ಜುಲೈ 12ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಹಾಗೂ ಮುಕೇಶ್ ಕುಮಾರ್ ಅವರಿಗೆ ಸ್ಥಾನ ನೀಡಲಾಗಿದ್ದು, ಮೊಹಮ್ಮದ್ ಶಮಿ, ಚೇತೇಶ್ವರ ಪೂಜಾರ, ಉಮೇಶ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಇನ್ನು ಭಾರತ ಏಕದಿನ ತಂಡಕ್ಕೆ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಮತ್ತು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಉಮ್ರಾನ್ ಮಲಿಕ್ ಕೂಡ ತಂಡಕ್ಕೆ ವಾಪಸಾತಿ ಮಾಡಿದ್ದಾರೆ. ಸ್ಪಿನ್ನರ್ ಯುಜುವೇಂದ್ರ ಚಹಾಲ್, ಜಯದೇವ್ ಉನದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಟೆಸ್ಟ್ ತಂಡಕ್ಕೆ ಅನುಭವಿ ಆರ್ ಅಶ್ವಿನ್ ಮರಳಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಅನುಭವಿ ಆಟಗಾರರಾದ ಕೆ ಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ಅವರು ತಂಡಕ್ಕೆ ಮರಳಲು ಇನ್ನೂ ಕಾಲಾವಕಾಶ ತೆಗೆದುಕೊಳ್ಳಲಿದೆ. ರೋಹಿತ್ ಶರ್ಮಾ ಏಕದಿನ ಮತ್ತು ಟೆಸ್ಟ್ ಎರಡೂ ತಂಡಗಳನ್ನು ಮುನ್ನಡೆಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಆ್ಯಶಸ್ ಟೆಸ್ಟ್ | ಐದೂ ದಿನವು ಬ್ಯಾಟಿಂಗ್ ನಡೆಸಿ ಹಲವು ದಾಖಲೆ ಬರೆದ ಉಸ್ಮಾನ್ ಖ್ವಾಜಾ!
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ತಂಡ 2 ಟೆಸ್ಟ್, ಮೂರು ಏಕದಿನ, 5 ಟಿ20 ಪಂದ್ಯಗಳ ಸರಣಿಯಲ್ಲಿ ಆಡಲಿದೆ.
ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ವಿಕೆಟ್ ಕೀಪರ್), ಕೆ ಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.