IND vs SA Test: 189 ರನ್‌ಗಳಿಗೆ ಭಾರತ ಆಲೌಟ್; 2ನೇ ಇನಿಂಗ್ಸ್‌ನಲ್ಲಿ ಹರಿಣಗಳಿಗೆ ಆರಂಭಿಕ ಆಘಾತ

Date:

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭಾರತ ತಂಡವು 62.2 ಓವರ್‌ಗಳಲ್ಲಿ 189 ರನ್​ಗಳಿಸಿ ಆಲೌಟ್ ಆಗಿ 20 ರನ್‌ ಮುನ್ನಡೆ ಪಡೆದಿದೆ.

- Advertisement -

ಪಂದ್ಯದ 2ನೇ ದಿನವಾದ ಇಂದು ಕೆ ಎಲ್‌ ರಾಹುಲ್‌ (39), ವಾಷಿಂಗ್ಟನ್‌ ಸುಂದರ್ (29), ರಿಷಬ್‌ ಪಂತ್‌ (27) ರನ್‌ ಗಳಿಸಿ ಔಟಾದರು. ನಾಲ್ಕು ರನ್‌ ಗಳಿಸಿದ್ದ ನಾಯಕ ಶುಭಮನ್ ಗಿಲ್ ಗಾಯಗೊಂಡು ನಿವೃತ್ತಿ ಹೊಂದಿದರು. ಆ ಬಳಿಕ ಬಂದ ರಿಷಭ್ ಪಂತ್ 27 ರನ್​ಗಳಿಸಿದರೆ, ರವೀಂದ್ರ ಜಡೇಜಾ 27 ರನ್​ ಬಾರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಆಪ್ಟೋಜೆನೆಟಿಕ್ಸ್ ಸಂಶೋಧನೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ: ನರಕೋಶಗಳಿಗೆ ಸಂಜೀವಿನಿಯಾಗಲಿರುವ...

ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಾರ್ಲ್ ಡಿಸೆರೋತ್, ಜರ್ಮನಿಯ ಬರ್ಲಿನ್ನಿನ ಹಮ್‌ಬೋಲ್ಟ್ ವಿಶ್ವವಿದ್ಯಾಲಯದ ಪೀಟರ್ ಹೆಗೆಮನ್ ಮತ್ತು ಜರ್ಮನಿಯ ವೂರ್ಜ್ಬರ್ಗ್ ವಿಶ್ವವಿದ್ಯಾಲಯದ ಜಾರ್ಜ್ ನಾಗೆಲ್ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 5ರಂದು ಭಾರತೀಯ ಕಾಲಮಾನ...

ಇನ್ನು ಧ್ರುವ್ ಜುರೆಲ್ ಕಲೆಹಾಕಿದ್ದು ಕೇವಲ 14 ರನ್​ ಮಾತ್ರ. ಇದರ ಬೆನ್ನಲ್ಲೇ ಅಕ್ಷರ್ ಪಟೇಲ್ (16) ಕೂಡ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ಕುಲ್ದೀಪ್ ಯಾದವ್, ಜಸ್​​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ರನ್​ ಕಲೆಹಾಕಲಷ್ಟೇ ಶಕ್ತರಾದರು. ದಕ್ಷಿಣ ಆಫ್ರಿಕಾ ಪರ ಸೈಮನ್ ಹರ್ಮರ್ 4 ವಿಕೆಟ್ ಪಡೆದರೆ, ಮಾರ್ಕೊ ಯಾನ್ಸೆನ್ 3 ವಿಕೆಟ್ ಕಬಳಿಸಿ ಮಿಂಚಿದರು.

ಇದನ್ನು ಓದಿದ್ದೀರಾ? ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಾಬರ್ ಅಜಂ

ಎರಡನೇ ಇನಿಂಗ್ಸ್ ಆರಂಭಿಸಿರುವ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ 9 ಓವರ್‌ಗಳಲ್ಲಿ 25 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿತ್ತು.

ಬೃಹತ್ ಮೊತ್ತ ಪೇರಿಸುವ ಇರಾದೆಯೊಂದಿಗೆ ಮೊದಲ ಇನಿಂಗ್ಸ್ ಆರಂಭಿಸಿದ ಪ್ರವಾಸಿ ತಂಡಕ್ಕೆ ಬುಮ್ರಾ ಆಘಾತದ ಮೇಲೆ ಆಘಾತ ನೀಡಿದ್ದರು. ಪರಿಣಾಮ ದಕ್ಷಿಣ ಆಫ್ರಿಕಾ ತಂಡವು ಕೇವಲ 159 ರನ್​ಗಳಿಸಿ ಆಲೌಟ್ ಆಯಿತು. ಭಾರತದ ಪರ ಜಸ್​ಪ್ರೀತ್ ಬುಮ್ರಾ ಕೇವಲ 27 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...