ್ಕೆ 2 ರನ್‌ಗಳ ಜಯ

ಮೊದಲ ಪಂದ್ಯ ಸೋತಿರುವ ಐರ್ಲೆಂಡ್‌ ತಂಡ ಪಂದ್ಯವನ್ನು ಗೆಲ್ಲಲೇಬೇಕೆಂದು ನಿರ್ಧರಿಸಿದ್ದು, ನಾಯಕ ಪೌಲ್ ಸ್ಟಿರ್ಲಿಂಗ್ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ಉಭಯ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ:

ಭಾರತ:

ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಪ್ರಸಿದ್ಧ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್.

ಐರ್ಲೆಂಡ್:

ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಲೋರ್ಕನ್ ಟಕರ್ (ವಿಕೆಟ್ ಕೀಪರ್‌), ಮಾರ್ಕ್ ಅಡೈರ್, ಬ್ಯಾರಿ ಮೆಕಾರ್ಥಿ, ಬೆಂನ್ ವೈಟ್,ಕ್ರೇಗ್‌ ಯಂಗ್‌ ಮತ್ತು ಕ್ರೇಗ್ ಯಂಗ್.

ಪಂದ್ಯ ಆರಂಭ: ಸಂಜೆ 7.30

ನೇರ ಪ್ರಸಾರ: ಜಿಯೋ ಸಿನಿಮಾ ಆಪ್,ಸ್ಪೋರ್ಟ್ಸ್ 18 ಮತ್ತು ಡಿಡಿ ಸ್ಪೋರ್ಟ್ಸ್‌

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೌತಮ್ ಗಂಭೀರ್ ಬೇಡಿಕೆಗಳಿಗೆ ಬಿಸಿಸಿಐ ಒಪ್ಪಿಗೆ: ಟೀಂ ಇಂಡಿಯಾ ಕೋಚ್ ಸ್ಥಾನ ಬಹುತೇಕ ಖಚಿತ

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್‌ ಆಗಿ ಕಾರ್ಯ...

NOC ಬಳಿಕವಷ್ಟೇ ಲೀಗ್‌ಗಳಲ್ಲಿ ಅವಕಾಶ: T20 ವಿಶ್ವಕಪ್‌ನಿಂದ ಪಾಕಿಸ್ತಾನ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ

ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ...

ಟಿ20 ವಿಶ್ವಕಪ್ | ನೇಪಾಳಕ್ಕೆ ಆಘಾತ; 1 ರನ್‌ನಿಂದ ಸೌತ್ ಆಫ್ರಿಕಾ ವಿರುದ್ಧ ವಿರೋಚಿತ ಸೋಲು

ಏಡೆನ್ ಮಾರ್ಕರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು 115 ರನ್‌ಗಳಿಗೆ ಕಟ್ಟಿ ಹಾಕಿದ್ದ...

ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್...