ಭಾರತ-ವೆಸ್ಟ್ ಇಂಡೀಸ್ ಟೆಸ್ಟ್ | ಮೊದಲ ದಿನದಾಟ ಅಂತ್ಯ, ಭಾರತ ಮೇಲುಗೈ, ರಾಹುಲ್‌ ಅರ್ಧಶತಕ

Date:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ದೈತ್ಯ ವಿಂಡೀಸ್ ವಿರುದ್ಧ ಭಾರತ ಸಂಪೂರ್ಣ ಮೇಲುಗೈ ಸಾಧಿಸಿದೆ.

- Advertisement -

ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ವಿಂಡೀಸ್ ತಂಡ ಭಾರತದ ಮಾರಕ ಬೌಲಿಂಗ್‌ ಮುಂದೆ ಮಂಡಿಯೂರಿ, ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 162 ರನ್ನ್‌ ಗಳಿಸಿ, ತನ್ನ ಎಲ್ಲ ವಿಕೇಟ್‌ಗಳನ್ನು ಕಳೆದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 121 ರನ್ ಕಲೆಹಾಕಿದೆ. ಭಾರತದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 36 ರನ್ ಗಳಿಸಿ ಔಟಾದರೆ, ಸಾಯಿ ಸುದರ್ಶನ್ ಕೇವಲ 7 ರನ್ ಗಳಿಸಿ ಔಟಾಗಿ ಮತ್ತೆ ನಿರಾಶೆ ಮೂಡಿಸಿದರು. ವಿಂಡೀಸ್ ಪರ ನಾಯಕ ರೋಸ್ಟನ್ ಚೇಸ್ ಮತ್ತು ಜೇಡನ್ ಸೀಲ್ಸ್ ತಲಾ 1 ವಿಕೆಟ್ ಪಡೆದಿದ್ದಾರೆ.

ತಾಳ್ಮೆಯ ಆಟ ಮುಂದುವರೆಸಿರುವ ಕನ್ನಡಿಗ ಕೆ ಎಲ್ ರಾಹುಲ್ (53 ರನ್) ಅರ್ಧಶತಕ ಗಳಿಸಿದ್ದಾರೆ. ಅವರಿಗೆ ಉತ್ತಮ ಸಾಥ್ ನೀಡಿರುವ ನಾಯಕ ಶುಭ್ ಮನ್ ಗಿಲ್ 18 ರನ್ ಗಳಿಸಿ ಅಜೇಯರಾಗಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...