ವಿಂಡೀಸ್‌ ವಿರುದ್ಧ 2ನೇ ಟೆಸ್ಟ್‌; ಟಾಸ್‌ ಗೆದ್ದ ಭಾರತ ಬ್ಯಾಟಿಂಗ್

Date:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಇಂದಿನಿಂದ ದೆಹಲಿಯಲ್ಲಿ ಆರಂಭವಾಗಿದ್ದು, ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಆರಂಭಿಕರಾದ ಕೆ ಎಲ್‌ ರಾಹುಲ್(10) ಹಾಗೂ ಯಶಸ್ವಿ ಜೈಸ್ವಾಲ್‌(5) ಬ್ಯಾಟಿಂಗ್‌ ಮಾಡುತ್ತಿದ್ದಾರೆ. ಭಾರತ 6 ಓವರ್‌ಗಳಲ್ಲಿ 15 ರನ್‌ ಗಳಿಸಿದೆ.

- Advertisement -

ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಯಾವುದೇ ಬದಲಾವಣೆಯಿಲ್ಲದೆ ಈ ಪಂದ್ಯಕ್ಕೆ ಕಣಕ್ಕಿಳಿದಿದೆ. ಆದರೆ, ವೆಸ್ಟ್ ಇಂಡೀಸ್ ತಂಡವು ತಮ್ಮ ಆಡುವ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಿದ್ದು, ಟೆವಿನ್ ಇಮ್ಲಾಚ್ ಮತ್ತು ಆಂಡರ್ಸನ್ ಫಿಲಿಪ್‌ಗೆ ಅವಕಾಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇನಿಂಗ್ಸ್ ಮತ್ತು 140 ರನ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಶುಭಮನ್‌ ಗಿಲ್ ನಾಯಕತ್ವದ ಭಾರತ ತಂಡವು ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿತು. ರಾಹುಲ್, ಧ್ರವ್‌ ಜುರೆಲ್‌ ಹಾಗೂ ರವೀಂದ್ರ ಜಡೇಜಾ ಅವರ ಆಕರ್ಷಕ ಶತಕಗಳು, ಜೊತೆಗೆ ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್‌ರ ಆಕ್ರಮಕಾರಿ ಬೌಲಿಂಗ್‌ನಿಂದ ಭಾರತಕ್ಕೆ ಭರ್ಜರಿ ಗೆಲುವು ಲಭಿಸಿತ್ತು.

ಇದನ್ನು ಓದಿದ್ದೀರಾ? ಎಡಗೈ ತುಂಡಾದರೂ ಬತ್ತದ ಉತ್ಸಾಹ; ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ರಿಂಕು ವಿಶ್ವ ದಾಖಲೆ

ಭಾರತದ ಮುಂದಿನ ಬ್ಯಾಟಿಂಗ್ ಸಾಲಿನಲ್ಲಿ ಸಾಯಿ ಸುಧರ್ಶನ್, ನಾಯಕ ಶುಭ್‌ಮನ್ ಗಿಲ್, ರವೀಂದ್ರ ಜಡೇಜಾ, ವಿಕೆಟ್‌ಕೀಪರ್ ಧ್ರುವ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಇದ್ದಾರೆ.

ವೆಸ್ಟ್ ಇಂಡೀಸ್ ತಂಡವು ರಾಸ್ಟನ್ ಚೇಸ್ ನಾಯಕತ್ವದಲ್ಲಿ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಟೆವಿನ್ ಇಮ್ಲಾಚ್ ವಿಕೆಟ್ ಕೀಪರ್ ಆಗಿ ಮತ್ತು ಆಂಡರ್ಸನ್ ಫಿಲಿಪ್ ವೇಗದ ಬೌಲರ್ ಆಗಿ ತಂಡಕ್ಕೆ ಮರಳಿದ್ದಾರೆ. ತಂಡದ ಆಡುವ ಬಳಗದಲ್ಲಿ ತಗೆನರಿನ್ ಚಂದರ್‌ಪಾಲ್, ಜಾನ್ ಕ್ಯಾಂಪ್‌ಬೆಲ್, ಆಲಿಕ್ ಅಥನಾಜೆ, ಶೈ ಹೋಪ್, ರಾಸ್ಟನ್ ಚೇಸ್, ಟೆವಿನ್ ಇಮ್ಲಾಚ್, ಜಸ್ಟಿನ್ ಗ್ರೀವ್ಸ್, ಖಾರಿ ಪಿಯರೆ, ಜೊಮೆಲ್ ವಾರಿಕನ್, ಆಂಡರ್ಸನ್ ಫಿಲಿಪ್ ಮತ್ತು ಜೇಡನ್ ಸೀಲ್ಸ್ ಇದ್ದಾರೆ.

ಮೊದಲ ಟೆಸ್ಟ್‌ನ ಗೆಲುವಿನ ಉತ್ಸಾಹದೊಂದಿಗೆ ಎರಡನೇ ಟೆಸ್ಟ್‌ಗೆ ಇಳಿದಿರುವ ಭಾರತ ತಂಡವು ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್. ರಾಹುಲ್ ಆರಂಭಿಕ ಜೋಡಿಯಿಂದ ಭಾರತ ಗಟ್ಟಿಯಾದ ಆರಂಭವನ್ನು ಎದುರುನೋಡುತ್ತಿದೆ. ಇನ್ನು ಶುಭಮನ್ ಗಿಲ್, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರಿಂದ ತಂಡವು ಭರವಸೆಯ ಆಟವನ್ನು ತೋರಲಿದೆ. ಪಂದ್ಯದ ಮುಂದಿನ ಕೆಲವು ದಿನಗಳಲ್ಲಿ ದೆಹಲಿಯ ಪಿಚ್‌ನಲ್ಲಿ ರೋಚಕ ಕದನ ನಡೆಯಲಿದ್ದು, ಭಾರತ ತನ್ನ ಪ್ರಾಬಲ್ಯವನ್ನು ಮುಂದುವರಿಸುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...