ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್ ರೋಚಕ ಗೆಲುವು ಸಾಧಿಸಿದೆ.
ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ್ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ನೀಡಿದ್ದ 209 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ಬೆನ್ನಟ್ಟುವಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಯಶಸ್ವಿಯಾಯಿತು.
ನಾಯಕ ಸೂರ್ಯುಕುಮಾರ್ ಯಾದವ್(80) ಹೋರಾಟ ಆಸ್ಟ್ರೇಲಿಯಾ ಲೆಕ್ಕಾಚಾರ ಬದಲಿಸಿತು. ಆದರೆ ಅಂತಿಮ ಹಂತದಲ್ಲಿ ದಿಢೀರ್ ವಿಕೆಟ್ ಪತನ ಟೀಂ ಇಂಡಿಯಾ ಆತಂಕ ಹೆಚ್ಚಿಸಿತ್ತು. ಸೂರ್ಯ ಕುಮಾರ್ ವಿಕೆಟ್ ಪತನದ ಬಳಿಕ ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಅರ್ಶದೀಪ್ ರನೌಟ್ ಆದರು. ಆದರೆ ಅಂತಿಮ ಎಸೆತದಲ್ಲಿ ರಿಂಕು ಸಿಂಗ್(22) ಗೆಲುವು ತಂದುಕೊಟ್ಟರು
ಈ ಸುದ್ದಿ ಓದಿದ್ದೀರಾ? ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತ್ತು. ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.
ಸ್ಟೀವನ್ ಸ್ಮಿತ್ ಅರ್ಧ ಶತಕ ಹಾಗೂ ಜೋಶ್ ಇಂಗ್ಲಿಸ್ ಶತಕದ ನೆರವಿನಿಂದ ಆಸ್ಟ್ರೇಲಿಯಾ 3 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿದೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಂಗ್ಲಿಸ್ ಆಕರ್ಷಕ ಶತಕ ಸಿಡಿಸಿದರು. 50 ಎಸೆತದಲ್ಲಿ 11 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್ ಸಿಡಿಸಿದ ಇಂಗ್ಲಿಸ್ 110 ರನ್ ಗಳಿಸಿದರು.