ವರಸೆ ಬದಲಿಸಿದ ಪಿ ಟಿ ಉಷಾ; ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ!

Date:

  • 11ನೇ ದಿನಕ್ಕೆ ಕಾಲಿಟ್ಟ ಕುಸ್ತಿಪಟುಗಳ ಪ್ರತಿಭಟನೆ
  • ತೀವ್ರ ಟೀಕೆಯ ಬೆನ್ನಲ್ಲೇ ಎಚ್ಚೆತ್ತ ಪಿ ಟಿ ಉಷಾ

ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಅಥ್ಲೀಟ್‌ ಪಿ ಟಿ ಉಷಾ ತಮ್ಮ ವರಸೆ ಬದಲಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ  ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಅಧ್ಯಕ್ಷೆ ಉಷಾ, ಬುಧವಾರ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ.

“ನಾನು ಮೊದಲು ಕ್ರೀಡಾಪಟು ಆ ಬಳಿಕ ಆಡಳಿತಾಧಿಕಾರಿ” ಎಂದು ಹೇಳುವ ಮೂಲಕ ಕುಸ್ತಿಪಟುಗಳ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.  

ಬೃಜ್‌ ಭೂಷಣ್‌ರನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಕುಸ್ತಿಪಟುಗಳು ತಮ್ಮ ದೃಢನಿರ್ಧಾರವನ್ನು ತಿಳಿಸಿದ್ದು, ರಾಜಧಾನಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಪ್ರತಿಭಟನೆ ಅಶಿಸ್ತು ಎಂದಿದ್ದ ಉಷಾ

ಕೆಲ ದಿನಗಳ ಹಿಂದೆ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಟೀಕಿಸಿದ್ದ ಉಷಾ, “ಕುಸ್ತಿಪಟುಗಳದ್ದು ನಕಾರಾತ್ಮಕ ಧೋರಣೆ, ಪ್ರತಿಭಟನೆಯು ಅಶಿಸ್ತಿನ ವರ್ತನೆ” ಎಂದು ಹೇಳಿದ್ದರು.

ಆದರೆ, ಹಿರಿಯ ಅಥ್ಲೀಟ್‌ ಆಗಿರುವ ಉಷಾ, ಕ್ರೀಡಾಪಟುಗಳ ಬೆಂಬಲಕ್ಕೆ ನಿಲ್ಲುವ ಬದಲು ಅವರ ವಿರುದ್ಧವೇ ಹೇಳಿಕೆ ನೀಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಉಷಾ ಜೊತೆಗಿನ ಮಾತುಕತೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಸ್ತಿಪಟು ಭಜರಂಗ್‌ ಪುನಿಯಾ, “ಉಷಾ ಅವರು ನಮ್ಮ ಜೊತೆಗಿರುವುದನ್ನು ತಿಳಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಸಮಸ್ಯೆ ಪರಿಹಾರದ ಕುರಿತು ಅವರು ಯಾವುದೇ ಭರವಸೆ ನೀಡಿಲ್ಲ. ಹೀಗಾಗಿ ನಮಗೆ ನ್ಯಾಯ ಸಿಗುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ನಾವು ಅವರಿಗೆ ತಿಳಿಸಿದ್ದೇವೆ” ಎಂದು  ಪುನಿಯಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?:

ಐಪಿಎಲ್‌ 2023 | ಲಕ್ನೋ ತವರಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

“ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆ ಕ್ರೀಡಾ ಕ್ಷೇತ್ರಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಈ ಹಿಂದೆ ಪಿ ಟಿ ಉಷಾ ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...

ದಂಪತಿಗೆ ಕನ್ನಡ ನಟ ನಾಗಭೂಷಣ್​ ಕಾರು ಡಿಕ್ಕಿ: ಮಹಿಳೆ ಮೃತ್ಯು

ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ ರಾತ್ರಿ ವಾಕಿಂಗ್‌...

2 ಸಾವಿರ ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಅ. 7ರವರೆಗೆ ಅವಧಿ ವಿಸ್ತರಿಸಿದ ಆರ್‌ಬಿಐ

ಅಕ್ಟೋಬರ್ 7ರವರೆಗೂ 2000 ರೂ. ನೋಟು ವಿನಿಮಯಕ್ಕೆ ಅವಕಾಶ ಅ.8ರ ನಂತರ 2000...

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’...