ಟಿ20 ವಿಶ್ವಕಪ್‌ ಗೆಲುವು | 2.5 ಕೋಟಿ ರೂ. ಹೆಚ್ಚುವರಿ ಹಣ ಬೇಡ ಎಂದ ರಾಹುಲ್ ದ್ರಾವಿಡ್!

Date:

ಕಳೆದ ತಿಂಗಳು ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ ಬಳಿಕ ಬಿಸಿಸಿಐ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಹೆಚ್ಚುವರಿ 2.5 ಕೋಟಿ ರೂಪಾಯಿ ಬೋನಸ್ ನೀಡುವ ನಿರ್ಧಾರ ಮಾಡಿದೆ. ಆದರೆ, ಈ ಹೆಚ್ಚುವರಿ ಬೋನಸ್ಅನ್ನು ರಾಹುಲ್ ದ್ರಾವಿಡ್ ಬೇಡ ಎಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಒಟ್ಟು 125 ಕೋಟಿ ರೂಪಾಯಿಗಳ ಬೋನಸ್ಅನ್ನು ಇಡೀ ತಂಡಕ್ಕೆ ವಿತರಿಸಬೇಕಾಗಿತ್ತು. ದ್ರಾವಿಡ್ ಅವರಿಗೆ 5 ಕೋಟಿ ರೂಪಾಯಿ ಮತ್ತು ಇತರ ಕೋಚಿಂಗ್ ಸಿಬ್ಬಂದಿಗೆ ತಲಾ 2.5 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿತ್ತು. ಆದರೆ, ದ್ರಾವಿಡ್ ತನ್ನ ಸಹೋದ್ಯೋಗಿಗಳಿಗೆ ಸಿಗುವಷ್ಟೆ ಬೋನಸ್‌ಅನ್ನು ಮಾತ್ರವೇ ಪಡೆದಿದ್ದಾರೆ. ಇನ್ನುಳಿದ ಹೆಚ್ಚುವರಿ 2.5 ಕೋಟಿ ರೂಪಾಯಿಯನ್ನು ಪಡೆಯಲು ನಿರಾಕರಿಸಿದ್ದಾರೆ.

ಇದನ್ನು ಓದಿದ್ದೀರಾ?  ರಾಹುಲ್ ದ್ರಾವಿಡ್‌ಗೆ ‘ಭಾರತ ರತ್ನ’ ನೀಡುವಂತೆ ಸರ್ಕಾರಕ್ಕೆ ಒತ್ತಾಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಹುಲ್ ಅವರ ಸಹಾಯಕ ಸಿಬ್ಬಂದಿಗಳಾದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ, ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರಿಗೆ 2.5 ಕೋಟಿ ರೂ. ಬೋನಸ್ ಮೊತ್ತ ನೀಡಲಾಗಿದೆ. ಅಷ್ಟೇ ಮೊತ್ತದ ಬೋನಸ್‌ಅನ್ನು ಮಾತ್ರವೇ ರಾಹುಲ್‌ ಕೂಡ ಪಡೆದಿದ್ದಾರೆ.

ರಾಹುಲ್ ದ್ರಾವಿಡ್ ಅವರು ಬಹುಮಾನ ಮೊತ್ತವನ್ನು ತ್ಯಜಿಸುವ ನಿರ್ಧಾರ ಮಾಡಿರುವುದು ಇದೇ ಮೊದಲಲ್ಲ. ಈ ಹಿಂದೆ, 2018ರಲ್ಲಿ ಭಾರತದ ಯು-19 ವಿಶ್ವಕಪ್ ವಿಜೇತ ತಂಡದ ತರಬೇತುದಾರರಾಗಿದ್ದಾಗಲೂ ಇದೇ ರೀತಿ ನಿರ್ಧಾರ ಮಾಡಿದ್ದರು.

ಯು-19 ವಿಶ್ವಕಪ್ ಗೆದ್ದಾಗ ರಾಹುಲ್ ಅವರಿಗೆ 50 ಲಕ್ಷ ರೂಪಾಯಿ ನೀಡಲು ಮತ್ತು ಉಳಿದ ಸಹಾಯಕ ಸಿಬ್ಬಂದಿಗೆ ತಲಾ 20 ಲಕ್ಷ ರೂಪಾಯಿಗಳನ್ನು ನೀಡಲು ಬಿಸಿಸಿಐ ನಿರ್ಧರಿಸಿತ್ತು. ಆದರೆ, ರಾಹುಲ್ ದ್ರಾವಿಡ್ ಪ್ರಶಸ್ತಿಗಳನ್ನು ಪರಿಷ್ಕರಿಸಲು ಬಿಸಿಸಿಐಗೆ ಒತ್ತಡ ಹೇರಿ, ತಾನು ಸೇರಿದಂತೆ ಎಲ್ಲ ಸಹಾಯಕ ಸಿಬ್ಬಂದಿಗಳಿಗೆ 25 ಲಕ್ಷ ರೂ. ದೊರಕುವಂತೆ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ....

ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: 2-1 ಮುನ್ನಡೆ ಪಡೆದ ಟೀಂ ಇಂಡಿಯಾ

ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು,...