ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್ | ಐನೂರನೇ ಪಂದ್ಯದಲ್ಲಿ ಕೊಹ್ಲಿ ಸ್ಮರಣೀಯ ಶತಕ; ಬೃಹತ್‌ ಮೊತ್ತದತ್ತ ಭಾರತ

Date:

ಭಾರತದ ಸ್ಪೋಟಕ ಆಟಗಾರ ವಿರಾಟ್‌ ಕೊಹ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ್ದಾರೆ. ತಮ್ಮ ಕ್ರಿಕೆಟ್ ವೃತ್ತಿ ಜೀವನದ 500ನೇ ಸ್ಮರಣೀಯ ಪಂದ್ಯದಲ್ಲಿ ಶತಕ ಸಿಡಿಸಿದರು. ಇದು ಕೊಹ್ಲಿಯವರ ಅಂತರರಾಷ್ಟ್ರೀಯ ಕ್ರಿಕೆಟ್‌ನ 76ನೇ ಶತಕವಾದರೆ, ಟೆಸ್ಟ್‌ ಪಂದ್ಯಗಳಲ್ಲಿ 29ನೇ ಶತಕ. ಇದರೊಂದಿಗೆ ವಿರಾಟ್‌ ಕೊಹ್ಲಿ ಟೆಸ್ಟ್‌ನಲ್ಲಿ ಸರ್‌ ಡೊನಾಲ್ಡ್ ಬ್ರಾಡ್ಮನ್‌ ಅವರ ದಾಖಲೆ ಸರಿಗಟ್ಟಿದರು.

ವಿದೇಶಿ ಪಿಚ್‌ನಲ್ಲಿ ಟೆಸ್ಟ್‌ ಶತಕದ ಬರ ಎದುರಿಸುತ್ತಿದ್ದ ಕೊಹ್ಲಿ ಕೊನೆಗೂ ನೂರು ದಾಟಿದ್ದಾರೆ. ಸುಮಾರು ಐದು ವರ್ಷಗಳ ಬಳಿಕ ವಿದೇಶದಲ್ಲಿ ಟೆಸ್ಟ್ ಶತಕ ಪೂರೈಸಿದ್ದಾರೆ. 2018ರ ಡಿಸೆಂಬರ್ ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯದಾಗಿ ವಿದೇಶದಲ್ಲಿ ಶತಕವನ್ನು ಗಳಿಸಿದ್ದರು. ಪರ್ತ್‌ನಲ್ಲಿ ನಡೆದ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 123 ರನ್ ಗಳಿಸಿದ್ದರು.

ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ 34 ವರ್ಷ ವಯಸ್ಸಿನ ಆಟಗಾರನ ಶತಕ ಸಿಡಿಸಿರುವುದು ವಿಶೇಷ. ಇಲ್ಲಿಯವರೆಗೂ ಕೊಹ್ಲಿ ಹೊರತುಪಡಿಸಿ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ಮಹೇಂದ್ರ ಸಿಂಗ್ ಧೋನಿ ಮಾತ್ರ ಭಾರತದ ಪರ ಐನೂರಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಎರಡನೇ ದಿನವಾದ ಇಂದು ಟೀಮ್ ಇಂಡಿಯಾ ತನ್ನ ಬ್ಯಾಟಿಂಗ್‌ ಪ್ರಾಬಲ್ಯ ಮುಂದುವರೆಸಿದೆ. ಭಾರತ ತಂಡ ಟೀ ಬ್ರೇಕ್‌ಗೂ ಮುನ್ನ 98 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 339 ರನ್‌ ಪೇರಿಸಿ ಬೃಹತ್‌ ಮೊತ್ತದತ್ತ ದಾಪುಗಾಲಿಡುವ ನಿರೀಕ್ಷೆಯಲ್ಲಿದೆ.

ವಿರಾಟ್‌ ಕೊಹ್ಲಿ 202 ಚೆಂಡುಗಳಲ್ಲಿ 11 ಬೌಂಡರಿಗಳೊಂದಿಗೆ ಅಜೇಯ 120 ರನ್‌ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ 125 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ ಅಜೇಯ 54 ಗಳಿಸಿ ಆಡುತ್ತಿದ್ದಾರೆ. ಜಡೇಜ ಅವರಿಗೆ ಇದು ಟೆಸ್ಟ್‌ ವೃತ್ತಿ ಜೀವನದ 19ನೇ ಅರ್ಧ ಶತಕವಾಗಿದೆ.        

ಮೊದಲ ದಿನ ಭಾರತ ತಂಡ ಭರ್ಜರಿ ಪ್ರದರ್ಶನ ತೋರಿತ್ತು. ನಾಯಕ ರೋಹಿತ್ ಶರ್ಮಾ(80), ಯಶಸ್ವಿ ಜೈಸ್ವಾಲ್(57) ಆಕರ್ಷಕ ಅರ್ಧಶತಕ ಗಳಿಸಿ ಗಮನ ಸೆಳೆದಿದ್ದರು.

ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಪ್ರದರ್ಶನ ನೀಡಿದ್ದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ 2ನೇ ಟೆಸ್ಟ್‌ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮತ್ತೊಂದು ಅದ್ಭುತ ಇನ್ನಿಂಗ್ಸ್ ಕಟ್ಟಿದರು. ವಿಂಡೀಸ್‌ ಬೌಲಿಂಗ್ ಪಡೆಯನ್ನು ಧೂಳೀಪಟ ಮಾಡಿದರು. ಮೊದಲ ಟೆಸ್ಟ್‌ನಲ್ಲಿ ದ್ವಿಶತಕದ ಜೊತೆಯಾಟವಾಡಿದ್ದ ಈ ಜೋಡಿ, ಈ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟವಾಡಿದರು. ಇವರಿಬ್ಬರ ಆಟದಿಂದ ಮೊದಲ ವಿಕೆಟ್‌ಗೆ 139 ರನ್‌ಗಳು ಹರಿದು ಬಂತು.

ಈ ಸುದ್ದಿ ಓದಿದ್ದೀರಾ? ವಿಂಡೀಸ್‌ ವಿರುದ್ಧ ದ್ವಿತೀಯ ಟೆಸ್ಟ್‌: ಕೊಹ್ಲಿಗೆ 500ನೇ ಪಂದ್ಯ, ಭಾರತಕ್ಕೆ ನೂರನೇ ಟೆಸ್ಟ್

ಸ್ಪೋಟಕ ಆಟವಾಡಿದ ಜೈಸ್ವಾಲ್, 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇವರ 57 ರನ್‌ಗಳ ಆಟದಲ್ಲಿ 9 ಬೌಂಡರಿ, 1 ಸಿಕ್ಸರ್‌ಗಳಿದ್ದವು. ಜೈಸ್ವಾಲ್, ಜೇಸನ್ ಹೋಲ್ಡರ್ ಬೌಲಿಂಗ್‌ನಲ್ಲಿ ಔಟಾಗಿ ಪೆವಿಲಿಯನ್‌ಗೆ ತೆರಳಿದರು. ಇವರ ನಂತರ ನಾಯಕ ರೋಹಿತ್‌ ಶರ್ಮಾ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. 80 ರನ್‌ ಗಳಿಸಿದ್ದಾಗ ವಾರಿಕಾನ್ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು. 143 ಎಸೆತಗಳ ಇವರ ಆಟದಲ್ಲಿ 9 ಬೌಂಡರಿ, 2 ಸಿಕ್ಸರ್‌ಗಳಿದ್ದವು. ಇನ್ನು ಶುಭ್ಮನ್ ಗಿಲ್ 10 ರನ್ ಮತ್ತು ಅಜಿಂಕ್ಯ ರಹಾನೆ 8 ರನ್ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಭುವಿ ಬೌಲಿಂಗ್ ಮ್ಯಾಜಿಕ್: ರಾಜಸ್ಥಾನ ವಿರುದ್ಧ ಹೈದರಾಬಾದ್‌ಗೆ 1 ರನ್‌ಗಳ ರೋಚಕ ಜಯ

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್...

ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಭಾರತೀಯ...

ಐಪಿಎಲ್ | ಚೆನ್ನೈಗೆ ತವರಲ್ಲೇ ಸೋಲುಣಿಸಿದ ಪಂಜಾಬ್ ಕಿಂಗ್ಸ್‌; ಪ್ಲೇ ಆಫ್‌ ಆಸೆ ಜೀವಂತ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 49ನೇ ಪಂದ್ಯದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಸ್ಟಾರ್‌ ಕ್ರಿಕೆಟಿಗರು ಟೂರ್ನಿಯಿಂದ ಔಟ್

ಜೂನ್‌ 2ರಿಂದ ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಆರಂಭವಾಗುವ ಟಿ20 ವಿಶ್ವಕಪ್‌ಗೆ...