ಹಿಂದೆ ಸರಿದ ಆಟಗಾರರು: ಭಾರತ – ಪಾಕಿಸ್ತಾನ ಕ್ರಿಕೆಟ್‌ ಪಂದ್ಯ ರದ್ದು

Date:

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ (WCL) ಇಂದು (ಜುಲೈ 20) ನಡೆಯಬೇಕಿದ್ದ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ ಚಾಂಪಿಯನ್ಸ್ ತಂಡಗಳ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ.

- Advertisement -

ಪಾಕಿಸ್ತಾನ ವಿರುದ್ಧದ ಈ ಪಂದ್ಯದಿಂದ ಭಾರತೀಯ ಆಟಗಾರರು ಹಿಂದೆ ಸರಿದ ಹಿನ್ನಲೆಯಲ್ಲಿ ಪಂದ್ಡಯ ರದ್ದು ಮಾಡಲಾಗಿದೆ. ಇದಕ್ಕೂ ಮುನ್ನ ಜುಲೈ 19 ರಂದು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ ಹಾಗೂ ಶಿಖರ್ ಧವನ್ ತಿಳಿಸಿದ್ದರು. ಇತ್ತ ಐವರು ಪ್ರಮುಖ ಆಟಗಾರರು ಪಂದ್ಯದಿಂದ ಹಿಂದೆ ಸರಿದ ಬೆನ್ನಲ್ಲೇ ಇತರೆ ಆಟಗಾರರು ಕೂಡ ಅಲಭ್ಯರಾಗುವ ಸೂಚನೆ ಲಭಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇದರ ಬೆನ್ನಲ್ಲೇ ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿ ಆಯೋಜಕರು ಸಾಮಾಜಿಕ ಮಾಧ್ಯಮದಲ್ಲಿ ಇಂದು ನಡೆಯಲಿರುವ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.

ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಲೀಗ್​​ನಲ್ಲಿ ನಾವು ಯಾವಾಗಲೂ ಕ್ರಿಕೆಟ್ ಅನ್ನು ಪ್ರೀತಿಸುತ್ತೇವೆ. ನಮ್ಮ ಏಕೈಕ ಗುರಿ ಅಭಿಮಾನಿಗಳಿಗೆ ಕೆಲವು ಒಳ್ಳೆಯ, ಸಂತೋಷದ ಕ್ಷಣಗಳನ್ನು ನೀಡುವುದಾಗಿದೆ. ಈ ವರ್ಷ ಪಾಕಿಸ್ತಾನ ಹಾಕಿ ತಂಡ ಭಾರತಕ್ಕೆ ಬರಲಿದೆ ಎಂಬ ಸುದ್ದಿಯನ್ನು ಕೇಳಿದ ನಂತರ, ಭಾರತ-ಪಾಕಿಸ್ತಾನ ನಡುವಣ ವಾಲಿಬಾಲ್ ಪಂದ್ಯವನ್ನು ನೋಡಿದ ಬಳಿಕ, WCL ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯವನ್ನು ಮುಂದುವರಿಸಲು ನಾವು ಯೋಚಿಸಿದ್ದೆವು.

ಇದನ್ನು ಓದಿದ್ದೀರಾ?: ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕತೆ | ಕಮ್ಮಾರ ವೀರಭದ್ರಾಚಾರಿ ಜೋಯಿಸನಾದುದು

ಈ ಮೂಲಕ ಪ್ರಪಂಚದಾದ್ಯಂತದ ಜನರಿಗೆ ಕೆಲವು ಸಂತೋಷಕರ ನೆನಪುಗಳನ್ನು ಸೃಷ್ಟಿಸಲು ಬಯಸಿದ್ದೆವು. ಆದರೆ ಬಹುಶಃ ಈ ಪ್ರಕ್ರಿಯೆಯಲ್ಲಿ, ನಾವು ಅನೇಕರ ಭಾವನೆಗಳನ್ನು ನೋಯಿಸಿದ್ದೇವೆ ಮತ್ತು ಕೆಲವರ ಭಾವನೆಗಳನ್ನು ಕಲಕಿದ್ದೇವೆ. ಹೀಗಾಗಿ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದು ಮಾಡಲು ನಿರ್ಧರಿಸಿದ್ದೇವೆ ಎಂದು ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯ ಆಯೋಜಕರು ಸಾಮಾಜಿಕ ಮಾಧ್ಯಮದ ಮೂಲಕ ತಿಳಿಸಿದ್ದಾರೆ.

ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಅನೇಕರು ಪಾಕಿಸ್ತಾನ ವಿರುದ್ಧ ಭಾರತೀಯರು ಯಾವುದೇ ಪಂದ್ಯವಾಡಬಾರದು ಸಾಮಾಜಿಕ ಮಾಧ್ಯಮದಲ್ಲಿ ಆಗ್ರಹಿಸಿದ್ದರು.

ಈ ಬಗ್ಗೆ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸುರೇಶ್ ರೈನಾ, ಶಿಖರ್ ಧವನ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್ ಹಾಗೂ ಹರ್ಭಜನ್ ಸಿಂಗ್ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯಲು ನಿರಾಕರಿಸಿದ್ದರು. ಇದೀಗ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿರುವ ಆಟಗಾರರು ಕೂಡ ಪಾಕ್ ವಿರುದ್ಧ ಕಣಕ್ಕಿಳಿಯಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಪಾಕಿಸ್ತಾನ ಚಾಂಪಿಯನ್ಸ್ ಹಾಗೂ ಇಂಡಿಯಾ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದು ಮಾಡಲು ನಿರ್ಧರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...

​’ಕೊನೆಯ ಗಳಿಗೆಯ ಪ್ರಯೋಗಗಳು ಅಪಾಯಕಾರಿ’: ಟೀಮ್ ಇಂಡಿಯಾಗೆ ಯುವರಾಜ್ ಸಿಂಗ್ ಸಲಹೆ

ಮುಂಬರುವ 2027ರ ಏಕದಿನ ವಿಶ್ವಕಪ್‌ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ಕ್ರಿಕೆಟ್ ತಂಡದಲ್ಲಿ...

ಸಚಿನ್ ಐತಿಹಾಸಿಕ ದಾಖಲೆ ಮುರಿದ ಜಿಂಬಾಬ್ವೆಯ ಬ್ರೆಂಡನ್ ಟೇಲರ್

ಜಿಂಬಾಬ್ವೆ ರಾಷ್ಟ್ರೀಯ ಕ್ರಿಕೆಟ್ ತಂಡದ ಅತ್ಯಂತ ಹಿರಿಯ ವಿಕೆಟ್ ಕೀಪರ್ ಹಾಗೂ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್...