ಏಕದಿನ ವಿಶ್ವಕಪ್ 2023 | ಬಾಂಗ್ಲಾ ಮಣಿಸಿದ ಭಾರತ; ಶತಕದೊಂದಿಗೆ ಅಬ್ಬರಿಸಿದ ವಿರಾಟ್ ಕೊಹ್ಲಿ

Date:

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತ ಸತತ ಗೆಲುವುಗಳೊಂದಿಗೆ ಮುನ್ನುಗ್ಗುತ್ತಿದೆ. ಇಂದು ನಡೆದ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳನ್ನು ಗೆದ್ದಿರುವ ರೋಹಿತ್‌ ಶರ್ಮಾ ಸಾರಥ್ಯದ ಟೀಂ ಇಂಡಿಯಾ ಪಡೆ ಅಂಕಪಟ್ಟಿಯಲ್ಲಿ ಎರಡನೇಯ ಸ್ಥಾನ ಪಡೆದಿದೆ.

- Advertisement -

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ 257 ರನ್‌ಗಳ ಸವಾಲನ್ನು ಬೆನ್ನಟ್ಟಿದ ಭಾರತ ತಂಡ 41.3 ಓವರ್‌ಗಳಲ್ಲಿ 51 ಎಸೆತಗಳು ಬಾಕಿಯಿರುವಂತೆಯೆ ಗುರಿ ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ಫೋಟಕ ಬ್ಯಾಟ್ಸ್‌ಮನ್‌ಗಾದ ವಿರಾಟ್‌ ಕೊಹ್ಲಿ (ಅಜೇಯ 103), ಶುಭಮನ್‌ ಗಿಲ್(53), ರೋಹಿತ್ ಶರ್ಮಾ(48) ಅವರ ಅಬ್ಬರದೊಂದಿಗೆ ಭಾರತವು ಗೆಲುವಿನ ಓಟ ಮುಂದುವರೆಸಿತು.

ಮೊದಲು ಆರಂಭಿಕರಾದ ನಾಯಕ ರೋಹಿತ್‌ ಶರ್ಮಾ 48((40 ಚೆಂಡು – 7 ಬೌಂಡರಿ 2 ಸಿಕ್ಸರ್‌)) ಹಾಗೂ ಶುಭಮನ್‌ ಗಿಲ್ 53 (55 ಎಸೆತ, 5 ಬೌಂಡರಿ 2 ಸಿಕ್ಸರ್) ಅಡಿಪಾಯ ಹಾಕಿಕೊಟ್ಟರು

ನಂತರ ಕೆ ಎಲ್‌ ರಾಹುಲ್‌ (34) ಜೊತೆಯಾಟದಲ್ಲಿ ಅಬ್ಬರಿಸಿದ ವಿರಾಟ್‌ ಕೊಹ್ಲಿ  97 ಚೆಂಡುಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ 103 ರನ್‌ ಗಳಿಸಿ ಅಜೇಯರಾಗಿ ಉಳಿದರು.

 

ಭಾರತವು ಏಕದಿನ ವಿಶ್ವಕಪ್ ಟೂರ್ನಿಯ ತನ್ನ 5ನೇ ಪಂದ್ಯವನ್ನು ಅಕ್ಟೋಬರ್‌ 22 ರಂದು ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ.

ಬಾಂಗ್ಲಾದ ಗೌರವಾನ್ವಿತ ಮೊತ್ತ

ಶಕೀಬ್‌ ಅಲ್‌ ಹಸನ್‌ ಅನುಪಸ್ಥಿತಿಯಲ್ಲಿ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಸಾರಥ್ಯದ ಬಾಂಗ್ಲಾದೇಶ ತಂಡ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್‌ ಕಲೆ ಹಾಕಿತ್ತು.

ಆರಂಭಿಕರಾಗಿ ಕಣಕ್ಕಿಳಿದ ಲಿಟ್ಟನ್‌ ದಾಸ್ ಹಾಗೂ ತಂಝೀದ್ ಹಸನ್ ಬಿರುಸಿನ ಹೊಡೆತಗಳ ಮೂಲಕ ಮೊದಲ 14 ಓವರ್‌ಗಳಲ್ಲಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. 14.4 ಓವರ್‌ನಲ್ಲಿ ತಂಡದ ಮೊತ್ತ 93 ಆಗಿದ್ದಾಗ ತಂಝೀದ್ ಹಸನ್(51)  ಅವರನ್ನು ಎಲ್‌ಬಿ ಬಲೆಗೆ ಕೆಡವುದರ ಮೂಲಕ ಇವರಿಬ್ಬರ ಜೋಡಿಯನ್ನು ಕುಲದೀಪ್‌ ಯಾದವ್‌ ಮುರಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ನಂತರ ಬಂದ ನಜ್ಮುಲ್ ಹೊಸೈನ್ ಶಾಂಟೊ(8), ಮೆಹಿದಿ ಹಸನ್ ಮಿರಾಜ್(3) ಹಾಗೂ ತೌಹಿದ್ ಹೃದಯೋಯ್(16) ಅವರು ಸಿರಾಜ್‌ ಹಾಗೂ ಜಡೇಜಾ ದಾಳಿಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯದೆ ಪೆವಿಲಿಯನ್‌ ಕಡೆ ಮುಖಮಾಡಿದರು.

ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಲಿಟ್ಟನ್‌ ದಾಸ್‌ (66) ಔಟಾದ ನಂತರ ತಂಡಕ್ಕೆ ಚೇತರಿಕೆ ನೀಡಿದವರು ಮುಶ್ಫಿಕರ್ ರಹೀಮ್(38) ಹಾಗೂ ಮಹಮ್ಮದುಲ್ಲಾ(46). ಅಂತಿಮವಾಗಿ 50 ಓವರ್‌ಗಳಲ್ಲಿ ಬಾಂಗ್ಲಾದೇಶ 256 ರನ್‌ ಕಲೆ ಹಾಕಿತು.

ಭಾರತದ ಪರ ರವೀಂದ್ರ ಜಡೇಜಾ 38/2, ಮೊಹಮ್ಮದ್ ಸಿರಾಜ್ 52/2, ಜಸ್ಪ್ರೀತ್ ಬುಮ್ರಾ 41/2 ಗಳಿಸಿದರೆ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಗಾಯಗೊಂಡ ಹಾರ್ದಿಕ್, ಕೊಹ್ಲಿ ಬೌಲಿಂಗ್

ಮೂರು ಚೆಂಡುಗಳನ್ನು ಹಾಕಿದ ನಂತರ ಬೌಲಿಂಗ್‌ ಮಾಡುವ ವೇಳೆ ಗಾಯಗೊಂಡ ಮಧ್ಯಮ ವೇಗಿ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊರಗುಳಿದರು. ಹಾರ್ದಿಕ್‌ನ ಬಾಕಿ ಮೂರು ಎಸೆತವನ್ನು ವಿರಾಟ್‌ ಕೊಹ್ಲಿ ಮಾಡಿ 2 ರನ್‌ಗಳಷ್ಟನ್ನೇ ನೀಡಿದರು. ಇದರೊಂದಿಗೆ 6 ವರ್ಷಗಳ ನಂತರ ಕೊಹ್ಲಿ ಬೌಲಿಂಗ್‌ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...