ಟೀಮ್ ಇಂಡಿಯಾಗೆ ಆಘಾತ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಜಸ್‌ಪ್ರೀತ್ ಬುಮ್ರಾ ಔಟ್?

Date:

ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಗಾಯದ ಸಮಸ್ಯೆಯಿಂದಾಗಿ ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಬೀಳುವ ಸಾಧ್ಯತೆಯಿದೆ.

- Advertisement -

ಬಿಸಿಸಿಐನ ‘ಸೆಂಟರ್ ಆಫ್ ಎಕ್ಸಲೆನ್ಸ್’ (BCCI Centre of Excellence) ಬುಮ್ರಾ ಅವರಿಗೆ ಈ ವಿದೇಶಿ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲು ಫಿಟ್ನೆಸ್ ಕುರಿತಾಗಿ ಹಸಿರು ನಿಶಾನೆ ನೀಡಿತ್ತು ಎಂದು ಕೆಲವೇ ದಿನಗಳ ಹಿಂದಷ್ಟೇ ವರದಿಯಾಗಿತ್ತು. ಆದರೆ, ಇದೀಗ ದಿಢೀರ್ ಬೆಳವಣಿಗೆಯಲ್ಲಿ ಅವರು ಸರಣಿಯಿಂದ ದೂರ ಉಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ಬುಮ್ರಾ ಅವರ ಎಡಗಾಲಿನ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದು, ಮುಂಬರುವ ಈ ಎರಡು ಪಂದ್ಯಗಳಿಗೆ ಅವರು ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ದ್ವೀಪರಾಷ್ಟ್ರ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15ರಂದು ಗಾಲ್‌ನಲ್ಲಿ ಶುರುವಾಗಲಿದ್ದರೆ, ಎರಡನೇ ಪಂದ್ಯ ಆಗಸ್ಟ್ 23ರಿಂದ ಕೊಲಂಬೊದಲ್ಲಿ ನಡೆಯಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (WTC) ಫೈನಲ್ ತಲುಪುವ ರೇಸ್‌ನಲ್ಲಿ ಉಳಿಯಲು ಭಾರತವು ತನ್ನ ಪಾಲಿಗೆ ಉಳಿದಿರುವ 9 ಟೆಸ್ಟ್ ಪಂದ್ಯಗಳ ಪೈಕಿ 7ರಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ಒಂದು ವೇಳೆ ಬುಮ್ರಾ ಅಲಭ್ಯತೆ ಖಚಿತವಾದರೆ, ಈಗಾಗಲೇ ಸರಣಿಯಿಂದ ಹೊರಬಿದ್ದಿರುವ ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರ ಸಾಲಿಗೆ ಬುಮ್ರಾ ಕೂಡ ಸೇರ್ಪಡೆಯಾಗಲಿದ್ದಾರೆ.ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಕೂಡ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದು, ಕೊಲಂಬೊದಲ್ಲಿ ನಡೆಯಲಿರುವ ಎರಡನೇ ಪಂದ್ಯದ ವೇಳೆಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದ ಗಾಳಿಯ ಗುಣಮಟ್ಟ; ದೆಹಲಿಯಲ್ಲಿ ಉಸಿರಾಟಕ್ಕೂ ಸಂಕಷ್ಟ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು, ಸೋಮವಾರ (ನ.2)...

ರಾಜ್ಯಕ್ಕೆ ಪ್ರತ್ಯೇಕ ಧ್ವಜ, ಶಾಲೆಗಳಲ್ಲಿ ತಮಿಳು ಕಡ್ಡಾಯ: ಸಚಿವ ಆಧವ್ ಅರ್ಜುನ ಹೇಳಿಕೆಗೆ ಭಾರಿ ವಿರೋಧ

ತಮಿಳುನಾಡಿಗೆ ಪ್ರತ್ಯೇಕ ರಾಜ್ಯ ಧ್ವಜವನ್ನು ಪರಿಚಯಿಸಲಾಗುವುದು ಹಾಗೂ ಶಾಲಾ ದಿನಗಳಿಂದಲೇ ಮಾತೃಭಾಷೆ...

1,322 ಕೋಟಿ ರೂ. ವಂಚನೆ: ಉದ್ಯಮಿ ಸುಭಾಷ್ ಚಂದ್ರ ವಿರುದ್ಧ ಇ.ಡಿ ಪ್ರಕರಣ ದಾಖಲು

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ಗೆ (LICHFL) 1,322 ಕೋಟಿ ರೂ. ನಷ್ಟ...

ಪರೀಕ್ಷಾ ಸುಧಾರಣಾ ಸಮಿತಿ ಅವಧಿ ವಿಸ್ತರಣೆ; 50 ಸಾವಿರಕ್ಕೂ ಹೆಚ್ಚು ಸಲಹೆ ಪಡೆದ ನಿಲೇಕಣಿ ಸಮಿತಿ!

ದೇಶದ ಪ್ರಮುಖ ಸ್ಪರ್ಧಾತ್ಮಕ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ...