ಭಾರತ – ನ್ಯೂಜಿಲೆಂಡ್ ಏಕದಿನ ಸರಣಿ: ಸಚಿನ್ ತೆಂಡೂಲ್ಕರ್ ದಾಖಲೆ ಮುರಿವ ಉತ್ಸಾಹದಲ್ಲಿ ಕೊಹ್ಲಿ!

Date:

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ತಂಡ ಸಜ್ಜಾಗಿದೆ. ಮೊದಲ ಪಂದ್ಯ ಆಕ್ಲೆಂಡ್‌ನ ಐತಿಹಾಸಿಕ ಈಡನ್ ಪಾರ್ಕ್ ಮೈದಾನದಲ್ಲಿ ಇಂದು ನಡೆಯಲಿದೆ. ಸಜ್ಜಾಗಿದೆ. ಈ ಮಹತ್ವದ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಅಪರೂಪದ ಮೈಲಿಗಲ್ಲು ತಲುಪುವ ಉತ್ಸಾಹದಲ್ಲಿದ್ದಾರೆ. ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದೇ ಕರೆಸಿಕೊಳ್ಳುವ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಕೊಹ್ಲಿ ಮುರಿಯುವ ಸಾಧ್ಯತೆಗಳಿವೆ.

- Advertisement -

ನ್ಯೂಜಿಲೆಂಡ್ ಮಣ್ಣಿನಲ್ಲಿ ಏಕದಿನ ಕ್ರಿಕೆಟ್ ಆಡಿ ಅತ್ಯಂತ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ತೆಂಡೂಲ್ಕರ್‌ ಇದ್ದರೆ, ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಈವೆರೆಗೆ ಕಿವೀಸ್ ನೆಲದಲ್ಲಿ ಆಡಿರುವ 11 ಏಕದಿನ ಪಂದ್ಯಗಳಿಂದ 46.72 ಸರಾಸರಿಯಲ್ಲಿ ಒಟ್ಟು 514 ರನ್ ಕಲೆಹಾಕಿದ್ದಾರೆ. ಹಾಲಿ ಟೂರ್ನಿಯಲ್ಲಿ ಅವರು ಇನ್ನು ಕೇವಲ 139 ರನ್ ಗಳಿಸಿದರೆ, ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ನ್ಯೂಜಿಲೆಂಡ್‌ನಲ್ಲಿ ಅತ್ಯಂತ ಹೆಚ್ಚು ಏಕದಿನ ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಅಂದಹಾಗೆ, ಸಚಿನ್ ತೆಂಡೂಲ್ಕರ್ ತಮ್ಮ ಕ್ರಿಕೆಟ್‌ ಜರ್ನಿಯಲ್ಲಿ ನ್ಯೂಜಿಲೆಂಡ್‌ ನೆಲದಲ್ಲಿ 18 ಪಂದ್ಯಗಳನ್ನಾಡಿದ್ದು, 652 ರನ್ ಗಳಿಸಿದ್ದಾರೆ. ಸಚಿನ್ ಕಿವೀಸ್ ನೆಲದಲ್ಲಿ 1 ಶತಕ ಮತ್ತು 4 ಅರ್ಧಶತಕಗಳನ್ನು ಬಾರಿಸಿದ್ದು, ಅವರ ಗರಿಷ್ಠ ಮೊತ್ತ 163 ರನ್‌ಗಳಾಗಿವೆ. ಈ ಪಟ್ಟಿಯ ಎರಡನೇ ಸ್ಥಾನದಲ್ಲಿರುವ ಮಾಜಿ ಭರವಸೆಯ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ 12 ಪಂದ್ಯಗಳಲ್ಲಿ 3 ಶತಕ ಹಾಗೂ 2 ಅರ್ಧಶತಕಗಳೊಂದಿಗೆ 598 ರನ್ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಕೊಹ್ಲಿ (514 ರನ್) ಇದ್ದರೆ, ನಂತರದ ಸ್ಥಾನಗಳಲ್ಲಿ ಮಾಜಿ ನಾಯಕರಾದ ಎಂ.ಎಸ್. ಧೋನಿ (13 ಪಂದ್ಯಗಳಿಂದ 505 ರನ್) ಹಾಗೂ ರಾಹುಲ್ ದ್ರಾವಿಡ್ (12 ಪಂದ್ಯಗಳಿಂದ 425 ರನ್) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.

ನ್ಯೂಜಿಲೆಂಡ್‌ನಲ್ಲಿ ಹೆಚ್ಚು ಏಕದಿನ ರನ್ ಬಾರಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿ:

ಆಟಗಾರರುಪಂದ್ಯಗಳುರನ್‌ಗಳುಸರಾಸರಿಗರಿಷ್ಠ ಮೊತ್ತಶತಕ/ಅರ್ಧಶತಕ
ಸಚಿನ್ ತೆಂಡೂಲ್ಕರ್1865238.35163*1/4
ವೀರೇಂದ್ರ ಸೆಹ್ವಾಗ್1259854.36125*3/2
ವಿರಾಟ್ ಕೊಹ್ಲಿ1151446.721231/4
ಎಂ.ಎಸ್. ಧೋನಿ1350572.1484*0/5
ರಾಹುಲ್ ದ್ರಾವಿಡ್1242538.63123*1/2

ಪ್ರಸ್ತುತ ನಡೆಯುತ್ತಿರುವ ಟೂರ್ನಿಯಲ್ಲಿ ಭಾರತ ತಂಡವನ್ನು ಶುಭಮನ್ ಗಿಲ್ ಮುನ್ನಡೆಸುತ್ತಿದ್ದಾರೆ. ಮೊದಲ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ಶುಭಮನ್ ಗಿಲ್, ತಂಡದ ಬ್ಯಾಟಿಂಗ್ ಯೋಜನೆಗಳ ಕುರಿತು ವಿವರಗಳನ್ನು ಹಂಚಿಕೊಂಡಿದ್ದಾರೆ. ಆರಂಭಿಕ ಆಟಗಾರರಾಗಿ ಶುಭಮನ್ ಗಿಲ್ ಮತ್ತು ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಮೂರು ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಲಿದ್ದಾರೆ. ಈ ನಾಲ್ವರೂ ಬಲಗೈ ಬ್ಯಾಟರ್‌ಗಳಾಗಿದ್ದಾರೆ.

5 ಮತ್ತು 6ನೇ ಕ್ರಮಾಂಕಗಳಿಗೆ ತಂಡವು ಸ್ಥಿರವಾದ ಕ್ರಮಾಂಕದ ಬದಲಾಗಿ ‘ಫ್ಲೋಟಿಂಗ್’ (ಪರಿಸ್ಥಿತಿಗೆ ತಕ್ಕಂತೆ ಬದಲಾಗುವ) ತಂತ್ರವನ್ನು ಬಳಸಲಿದೆ. ಪಂದ್ಯದ ಸಂದರ್ಭದಲ್ಲಿ ಎಡಗೈ ಬ್ಯಾಟರ್‌ನ ಅಗತ್ಯ ಬಿದ್ದರೆ ಅಕ್ಷರ್ ಪಟೇಲ್ ಅವರನ್ನು ಮುಂಚಿತವಾಗಿ ಕಳುಹಿಸಲಾಗುತ್ತದೆ ಅಥವಾ ಪಂದ್ಯದ ಸ್ಥಿತಿಗತಿಯನ್ನು ಆಧರಿಸಿ ಕೆ.ಎಲ್ ರಾಹುಲ್ ಅವರನ್ನು ಬ್ಯಾಟಿಂಗ್‌ಗೆ ಕಳಿಸಲಾಗುತ್ತದೆ ಎಂದು ಗಿಲ್ ತಿಳಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕಬ್ಬು ಬೆಲೆಗಾಗಿ ರೈತರ ಹೋರಾಟ; ಕಟಾವಿಗೆ ಹೊರರಾಜ್ಯದ 70 ಸಾವಿರ ಕಾರ್ಮಿಕರ ಆಗಮನ!

ಒಂದೆಡೆ ಕಬ್ಬಿಗೆ ನ್ಯಾಯಯುತ ಬೆಲೆ ದೊರಕಬೇಕೆಂದು ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೆ,...

ಕರ್ನಾಟಕ SIR | ಅಂತಿಮ ಮತಪಟ್ಟಿಯಲ್ಲಿ ಭಾರೀ ಎಡವಟ್ಟು; ‘Husband Husband’, ‘XXX’, ‘????’ಗಳೇ ಮತದಾರರ ಹೆಸರುಗಳು!

ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸುತ್ತೇವೆಂದು ಚುನಾವಣಾ ಆಯೋಗ/ಗ್ಯಾನೇಶ್‌ ಕುಮಾರ್ ಏಕಪಕ್ಷೀಯವಾಗಿ ದೇಶದ ಮೇಲೆ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಪರಿಗಣನೆ ಸಾಧ್ಯತೆ: ಈಶ್ವರ್ ಖಂಡ್ರೆ

ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ (SIR)...