ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ; ಐಪಿಎಲ್‌ ಸ್ಟಾರ್‌ ಆಟಗಾರರಿಗೆ ಸ್ಥಾನ

Date:

ಜುಲೈ 12ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್ವಾಡ್‌, ನವದೀಪ್‌ ಸೈನಿ ಹಾಗೂ ಮುಕೇಶ್ ಕುಮಾರ್‌ ಅವರಿಗೆ ಸ್ಥಾನ ನೀಡಲಾಗಿದ್ದು, ಮೊಹಮ್ಮದ್ ಶಮಿ, ಚೇತೇಶ್ವರ ಪೂಜಾರ, ಉಮೇಶ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

- Advertisement -

ಇನ್ನು ಭಾರತ ಏಕದಿನ ತಂಡಕ್ಕೆ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಮತ್ತು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಉಮ್ರಾನ್ ಮಲಿಕ್ ಕೂಡ ತಂಡಕ್ಕೆ ವಾಪಸಾತಿ ಮಾಡಿದ್ದಾರೆ. ಸ್ಪಿನ್ನರ್ ಯುಜುವೇಂದ್ರ ಚಹಾಲ್, ಜಯದೇವ್ ಉನದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಟೆಸ್ಟ್‌ ತಂಡಕ್ಕೆ ಅನುಭವಿ ಆರ್‌ ಅಶ್ವಿನ್‌ ಮರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಅನುಭವಿ ಆಟಗಾರರಾದ ಕೆ ಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ಅವರು ತಂಡಕ್ಕೆ ಮರಳಲು ಇನ್ನೂ ಕಾಲಾವಕಾಶ ತೆಗೆದುಕೊಳ್ಳಲಿದೆ. ರೋಹಿತ್ ಶರ್ಮಾ ಏಕದಿನ ಮತ್ತು ಟೆಸ್ಟ್ ಎರಡೂ ತಂಡಗಳನ್ನು ಮುನ್ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆ್ಯಶಸ್ ಟೆಸ್ಟ್ |‌ ಐದೂ ದಿನವು ಬ್ಯಾಟಿಂಗ್‌ ನಡೆಸಿ ಹಲವು ದಾಖಲೆ ಬರೆದ ಉಸ್ಮಾನ್‌ ಖ್ವಾಜಾ!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ತಂಡ 2 ಟೆಸ್ಟ್, ಮೂರು ಏಕದಿನ, 5 ಟಿ20 ಪಂದ್ಯಗಳ ಸರಣಿಯಲ್ಲಿ ಆಡಲಿದೆ.

ಏಕದಿನ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಟೆಸ್ಟ್‌ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (‍ವಿಕೆಟ್ ಕೀಪರ್), ಕೆ ಎಸ್ ಭರತ್ (‍ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...