ಲಾರ್ಡ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಭಾಟಿಯಾ: ಶತಕ ಸಿಡಿಸಿದ ವಿಶ್ವದ ಮೊದಲ ಮಹಿಳಾ ಟೆಸ್ಟ್ ಕ್ರಿಕೆಟರ್

Date:

ಕ್ರಿಕೆಟ್‌ನ ಕಾಶಿ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಯಸ್ತಿಕಾ ಭಾಟಿಯಾ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕೈಕ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ, ಈ ಮೈದಾನದಲ್ಲಿ ಟೆಸ್ಟ್ ಶತಕ ಬಾರಿಸಿದ ವಿಶ್ವದ ಹಾಗೂ ಭಾರತದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಯಸ್ತಿಕಾ ಪಾತ್ರರಾಗಿದ್ದಾರೆ.

- Advertisement -

ಪಂದ್ಯದ ಮೂರನೇ ದಿನವಾದ ಭಾನುವಾರ (ಜುಲೈ 12), ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿದ 25 ವರ್ಷದ ಎಡಗೈ ಬ್ಯಾಟರ್ ಯಸ್ತಿಕಾ ಭಾಟಿಯಾ, 145 ಎಸೆತಗಳಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಶತಕವನ್ನು ಪೂರೈಸಿದರು. ಇಸ್ಸಿ ವಾಂಗ್ ಎಸೆದ ಓವರ್‌ನಲ್ಲಿ ಸಿಂಗಲ್ ರನ್ ಪಡೆಯುವ ಮೂಲಕ ಅವರು ಈ ಮೈಲಿಗಲ್ಲು ತಲುಪಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಇದನ್ನೂ ಓದಿ: ಟೆಸ್ಟ್​ ಕ್ರಿಕೆಟ್​ | ವಿಶ್ವ ದಾಖಲೆ ಬರೆದ ಜಸ್​ಪ್ರೀತ್ ಬೂಮ್ರಾ, 200 ವಿಕೆಟ್‌ ಸಾಧನೆ

ಒಟ್ಟಾರೆಯಾಗಿ 158 ಎಸೆತಗಳನ್ನು ಎದುರಿಸಿದ ಭಾಟಿಯಾ 14 ಆಕರ್ಷಕ ಬೌಂಡರಿಗಳ ನೆರವಿನಿಂದ 113 ರನ್ ಗಳಿಸಿ ಔಟಾದರು. ಈ ಅಮೋಘ ಇನಿಂಗ್ಸ್‌ನೊಂದಿಗೆ ಲಾರ್ಡ್ಸ್ ಮೈದಾನದ ಪ್ರತಿಷ್ಠಿತ ‘ಆನರ್ಸ್ ಬೋರ್ಡ್’ನಲ್ಲಿ ಯಸ್ತಿಕಾ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

ಇದರೊಂದಿಗೆ ಲಾರ್ಡ್ಸ್‌ನಲ್ಲಿ ಟೆಸ್ಟ್ ಶತಕ ಸಿಡಿಸಿದ ಭಾರತದ ದಿಗ್ಗಜರಾದ ವಿನೂ ಮಂಕಡ್, ದಿಲೀಪ್ ವೆಂಗ್‌ಸರ್ಕರ್, ಮೊಹಮ್ಮದ್ ಅಜಹರುದ್ದೀನ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಕೆ.ಎಲ್. ರಾಹುಲ್ ಮತ್ತು ಅಜಿಂಕ್ಯ ರಹಾನೆ ಅವರನ್ನೊಳಗೊಂಡ ಗಣ್ಯರ ಪಟ್ಟಿಗೆ ಯಸ್ತಿಕಾ ಭಾಟಿಯಾ ಸೇರ್ಪಡೆಯಾಗಿದ್ದಾರೆ.

ಯಾರೀ ಮಹಿಳಾ ಟೆಸ್ಟ್ ಕ್ರಿಕೆಟರ್ ಭಾಟಿಯಾ?

ಯಸ್ತಿಕಾ ಭಾಟಿಯಾ ಅವರು ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ವಿಕೆಟ್ ಕೀಪರ್ ಮತ್ತು ಎಡಗೈ ಬ್ಯಾಟರ್. ಇತ್ತೀಚೆಗೆ ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ಟೆಸ್ಟ್ ಶತಕ ಬಾರಿಸಿ ಇತಿಹಾಸ ಬರೆದ ಹಿನ್ನೆಲೆಯಲ್ಲಿ ಇವರು ಜಾಗತಿಕವಾಗಿ ಸುದ್ದಿಯಲ್ಲಿದ್ದಾರೆ.

2000ರ ನವೆಂಬರ್ 1ರಂದು ಗುಜರಾತ್‌ನ ಬರೋಡಾ (ವಡೋದರಾ) ದಲ್ಲಿ ಜನಿಸಿದ ಯಸ್ತಿಕಾ ದೇಶಿ ಕ್ರಿಕೆಟ್‌ನಲ್ಲಿ ಬರೋಡಾ ಮಹಿಳಾ ತಂಡವನ್ನು ಪ್ರತಿನಿಧಿಸುತ್ತಾರೆ. ಅಗ್ರ ಕ್ರಮಾಂಕದ (Top-order) ಎಡಗೈ ಬ್ಯಾಟರ್ ಹಾಗೂ ಪರಿಣಾಮಕಾರಿ ವಿಕೆಟ್ ಕೀಪಿಂಗ್ ಕೌಶಲ್ಯ ಹೊಂದಿರುವ ಆಟಗಾರ್ತಿ. 2021ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡದ ಪರವಾಗಿ ಏಕದಿನ, ಟಿ20 ಹಾಗೂ ಟೆಸ್ಟ್ ಮೂರೂ ಮಾದರಿಯ ಕ್ರಿಕೆಟ್‌ಗೆ ಇವರು ಪದಾರ್ಪಣೆ ಮಾಡಿದರು.

ಆಸ್ಟ್ರೇಲಿಯಾ ವಿರುದ್ಧದ ತಮ್ಮ ಚೊಚ್ಚಲ ಸರಣಿಯಲ್ಲೇ 64 ರನ್ ಗಳಿಸಿ, ಆಸ್ಟ್ರೇಲಿಯಾ ತಂಡದ ಸತತ 26 ಏಕದಿನ ಪಂದ್ಯಗಳ ದಾಖಲೆಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಭಾರತಕ್ಕೆ ನೆರವಾಗಿದ್ದರು. ಭಾರತ ತಂಡದೊಂದಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಹೆಗ್ಗಳಿಕೆ ಇವರದ್ದಾಗಿದೆ. ಇನ್ನು ಮಹಿಳಾ ಪ್ರೀಮಿಯರ್ ಲೀಗ್ (WPL) ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆರಂಭಿಕ ಆಟಗಾರ್ತಿಯಾಗಿ ಆಡುತ್ತಾರೆ.

ಗಾಯದಿಂದ ಚೇತರಿಸಿಕೊಂಡು ಬಂದ ಸಾಧಕಿ

ಕಳೆದ ವರ್ಷ ತೀವ್ರ ಮೊಣಕಾಲು ಗಾಯಕ್ಕೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯಸ್ತಿಕಾ ಈಗ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. “ಆರು ತಿಂಗಳ ಹಿಂದೆ ನಾನು ತೀರಾ ಕಠಿಣ ಪರಿಸ್ಥಿತಿಯಲ್ಲಿದ್ದೆ. ಶಸ್ತ್ರಚಿಕಿತ್ಸೆಯ ನಂತರ ಶೂನ್ಯದಿಂದ ನನ್ನ ಆಟವನ್ನು ಮತ್ತೆ ಆರಂಭಿಸಿದೆ. ಲಾರ್ಡ್ಸ್‌ನ ಆನರ್ಸ್ ಬೋರ್ಡ್‌ನಲ್ಲಿ ನನ್ನ ಹೆಸರು ಬರಲಿದೆ ಎಂದು ಯಾರಾದರೂ ಹೇಳಿದ್ದರೆ ನಾನು ನಂಬುತ್ತಿರಲಿಲ್ಲ” ಎಂದು ಶತಕದ ಬಳಿಕ ಯಸ್ತಿಕಾ ಭಾಟಿಯಾ ಭಾವುಕರಾಗಿ ನುಡಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...