ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

Date:

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗಬಹುದು ಎಂಬ ಊಹಾಪೋಹಗಳು ತಳ್ಳಿಹಾಕಲ್ಪಟ್ಟಿವೆ. ಆಯೋಜಕರ ಮೂಲಗಳ ಪ್ರಕಾರ, ಪಂದ್ಯ ನಿಗದಿಯಂತೆ ನಡೆಯಲಿದೆ.

- Advertisement -

ಸೆಪ್ಟೆಂಬರ್‌ 9ರಿಂದ ಆರಂಭವಾಗುವ ಏಷ್ಯಾಕಪ್‌ನಲ್ಲಿ, ಎ ಗುಂಪಿನಲ್ಲಿರುವ ಭಾರತ ತನ್ನ ಮೊದಲ ಪಂದ್ಯವನ್ನು ಸೆ.10ರಂದು ಯುಎಇ ವಿರುದ್ಧ ಆಡಲಿದೆ. ಭಾರತ–ಪಾಕಿಸ್ತಾನ ನಡುವಿನ ಪಂದ್ಯ ಸೆ.14ರಂದು ದುಬೈನಲ್ಲಿ ನಡೆಯಲಿದೆ. 2024ರ ಟಿ20 ವಿಶ್ವಕಪ್‌ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್‌ ಪಂದ್ಯವನ್ನು ಆಡಬಾರದು ಎಂದು ಸಂಸದರೂ ಸೇರಿದಂತೆ ಹಲವರು ಒತ್ತಡ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಮುಕ್ತಾಯವಾದ ವಿಶ್ವ ಲೆಜೆಂಡ್ಸ್‌ ಚಾಂಪಿಯನ್‌ ಶಿಪ್‌ ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಆಡಿರಲಿಲ್ಲ. ಹೀಗಾಗಿ ಏಷ್ಯಾಕಪ್‌ನಲ್ಲೂ ಭಾರತ ಹಿಂದೆ ಸರಿಯಬಹುದು ಎಂಬ ಗೊಂದಲಗಳು ಸೃಷ್ಟಿಯಾಗಿತ್ತು.

ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್‌ನಲ್ಲಿರುವ ನಿಜವಾದ ಸೌಂದರ್ಯ ಹಾಗೂ ಭರವಸೆ ಮೂಡಿಸಿದ ಯಂಗ್ ಇಂಡಿಯಾ ಟೀಮ್

ಪಾಕಿಸ್ತಾನದ ವಿರುದ್ಧ ಭಾರತ ಆಡಬಾರದೆಂದು ರಾಜಕೀಯ ವಲಯದಲ್ಲೂ ಒತ್ತಡವಿದ್ದರೂ, ಏಷ್ಯಾಕಪ್‌ಗೆ ಹಾಗೂ ಪಾಕಿಸ್ತಾನದ ವಿರುದ್ಧ ಪಂದ್ಯವಾಡಲು ಸರ್ಕಾರದ ಅನುಮತಿ ಈಗಾಗಲೇ ದೊರೆತಿದೆ. ದುಬೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಭಾರತ ಹಿಂದೆ ಸರಿಯುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಆ.29ರಿಂದ ಸೆ.7ರವರೆಗೆ ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ ಏಷ್ಯಾಕಪ್‌ ಹಾಕಿ ಟೂರ್ನಿಯಿಂದ ಪಾಕಿಸ್ತಾನ ಭದ್ರತೆಯ ಕಾರಣ ನೀಡಿ ಹಿಂದೆ ಸರಿಯಿತು. ಪಾಕಿಸ್ತಾನ ಆಟಗಾರರಿಗೆ ಭಾರತ ಸರ್ಕಾರ ವೀಸಾ ನೀಡಲು ಸಿದ್ಧವಿದ್ದರೂ, ಪಾಕಿಸ್ತಾನ ತಂಡ ಭಾರತ ಪ್ರವಾಸ ನಿರಾಕರಿಸಿತು ಎಂದು ಹಾಕಿ ಇಂಡಿಯಾ ತಿಳಿಸಿದೆ. ಈ ಹಾಕಿ ಟೂರ್ನಿ 2026ರ ವಿಶ್ವಕಪ್‌ ಅರ್ಹತೆ ಪಡೆಯಲು ಪ್ರಮುಖವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...