ಎಡಗೈ ತುಂಡಾದರೂ ಬತ್ತದ ಉತ್ಸಾಹ; ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ರಿಂಕು ವಿಶ್ವ ದಾಖಲೆ

Date:

ನವದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋ F46 ಸ್ಪರ್ಧೆಯಲ್ಲಿ ಭಾರತದ ಸ್ಪರ್ಧಿ ರಿಂಕು ಹೂಡಾ ವಿಶ್ವದಾಖಲೆಯ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

- Advertisement -

ರಿಂಕು ಹೂಡಾ 66.37 ಮೀಟರ್ ಜಾವೆಲಿನ್ ಎಸೆದು ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಗುರ್ಜರ್ 64.76 ಮೀಟರ್ ಎಸೆದು ಬೆಳ್ಳಿ ಗೆದ್ದಿದ್ದಾರೆ. ಈ ವಿಭಾಗದಲ್ಲಿ ಇದಕ್ಕೂ ಮೊದಲು ಗುರ್ಜರ್ ವಿಶ್ವದಾಖಲೆ ಹೊಂದಿದ್ದರು. ಇದೀಗ ರಿಂಕು ಆ ದಾಖಲೆ ಅಳಿಸಿ ಹೊಸ ಮೈಲಿಗಲ್ಲು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ಸ್ಪರ್ಧೆಯಲ್ಲಿದ್ದ ಮತ್ತೊಬ್ಬ ಭಾರತೀಯ ಅಜೀತ್ ಸಿಂಗ್ 61.77 ಮೀಟರ್ ಎಸೆದು ನಾಲ್ಕನೇ ಸ್ಥಾನ ಪಡೆದಿದ್ದಾರೆ. ಕ್ಯೂಬಾದ ಗಿಲ್ಲೆರ್ಮೊ ವರೋನಾ ಗೊನ್ಜಾಲೆಜ್ 63.34 ಮೀಟರ್ ಎಸೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

F46 ವರ್ಗೀಕರಣ ಏನು?

ತೋಳಿನ ಕೊರತೆ, ಸ್ನಾಯು ಶಕ್ತಿಯ ದುರ್ಬಲತೆ ಅಥವಾ ತೋಳುಗಳಲ್ಲಿ ನಿಷ್ಕ್ರೀಯ ಚಲನೆ ಮುಂತಾದ ಸಮಸ್ಯೆ ಹೊಂದಿರುವ ಕ್ರೀಡಾಪಟುಗಳು ಈ ವಿಭಾಗದಲ್ಲಿ ಸ್ಪರ್ಧಿಸುತ್ತಾರೆ.

ಹರಿಯಾಣದ ರೋಹ್ಟಕ್‌ನ ಹೊರವಲಯದಲ್ಲಿರುವ ಧಮರ್ ಎಂಬ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿರುವ ರಿಂಕು ಹೂಡಾ ಅವರು ಚಿಕ್ಕವರಿದ್ದಾಗಲೇ ಭತ್ತ ಬಿತ್ತನೆ ಯಂತ್ರದಲ್ಲಿ ಅವರ ಎಡಗೈ ಸಿಲುಕಿ ತುಂಡಾಗಿತ್ತು.

“ಭಾರತದಲ್ಲಿ ಇದು ನನ್ನ ಮೊದಲ ಸ್ಪರ್ಧೆ. ನನಗೆ ಮೈದಾನದಲ್ಲಿ ಉತ್ತಮ ಭಾವನೆ ಇತ್ತು. ಇಂದು ನನ್ನ ದಿನ. ಹಾಗಾಗಿ, ಎಲ್ಲವೂ ನನ್ನ ಪರವಾಗಿತ್ತು. ನನ್ನ ಸಾಧನೆ ನನಗೆ ಹೊಸ ಅನುಭವ ನೀಡಿದೆ” ಎನ್ನುತ್ತಾರೆ ಗೋಲ್ಡ್ ಮೆಡಲಿಸ್ಟ್ ರಿಂಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...