ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: 2-1 ಮುನ್ನಡೆ ಪಡೆದ ಟೀಂ ಇಂಡಿಯಾ

Date:

ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ. 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅತಿಥೇಯ ತಂಡ ಭಾರತದ ಬೌಲರ್‌ಗಳ ದಾಳಿಗೆ ಸಿಲುಕಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್‌ಗಳನ್ನು ಮಾತ್ರ ಗಳಿಸಿತು.

ಟೀಂ ಇಂಡಿಯಾ ಪರ ವಾಷಿಂಗ್ಟನ್‌ ಸುಂದರ್‌ 15/3, ಆವೇಶ್ ಖಾನ್ 39/2 ಹಾಗೂ ಖಲೀಲ್‌ ಅಹಮದ್‌ 15/1 ವಿಕೆಟ್‌ ಪಡೆದು ಜಿಂಬಾಬ್ವೆ ಗೆಲುವಿಗೆ ಅಡ್ಡಿಯಾದರು.

ಅತಿಥೇಯ ತಂಡದ ಪರ ಡಿಯೋನ್‌ ಮೈಯರ್ಸ್ ಅಜೇಯ 65 ರನ್‌ ಗಳಿಸುವ ಮೂಲಕ ಕೊನೆಯವರೆಗೂ ಹೋರಾಟ ನಡೆಸಿದರೂ ತಂಡದ ಉಳಿದ ಆಟಗಾರರು ಇವರಿಗೆ ಬೆಂಬಲ ನೀಡಲಿಲ್ಲ. ವಿಕೆಟ್ ಕೀಪರ್‌ ಕ್ಲಿವ್ ಮಡಂದೆ 37 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು 20ರ ಗಡಿ ದಾಟಲಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹರಾರೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಆಯ್ದುಕೊಂಡು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್‌ಗಳ ಉತ್ತಮ ಮೊತ್ತ ಕಲೆಹಾಕಿತು.

ಈ ಸುದ್ದಿ ಓದಿದ್ದೀರಾ? ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಮೊದಲ ವಿಕೆಟ್‌ ಜೊತೆಯಾಟದಲ್ಲಿ ನಾಯಕ ಶುಭಮನ್‌ ಗಿಲ್ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 8.1 ಓವರ್‌ಗಳಲ್ಲಿ 67 ರನ್‌ ಪೇರಿಸಿದರು. 27 ಚೆಂಡುಗಳಲ್ಲಿ 4 ಬೌಂಡರಿ, 2 ಸಿಕ್ಸರ್‌ಗಳೊಂದಿಗೆ 36 ರನ್‌ ಗಳಿಸಿದ ಜೈಸ್ವಾಲ್‌, ಸಿಕಂದರ್‌ ರಜಾ ಬೌಲಿಂಗ್‌ನಲ್ಲಿ ಔಟಾದರು.

ನಂತರ ಇನಿಂಗ್ಸ್ ಮುಂದುವರೆಸಿದ ಗಿಲ್‌ಗೆ ಎರಡನೇ ಪಂದ್ಯದಲ್ಲಿ ಶತಕ ಸ್ಫೋಟಿಸಿದ್ದ ಯುವ ಆಟಗಾರ ಅಭಿಷೇಕ್‌ ಶರ್ಮಾ(10) ಹೆಚ್ಚು ಹೊತ್ತು ಜೊತೆ ನೀಡಲಿಲ್ಲ. ರುತುರಾಜ್‌ ಗಾಯಕ್ವಾಡ್‌ ಮೂರನೇ ಪಂದ್ಯದಲ್ಲಿಯೂ ಉತ್ತಮ ಆಟವಾಡಿದರು. 28 ಎಸೆತಗಳಲ್ಲಿ 3 ಸಿಕ್ಸರ್‌, 4 ಬೌಂಡರಿಗಳೊಂದಿಗೆ 49 ಬಾರಿಸಿದ ರುತುರಾಜ್‌ 1 ರನ್‌ನಿಂದ ಅರ್ಧ ಶತಕ ವಂಚಿತರಾದರು. ಕೊನೆಯ ಓವರ್‌ಗಳಲ್ಲಿ ಬಂದ ಸಂಜು ಸ್ಯಾಮ್ಸನ್‌ 12 ರನ್‌ ಗಳಿಸಿ ಅಜೇಯರಾಗುಳಿದರು.

ನಾಲ್ಕನೇ ಟಿ20 ಪಂದ್ಯ ಜುಲೈ 13 ರಂದು ನಡೆಯಲಿದ್ದು, ಅತಿಥೇಯ ಜಿಂಬಾಬ್ವೆ ತಂಡಕ್ಕೆ ಮಾಡು ಇಲ್ಲವೆ ಮಡಿ ಪಂದ್ಯವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ....

ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿ...

ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಕಪಿಲ್‌ ದೇವ್‌, ಅಜಿತ್‌ ವಾಡೇಕರ್, ಪಿ ಆರ್‌ ಮಾನ್‌ಸಿಂಗ್‌, ಗ್ಯಾರಿ ಕ್ರಿಸ್ಟನ್‌,...