ಭಾರತ-ನ್ಯೂಜಿಲೆಂಡ್‌ ODI: ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್‌; ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ!

Date:

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಗೆದ್ದು ಬೀಗಿದೆ.

- Advertisement -

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ, ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿತು. ಭಾರತೀಯ ಬೌಲರ್‌ಗಳ ಅಬ್ಬರಕ್ಕೆ ಬಸವಳಿದ ನ್ಯೂಜಿಲೆಂಡ್ ಬ್ಯಾಟರ್‌ಗಳು ಸಾಲಾಗಿ ವಿಕೆಟ್ ಒಪ್ಪಿಸಿ 40.2 ಓವರ್‌ಗಳಲ್ಲಿ ಕೇವಲ 185 ರನ್‌ಗಳಿಗೆ ಆಲೌಟ್ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಹುಲ್ ಗಾಂಧಿಯವರನ್ನು ಕೆಣಕಿದವರೇ ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ರಾಜಧಾನಿಯಲ್ಲಿ ಖಾಕಿ-ಕರಿ ಕೋಟ್ ಸಮರ; ಒಳಗಿನ ಹುಳುಕನ್ನು ಬೀದಿಗೆ...

ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ ಆರಂಭವಾದ ಈ ಜಗಳ, ಪೊಲೀಸ್ ಠಾಣೆಯೊಳಗೇ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಮತ್ತು ವರ್ಗಾವಣೆಯಲ್ಲಿ ಅಂತ್ಯಗೊಂಡಿದೆ. ಈ ಹೊತ್ತಿನಲ್ಲಿ ಈ...

ಭಾರತದ ಪರ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ ವೇಗಿ ಅರ್ಷ್‌ದೀಪ್ ಸಿಂಗ್ 10 ಓವರ್‌ಗಳಲ್ಲಿ 70 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದರು. ಅವರಿಗೆ ಸಾಥ್ ನೀಡಿದ ಗುರ್ನೂರ್ ಬ್ರಾರ್ 3 ವಿಕೆಟ್ ಪಡೆದರು. ಅಂಶುಲ್ ಕಾಂಬೋಜ್ 10 ಓವರ್‌ಗಳಲ್ಲಿ 2 ಮೆಡನ್ ಸಹಿತ ಕೇವಲ 22 ರನ್ ನೀಡಿ 2 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ನ್ಯೂಜಿಲೆಂಡ್ ಪರ ಆರಂಭಿಕ ಆಟಗಾರ ಟಿಮ್ ಸೀಫರ್ಟ್ 38 ರನ್ ಮತ್ತು ಅಂತಿಮ ಹಂತದಲ್ಲಿ ಬ್ಲೇರ್ ಟಿಕ್ನರ್ 34 ರನ್ ಗಳಿಸಿದ್ದನ್ನು ಹೊರತುಪಡಿಸಿ ಉಳಿದ ಯಾವೊಬ್ಬ ಬ್ಯಾಟರ್‌ಗೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ.

ನ್ಯೂಜಿಲೆಂಡ್‌ಅನ್ನು 186 ರನ್‌ಗಳಿಗೆ ಕಟ್ಟಿಹಾಕಿದ ಬಳಿಕ, ಬ್ಯಾಟಿಂಗ್‌ಗೆ ಇಳಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. ರೋಹಿತ್ ಶರ್ಮಾ (0) ಶೂನ್ಯಕ್ಕೆ ಔಟಾದರು. ಆದರೆ, ನಾಯಕ ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಜಂಟಿಯಾಗಿ 113 ರನ್‌ಗಳ ಭರ್ಜರಿ ಪ್ರದರ್ಶನ ನೀಡಿದರು. ಗಿಲ್‌ 37 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ ಕೇವಲ 51 ಎಸೆತಗಳಲ್ಲಿ 13 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ಭರ್ಜರಿ 74 ರನ್ ಸಿಡಿಸಿದರು.

ಭಾರತದ ಇನಿಂಗ್ಸ್ ವೇಳೆ ಬಂದ ಮಳೆಯಿಂದಾಗಿ ಪಂದ್ಯವನ್ನು 32 ಓವರ್‌ಗಳಿಗೆ ಕಡಿತಗೊಳಿಸಿ, ಡಿಎಲ್‌ಎಸ್ ನಿಯಮದ ಪ್ರಕಾರ ಭಾರತಕ್ಕೆ 143 ರನ್‌ಗಳ ನೂತನ ಗುರಿಯನ್ನು ನಿಗದಿಪಡಿಸಲಾಯಿತು. ಕೊಹ್ಲಿ ಮತ್ತು ಗಿಲ್ ಔಟಾದ ನಂತರ ಮಧ್ಯಮ ಕ್ರಮಾಂಕದಲ್ಲಿ ಕೆಲ ವಿಕೆಟ್‌ಗಳು ಶೀಘ್ರವಾಗಿ ಉರುಳಿದರೂ, ಭಾರತವು 22.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಸುಲಭವಾಗಿ ಗೆಲುವು ಸಾಧಿಸಿತು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮಲೀಲಾ ಮೈದಾನ ಮತ್ತೆ ಎಚ್ಚರಿಸಿದೆ- ಅಧಿಕಾರ ಶಾಶ್ವತವಲ್ಲ, ಜನರೇ ಅಂತಿಮ!

ಪ್ರತಿಭಟನೆ ಎಂದರೆ ಸರ್ಕಾರವನ್ನು ಉರುಳಿಸುವ ಸಂಚು ಎಂದೇ ಅರ್ಥವಲ್ಲ. ಸರ್ಕಾರವನ್ನು ಪ್ರಶ್ನಿಸುವುದು...

ಬೀದರ್‌ | ₹7 ಕೋಟಿ ವೆಚ್ಚದ ಬಿಟಿ ರಸ್ತೆ ಕಾಮಗಾರಿಗೆ ಶಾಸಕ ರಹೀಂ ಖಾನ್ ಚಾಲನೆ

ಬೀದರ್‌ ನಗರದ ರಸ್ತೆ ಸಂಪರ್ಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು,...

ಸಂತಾನೋತ್ಪತ್ತಿ ದರ ಕುಸಿತ: ಮಕ್ಕಳ ಸಂಖ್ಯೆ ಆಧರಿಸಿ ಚುನಾವಣೆಗೆ ನಿಷೇಧವೇಕೆ; ಸುಪ್ರೀಂ ಪ್ರಶ್ನೆ

ಎರಡಕ್ಕಿಂತ ಹೆಚ್ಚು ಮಕ್ಕಳಿರುವ ವ್ಯಕ್ತಿಗಳನ್ನು ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ಚುನಾವಣೆಗಳಲ್ಲಿ...

ಸೊರಬ | ಕುರಿ ಶೆಡ್‌ ಬೆಂಕಿಗಾಹುತಿ; 150ಕ್ಕೂ ಹೆಚ್ಚು ಕೋಳಿ, ಕುರಿಗಳು ಸುಟ್ಟು ಕರಕಲು!

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್...