ಐರ್ಲೆಂಡ್‌ ವಿರುದ್ಧ ಟಿ20 ಸರಣಿ| ಗೆದ್ದು ಬೀಗಿದ ಭಾರತ;ಬೂಮ್ರಾ ಸಾರಥ್ಯಕ್ಕೆ 2-0 ಗೆಲುವು

Date:

ಐರ್ಲೆಂಡ್‌ ವಿರುದ್ಧದ 2ನೇ ಟಿ20 ಪಂದ್ಯವನ್ನು ಗೆಲ್ಲುವುದರ ಮೂಲಕ ಜಸ್‌ಪ್ರೀತ್‌ ಬೂಮ್ರಾ ಸಾರಥ್ಯದ ಭಾರತ ತಂಡ 3 ಪಂದ್ಯಗಳ ಸರಣಿಯಲ್ಲಿ 2-0 ಜಯಗಳಿಸುವುದರೊಂದಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

- Advertisement -

ಟೀಂ ಇಂಡಿಯಾ ನೀಡಿದ 186 ರನ್‌ಗಳ ಸವಾಲನ್ನು ಬೆನ್ನಟ್ಟಿದ ಪೌಲ್ ಸ್ಟಿರ್ಲಿಂಗ್ ನೇತೃತ್ವದ ಐರ್ಲೆಂಡ್‌ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್‌ಗಳಷ್ಟನ್ನೇ ಗಳಿಸುವುದರೊಂದಿಗೆ 33 ರನ್‌ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆರಂಭಿಕ ಆಟಗಾರ ಆಂಡ್ರ್ಯೂ ಬಾಲ್ಬಿರ್ನಿ 72 ರನ್‌(51 ಎಸೆತ,4 ಸಿಕ್ಸರ್, 5 ಬೌಂಡರಿ) ಬಾರಿಸಿದ್ದನ್ನು ಬಿಟ್ಟರೆ ಉಳಿದವರ್ಯಾರು ಪ್ರತಿರೋಧ ತೋರಲಿಲ್ಲ.

ಈ ಸುದ್ದಿ ಓದಿದ್ದೀರಾ? ಭಾರತ vs ಐರ್ಲೆಂಡ್ ಎರಡನೇ ಟಿ20: ಸರಣಿ ಗೆಲ್ಲುವ ತವಕದಲ್ಲಿರುವ ಬೂಮ್ರಾ ಪಡೆಗೆ ಆರಂಭಿಕ ಆಘಾತ

ಭಾರತದ ಪರ ನಾಯಕ ಜಸ್‌ಪ್ರೀತ್‌ ಬೂಮ್ರಾ 15/2, ಕನ್ನಡಿಗ ಪ್ರಸಿದ್ಧ ಕೃಷ್ಣ 29/2 ಹಾಗೂ ಸ್ಪಿನ್ನರ್ ರವಿ ಬಿಷ್ಣೋಯಿ 37/2 ವಿಕೆಟ್ ಕಬಳಿಸುವುದರೊಂದಿಗೆ ಗೆಲುವಿನ ಪಾಲುದಾರರಾದರು.

ಋತುರಾಜ್,ರಿಂಕು, ಸಂಜು ಸ್ಯಾಮ್ಸನ್‌ ಉತ್ತಮ ಆಟ

ಇದಕ್ಕೂ ಮೊದಲು ದಿ ವಿಲೇಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡ ಋತುರಾಜ್‌ ಸಿಂಗ್‌(58),ಸಂಜು ಸ್ಯಾಮ್ಸನ್‌ (40) ಹಾಗೂ ರಿಂಕುಸಿಂಗ್‌ (38) ರನ್‌ಗಳ ಭರ್ಜರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್‌ ಪೇರಿಸಿತು.

ಆಕ್ರಮಣಕಾರಿ ಆಟವಾಡಿದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್‌ (18) ದೊಡ್ಡ ಹೊಡೆತಕ್ಕೆ ಕೈಹಾಕಿ ನಿರಾಶೆ ಅನುಭವಿಸಿದರು. ಆದರೆ, ಮತ್ತೊಬ್ಬ ಯುವ ಆರಂಭಿಕ ಋತುರಾಜ್‌ ಗಾಯಕ್ವಾಡ್‌, 43 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್‌ ನೆರವಿನೊಂದಿಗೆ 58 ರನ್‌ ಬಾರಿಸಿ ತಂಡದ ದೊಡ್ಡ ಮೊತ್ತಕ್ಕೆ ಭದ್ರ ಅಡಿಪಾಯ ಹಾಕಿದರು.

ಇನಿಂಗ್ಸ್‌ ಮಧ್ಯದಲ್ಲಿ ಬ್ಯಾಟ್‌ ಮಾಡಿದ ಸಂಜು ಸ್ಯಾಮ್ಸನ್‌, 26 ಎಸೆತಗಳಲ್ಲಿ 40 ರನ್‌ ಸಿಡಿಸಿ ತಂಡದ ರನ್‌ ಗಳಿಕೆಯ ವೇಗ ಹೆಚ್ಚಿಸಿಕೊಟ್ಟರು. ಅಂತಿಮ ಓವರ್‌ಗಳಲ್ಲಿ ಸ್ಪೋಟಕ ಆಟವಾಡಿದ ರಿಂಕು ಸಿಂಗ್‌ (21 ಎಸೆತಗಳಲ್ಲಿ 38 ರನ್‌,3 ಸಿಕ್ಸರ್‌,2 ಬೌಂಡರಿ) ಮತ್ತು ಶಿವಂ ದುಬೇ (16 ಎಸೆತಗಳಲ್ಲಿಅಜೇಯ 22 ರನ್) ತಂಡದ ಮೊತ್ತವನ್ನು 180ರ ಗಡಿ ದಾಟಿಸಿದರು. ಐರ್ಲೆಂಡ್ ಪರ ವೇಗಿ ಬ್ಯಾರಿ ಮೆಕಾರ್ತಿ ಎರಡು ವಿಕೆಟ್‌ ಪಡೆದರು.

ವೇಗವಾಗಿ 38 ರನ್‌ ಸಿಡಿಸಿದ ರಿಂಕು ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...