ದ್ವಿಪಕ್ಷೀಯ ಸರಣಿಗಳಲ್ಲಷ್ಟೇ ಭಾರತದ ಅಬ್ಬರ; ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಬರ!

Date:

ಐಸಿಸಿ ಟೆಸ್ಟ್‌ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ.

- Advertisement -

ಲಂಡನ್‌ನ ಓವಲ್‌ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ, 209 ರನ್‌ಗಳ ಬೃಹತ್‌ ಅಂತರದಲ್ಲಿ ರೋಹಿತ್‌ ಪಡೆಯನ್ನು ಬಗ್ಗುಬಡಿದು ತನ್ನ ಚೊಚ್ಚಲ ಡಬ್ಲ್ಯೂಟಿಸಿ ಪ್ರಶಸ್ತಿ ಗೆದ್ದು ಬೀಗಿತ್ತು. ಮತ್ತೊಂದೆಡೆ ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದರೂ ಸಹ ಭಾರತ, ಯಾವುದೇ ಹಂತದಲ್ಲೂ ಪ್ರತಿರೋಧ ತೋರದೆ ಶರಾಣಗಿತ್ತು. ಎದುರಾಳಿಗಳು ಕಳೆದ ಬಾರಿ ನ್ಯೂಜಿಲೆಂಡ್ ಮತ್ತು ಈ ಬಾರಿ ಆಸ್ಟ್ರೇಲಿಯಾ ಎಂಬುದಷ್ಟೇ ವ್ಯತ್ಯಾಸ. ಆದರೆ ಫಲಿತಾಂಶದಲ್ಲಿ ಮಾತ್ರ ಯಾವುದೇ ಬದಲವಾವಣೆ ಆಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ ಭಾರತ, ಕಳೆದ 10 ವರ್ಷಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ನಾಲ್ಕನೇ ಬಾರಿಗೆ ಫೈನಲ್‌ನಲ್ಲಿ ಸೋಲು ಕಂಡಂತಾಗಿದೆ.

2011ರಲ್ಲಿ ಭಾರತದ ನೆಲದಲ್ಲಿ ನಡೆದಿದ ಐಸಿಸಿ ಏಕದಿನ ವಿಶ್ವಕಪ್‌ನಲ್ಲೂ ಪ್ರಶಸ್ತಿ ಜಯಿಸಿದ್ದ ಭಾರತ ಆ ಬಳಿಕ 2013ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್‌ ಆಗಿ ಸಂಭ್ರಮಿಸಿತ್ತು. ಈ ಎರಡೂ ಟೂರ್ನಿಗಳಲ್ಲೂ ಭಾರತ ತಂಡವನ್ನು ಮಹೇಂದ್ರ ಸಿಂಗ್‌ ಧೋನಿ ಮುನ್ನಡೆಸಿದ್ದರು. ಅದುವೇ ಕೊನೆ. ಆ ನಂತರದಲ್ಲಿ ಐಸಿಸಿ ಟ್ರೋಫಿ ಭಾರತದ ಪಾಲಿಗೆ ಮರೀಚಿಕೆಯಾಗಿಯೇ ಉಳಿದಿದೆ.

ಕಳೆದ ಒಂದು ದಶಕದಿಂದ ಭಾರತಕ್ಕೆ ಐಸಿಸಿ ಸೆಮಿಫೈನಲ್‌- ಫೈನಲ್‌ನಲ್ಲಿ ಸೋಲಿನ ಸರಪಳಿ ಕಳಚಲು ಸಾಧ್ಯವಾಗಿಲ್ಲ.

ಧೋನಿ ನಾಯಕತ್ವದಲ್ಲಿ,

2014ರ ಟಿ-20 ವಿಶ್ವಕಪ್‌; ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಸೋಲು.

2015ರ ಏಕದಿನ ವಿಶ್ವಕಪ್; ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು

2016ರ ಟಿ20 ವಿಶ್ವಕಪ್‌; ಸೆಮಿಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಸೋಲು.

ಕೊಹ್ಲಿ ನಾಯಕತ್ವದಡಿಯಲ್ಲಿ,

2017ರ ಚಾಂಪಿಯನ್ಸ್‌ ಟ್ರೋಫಿ; ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೋಲು

2019ರ ಏಕದಿನ ವಿಶ್ವಕಪ್; ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲು

2021ರ ಟೆಸ್ಟ್ ಚಾಂಪಿಯನ್‌ಶಿಪ್‌;  ಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲು

ರೋಹಿತ್ ಶರ್ಮಾ ನಾಯಕತ್ವದಲ್ಲಿ,

2022ರ ಟಿ20 ವಿಶ್ವಕಪ್; ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಸೋಲು

2023ರ ಟೆಸ್ಟ್ ಚಾಂಪಿಯನ್‌ಶಿಪ್‌;  ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...