ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಭಾರತ, ಸರಣಿ ಸಮಬಲ: ಒಂದೂವರೆ ದಿನದಲ್ಲಿ ಮುಗಿದ ಟೆಸ್ಟ್ ಹೊಸ ದಾಖಲೆ

Date:

ದಕ್ಷಿಣ ಆಫ್ರಿಕಾ ವಿರುದ್ಧ 7ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದ ಭಾರತ ತಂಡ ಎರಡು ಟೆಸ್ಟ್‌ಗಳ ಸರಣಿಯನ್ನು 1-1 ರೊಂದಿಗೆ ಸಮಬಲ ಮಾಡಿಕೊಂಡಿತು.

- Advertisement -

ಕೇಪ್‌ಟೌಟ್‌ನ ನ್ಯೂಲ್ಯಾಂಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 176 ರನ್‌ಗಳಿಗೆ ಆಲೌಟ್‌ ಆಗಿ ನೀಡಲಾಗಿದ್ದ 79 ರನ್‌ ಗುರಿಯನ್ನು ಟೀಂ ಇಂಡಿಯಾ ಕೇವಲ 12 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಭಾರತದ ಪರ ನಾಯಕ ರೋಹಿತ್ ಶರ್ಮಾ ಅಜೇಯ (17), ಯಶಸ್ವಿ ಜೈಸ್ವಾಲ್ (28), ವಿರಾಟ್ ಕೊಹ್ಲಿ  (12) ರನ್‌ ಗಳಿಸಿದರು. ತವರಿನ ಕೇಪ್‌ಟೌನ್‌ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ಸೋಲು ಕಾಣದಿದ್ದ ಹರಿಣಗಳ ತಂಡ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತದ ವಿರುದ್ಧ ಶರಣಾಯಿತು.

ಐದು ದಿನಗಳ ಪಂದ್ಯವು ಕೇವಲ ಒಂದೂವರೆ ದಿನದಲ್ಲಿ ಸಮಾಪ್ತಿಯಾಯಿತು. ಟಿಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೂವರೆ ದಿನದಲ್ಲಿ ಪಂದ್ಯ ಮುಗಿದಿರುವುದು ಒಂದು ದಾಖಲೆಯಾಗಿದೆ. 642 ಚೆಂಡುಗಳಿಗೆ ಮಾತ್ರ ಆಟವಾಡಲಾಗಿದೆ. ಈ ಮೊದಲು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡ 1932ರಲ್ಲಿ ಮೆಲ್ಬರ್ನ್‌ನಲ್ಲಿ 656 ಚಂಡುಗಳ ಆಟವಾಡಿದ್ದು ಮೊದಲ ದಾಖಲೆಯಾಗಿತ್ತು. ಈ ದಾಖಲೆಯನ್ನು ಟೀಂ ಇಂಡಿಯಾ ಸರಿಗಟ್ಟಿದೆ.

2ನೇ ಇನಿಂಗ್ಸ್‌ನಲ್ಲಿ 62 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಎರಡನೇ ದಿನ ಆರಂಭಿಸಿದ ದಕ್ಷಿಣ ಆಫ್ರಿಕಾ ಜಸ್‌ಪ್ರೀತ್‌ ಬೂಮ್ರಾ ದಾಳಿಗೆ 176 ರನ್‌ಗಳಿಗೆ ಆಲೌಟ್‌ ಆಯಿತು. ಸೋಲಿನಲ್ಲಿಯೂ ಏಕಾಂಗಿಯಾಗಿ ಶತಕ ಗಳಿಸಿದ ಆರಂಭಿಕ ಆಟಗಾರ ಐಡೆನ್ ಮಾರ್ಕ್ರಾಮ್ ಪ್ರೇಕ್ಷಕರ ಮನದಲ್ಲಿ ಉಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

103 ಎಸೆತಗಳಲ್ಲಿ 106 ರನ್‌ ಬಾರಿಸಿದ ಮಾರ್ಕ್ರಾಮ್ ಆಟದಲ್ಲಿ 17 ಆಕರ್ಷಕ ಬೌಂಡರಿ ಹಾಗೂ ಎರಡು ಭರ್ಜರಿ ಸಿಕ್ಸರ್‌ಗಳಿದ್ದವು.

ಟೀಂ ಇಂಡಿಯಾ ಪರ ಜಸ್‌ಪ್ರೀತ್ ಬೂಮ್ರಾ 61/6, ಮುಖೇಶ್ ಕುಮಾರ್ 56/2, ಮೊಹಮದ್‌ ಸಿರಾಜ್ 31/1 ಹಾಗೂ ಕನ್ನಡಿಗ ಪ್ರಸಿದ್ಧ ಕೃಷ್ಣ 27/1 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾ ಪತನಕ್ಕೆ ಕಾರಣರಾದರು.

ಹರಿಣಗಳ ತಂಡ ಮೊದಲ ಇನಿಂಗ್ಸ್‌ನಲ್ಲಿ ಮೊಹಮದ್ ಸಿರಾಜ್‌ 15/6 ದಾಳಿಗೆ ಕೇವಲ 55 ರನ್‌ಗಳಿಗೆ ಆಲೌಟ್‌ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 153 ರನ್‌ಗೆ ಸರ್ವಪತನ ಕಂಡು 98 ರನ್‌ ಮುನ್ನಡೆ ಗಳಿಸಿತ್ತು.

ದಕ್ಷಿಣ ಆಫ್ರಿಕಾದ 20 ವಿಕೆಟ್‌ಗಳನ್ನು ವೇಗದ ಬೌಲರ್‌ಗಳೆ ಕಬಳಿಸಿರುವುದು ದಾಖಲೆಯಾಗಿ ಉಳಿದಿದೆ. ಇದರ ಜೊತೆ ಮೊದಲ ದಿನದಲ್ಲಿ 23 ವಿಕೆಟ್ ಉರುಳಿದ್ದು ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೊಸ ದಾಖಲೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...