ಎರಡನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ 106 ರನ್‌ಗಳ ಗೆಲುವು ಸಾಧಿಸಿದ ಟೀಮ್ ಇಂಡಿಯಾ; ಸರಣಿ ಸಮಬಲ

Date:

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 106 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. 399 ರನ್‌ಗಳ ಗುರಿಯೊಂದಿಗೆ 2ನೇ ಇನಿಂಗ್ಸ್ ಬೆನ್ನಟ್ಟಿದ ಆಂಗ್ಲ ಪಡೆ ಭಾರತದ ಬೌಲರ್‌ಗಳ ಸಾಂಘಿಕ ಹೋರಾಟದಿಂದ 69.2 ಓವರ್‌ಗಳಲ್ಲಿ 292 ರನ್‌ಗಳಿಗೆ ಆಲೌಟ್‌ ಆಯಿತು.

- Advertisement -

ವಿಶಾಖ ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ನಾಲ್ಕನೇ ದಿನದಲ್ಲಿ ಬೂಮ್ರಾ 43/3, ಆರ್‌ ಅಶ್ವಿನ್ 72/3, ಮುಖೇಶ್. ಕುಲ್‌ದೀಪ್‌ ಹಾಗೂ ಅಕ್ಸರ್‌ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಜಾಕ್‌ ಕ್ರಾಲಿ 74, ಟಾಮ್‌ ಹಾರ್ಟ್ಲಿ 36, ಬೆನ್‌ ಫೋಕ್ಸ್ 36 ರನ್‌ ಗಳಿಸಿದ್ದನ್ನು ಬಿಟ್ಟರೆ ಉಳಿದವರು ಹೆಚ್ಚಿನ ಪ್ರತಿರೋಧ ತೋರಲಿಲ್ಲ. ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಉಭಯ ತಂಡಗಳು 1-1 ಪಂದ್ಯ ಗೆಲುವು ಸಾಧಿಸಿದ್ದು, ಸರಣಿ ಸಮಬಲಗೊಂಡಿದೆ.

ಎರಡನೇ ಇನಿಂಗ್ಸ್‌ನಲ್ಲಿ ಗಿಲ್ ಅಮೋಘ ಶತಕದ ನೆರವಿಂದ ಭಾರತವು ಆಂಗ್ಲರಿಗೆ 399 ರನ್‌ಗಳ ಬೃಹತ್ ಗುರಿ ನೀಡಿತು. ಮೂರನೇ ದಿನದಾಟದ ಅಂತ್ಯಕ್ಕೆ ಆರಂಭಿಕ ಜೋಡಿಯಾದ ಜಾಕ್ ಕ್ರಾಲೆ ಮತ್ತು ಬೆನ್ ಡಕೆಟ್ ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿದ್ದರು. ಹೀಗಾಗಿ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ 332 ರನ್‌ ಗುರಿ ಪಡೆಯಿತು. ಭಾರತದ ಸಂಘಟಿದ ಪ್ರದರ್ಶನಕ್ಕೆ ಮಣಿದ ಆಂಗ್ಲರು ಮೇಲಿಂದ ಮೇಲೆ ವಿಕೆಟ್‌ ಕಳೆದುಕೊಂಡು ಪರದಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಮೂರನೇ ದಿನದಾಟದಲ್ಲೇ ಬೆನ್‌ ಡಕೆಟ್‌ 28 ರನ್‌ ಗಳಿಸಿ ಔಟಾಗಿದ್ದರು. ನಾಲ್ಕನೇ ದಿನದ ಮೊದಲ ಅವಧಿಯಲ್ಲಿ, 23 ರನ್‌ ಗಳಿಸಿದ್ದ ರೆಹಾನ್‌ ಅಹ್ಮದ್‌ ಎಲ್‌ ಬಲೆಗೆ ಬಿದ್ದರು. ಅಕ್ಸರ್‌ ಪಟೇಲ್‌ ಭಾರತಕ್ಕೆ ಮೊದಲ ಮುನ್ನಡೆ ತಂದುಕೊಟ್ಟರು. ಓಲಿ ಪೋಪ್‌ ಆಟ 23 ರನ್‌ಗೆ ಅಂತ್ಯವಾಯಿತು. ಅಶ್ವಿನ್‌ ಎಸೆತದಲ್ಲಿ ಸ್ಲಿಪ್‌ನಲ್ಲಿ ರೋಹಿತ್‌ ಶರ್ಮಾ ಕ್ಯಾಚ್‌ ಹಿಡಿದರು. ವೇಗದ ಆಟಕ್ಕೆ ಮುಂದಾಗಿದ್ದ ಜೋ ರೂಟ್‌ ದೊಡ್ಡ ಹೊಡೆತಕ್ಕೆ ಕೈ ಹಾಕಿ 16 ರನ್‌ ಗಳಿಸಿದ್ದಾಗ ಅಕ್ಷರ್ ಪಟೇಲ್‌ಗೆ ಕ್ಯಾಚ್‌ ನೀಡಿದರು. ಇಂಗ್ಲೆಂಡ್‌ ಬಳಗದ ದೊಡ್ಡ ವಿಕೆಟ್‌ ಬುಮ್ರಾ ಕೈಸೇರಿತು.

ಆರಂಭಿಕನಾಗಿ ಬಂದು 73 ರನ್‌ ಗಳಿಸಿ ಅಪಾಯಕಾರಿಯಾಗಿ ಆಡುತ್ತಿದ್ದ ಝಾಕ್‌ ಕ್ರಾಲಿಗೆ ಕುಲ್ದೀಪ್‌  ಸ್ಪಿನ್‌ ಕಂಟಕವಾಯಿತು. ಅವರ ಬೆನ್ನಲ್ಲೇ ಜಾನಿ ಬೇರ್‌ಸ್ಟೋ ಕೂಡ್‌ 26 ರನ್‌ ಗಳಿಸಿ ಬುಮ್ರಾ ಎಸೆತದಲ್ಲಿ ಲೆಗ್‌ ಬೈ ವಿಕೆಟ್‌ ಆಗಿ ಔಟಾದರು.‌

ಆಂಗ್ಲ ನಾಯಕ ಬೆನ್‌ ಸ್ಟೋಕ್ಸ್‌ ಕೂಡ 11 ರನ್‌ ಗಳಿಸಿ ರನೌಟ್‌ ಆದರು. ಶ್ರೇಯಸ್‌ ಅಯ್ಯರ್‌ ಚುರುಕಿನ ಕ್ಷೇತ್ರ ರಕ್ಷಣೆ ಮಾಡಿದರು. ಈ ವೇಳೆ ಒಂದಾದ ಬೆನ್‌ ಫೋಕ್ಸ್‌ ಮತ್ತು ಟಾಮ್‌ ಹಾರ್ಟ್ಲೆ ಅರ್ಧಶತಕದ ಜೊತೆಯಾಟವಾಡಿದರು. ಇಬ್ಬರೂ ತಲಾ 36 ರನ್‌ ಗಳಿಸಿ ಔಟಾದರು. ಬುಮ್ರಾ ಎಸೆತದಲ್ಲಿ ಟಾಮ್‌ ಹಾರ್ಟ್ಲೆ ಔಟಾಗುವುದರೊಂದಿಗೆ ಇಂಗ್ಲೆಂಡ್‌ ಇನಿಂಗ್ಸ್‌ ಮುಕ್ತಾಯವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...