ಸಾಂಘಿಕ ಹೋರಾಟದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: ಟೀಂ ಇಂಡಿಯಾಗೆ 4-1 ಟಿ20 ಸರಣಿ

Date:

ಭಾರತ ತಂಡ ಜಿಂಬಾಬ್ವೆ ವಿರುದ್ಧದ ಐದನೇ ಪಂದ್ಯದಲ್ಲಿ 42 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-1 ಮೂಲಕ ಜಯಗಳಿಸಿತು.

- Advertisement -

ಹಾರಾರೆ ಸ್ಪೋರ್ಟ್‌ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 168 ರನ್ನುಗಳ ಸವಾಲನ್ನು ಬೆನ್ನಟ್ಟಿದ ಜಿಂಬಾಬ್ವೆ ಭಾರತದ ಬೌಲರ್‌ಗಳ ದಾಳಿಗೆ ಕುಸಿದು 125 ರನ್‌ಗಳಿಗೆ ಆಲೌಟ್‌ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ವೇಗಿ ಮುಖೇಶ್ ಕುಮಾರ್ 22/4, ಶಿವಂ ದುಬೆ 25/2 ಹಾಗೂ ತುಷಾರ್‌ ದೇಶಪಾಂಡೆ, ವಾಷಿಂಗ್ಟನ್‌ ಸುಂದರ್ ಹಾಗೂ ಅಭಿಷೇಕ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿ ಗೆಲುವಿನ ರೂವಾರಿಗಳಾದರು.

ಜಿಂಬಾಬ್ವೆ ಪರ ಡಿಯೋನ್‌ ಮೈಯರ್ಸ್ 34, ತದಿವನ್ಷೆ ಮರುಮಣಿ 27 ಹಾಗೂ ಫರಾಜ್‌ ಅಕ್ರಮ್ 27 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರ್ಯಾರು 10ರ ಗಡಿ ದಾಟಲಿಲ್ಲ.

ಈ ಸುದ್ದಿ ಓದಿದ್ದೀರಾ? ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಮೊದಲು ಟಾಸ್‌ ಗೆದ್ದ ಜಿಂಬಾಬ್ವೆ ಟಿಂ ಇಂಡಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.ಕಳೆದ ಪಂದ್ಯಗಳಲ್ಲಿ ಮಿಂಚಿದ್ದ ಯಶಸ್ವಿ ಜೈಸ್ವಾಲ್(12), ನಾಯಕ ಶುಭಮನ್‌ ಗಿಲ್(13) ಹಾಗೂ ಅಭಿಷೇಕ್‌ ಶರ್ಮಾ (14) ಬೇಗನೆ ಪೆವಲಿಯನ್‌ಗೆ ತೆರಳಿದರು.

ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ ಅವರ ಉಪಯುಕ್ತ ಅರ್ಧ ಶತಕ ತಂಡ ಗೌರವಾನ್ವಿತ ಮೊತ್ತ ಕಲೆ ಹಾಕಲು ಕಾರಣವಾಯಿತು. 45 ಚೆಂಡುಗಳಲ್ಲಿ 4 ಸಿಕ್ಸರ್ ಹಾಗೂ 1 ಬೌಂಡರಿಯಿಂದಿಗೆ ಸ್ಯಾಮ್ಸನ್ 58 ಗಳಿಸಿದರು.

ಸಂಜುಗೆ ರಿಯಾನ್‌ ಪರಾಗ್‌ 22, ಶಿವಂ ದುಬೆ 26 ಉತ್ತಮ ಬೆಂಬಲ ನೀಡಿದರು. ಕೊನೆಯಲ್ಲಿ ಬಂದ ರಿಂಕು ಸಿಂಗ್‌ ಅಜೇಯ 11 ರನ್‌ ಗಳಿಸಿದ ಪರಿಣಾಮ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 167 ಮೊತ್ತ ಕಲೆ ಹಾಕಲು ಕಾರಣರಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾವಲ್ಪಿಂಡಿಯಲ್ಲಿ ದಾಖಲೆಗಳ ಸುರಿಮಳೆ: ಇಂಗ್ಲೆಂಡ್ ವಿರುದ್ಧ ಶ್ರೀಲಂಕಾಗೆ ಐತಿಹಾಸಿಕ ಜಯ

ಪಾಕಿಸ್ತಾನದ ರಾವಲ್ಪಿಂಡಿ ಕ್ರೀಡಾಂಗಣದಲ್ಲಿ 2026ರ ಅಕ್ಟೋಬರ್ 22ರಂದು ನಡೆದ ಏಕದಿನ ತ್ರಿಕೋನ...

ಏಷ್ಯನ್ ಪ್ಯಾರಾ ಗೇಮ್ಸ್: ಸಂದೀಪ್, ಹನಿಗೆ ವಿಶ್ವ ದಾಖಲೆಯ ಚಿನ್ನ; ಭಾರತಕ್ಕೆ 100ನೇ ಪದಕದ ಸಂಭ್ರಮ

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಅಥ್ಲೀಟ್‌ಗಳು...

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ...