ಐಪಿಎಲ್‌ 2023 | ಲಕ್ನೋ ತವರಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

Date:

ಲಕ್ನೋದಲ್ಲಿ ಸೋಮವಾರ ನಡೆದ ʻಲೋ ಸ್ಕೋರಿಂಗ್‌ʼ ಹಣಾಹಣಿಯಲ್ಲಿ ಆರ್‌ಸಿಬಿ ಕೈ ಮೇಲಾಗಿದೆ. ಸಾಮನ್ಯ ಮೊತ್ತ ಪೇರಿಸಿದ ಬಳಿಕವೂ ಲಕ್ನೋ ತಂಡವನ್ನು ಅವರದ್ದೇ ಮೈದಾನದಲ್ಲಿ 108 ರನ್‌ಗಳಿಸಿಗೆ ನಿಯಂತ್ರಿಸಿದ ಆರ್‌ಸಿಬಿ, ಟೂರ್ನಿಯಲ್ಲಿ 5ನೇ ಗೆಲುವು ಸಾಧಿಸಿದೆ.

ಐಪಿಎಲ್‌ನ 16ನೇ ಆವೃತ್ತಿಯ 43ನೇ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ ನಷ್ಟದಲ್ಲಿ 126 ರನ್‌ಗಳಿಸಿತ್ತು.

ಸುಲಭ ಗುರಿ ಮುಂದಿದ್ದರೂ ಸಹ ನಿರಂತರವಾಗಿ ವಿಕೆಟ್‌ ಕಳೆದುಕೊಳ್ಳುತ್ತಲೇ ಸಾಗಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ, 19.5 ಓವರ್‌ಗಳಲ್ಲಿ 108 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 18 ರನ್‌ ಅಂತರದಲ್ಲಿ ಸೋಲೊಪ್ಪಿಕೊಂಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಅಗ್ರಸ್ಥಾನಕ್ಕೇರಿದ ಗುಜರಾತ್‌; ಕೆಕೆಆರ್‌ ಪಡೆಗೆ ಆರನೇ ಸೋಲು

ಕೆಎಲ್‌ ರಾಹುಲ್‌ ಪಡೆಯ ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅನುಭವಿಸಿದ್ದ ಸೋಲಿಗೆ, ಲಕ್ನೋ ತವರು ಮೈದಾನದಲ್ಲೇ ಗೆದ್ದು ಬೀಗುವ ಮೂಲಕ ಆರ್‌ಸಿಬಿ ಸೇಡು ತೀರಿಸಿಕೊಂಡಂತಾಗಿದೆ.

ಫೀಲ್ಡಿಂಗ್‌ ವೇಳೆ ಗಾಯಗೊಂಡು ಮೈದಾನ ತೊರೆದಿದ್ದ ನಾಯಕ ಕೆ.ಎಲ್‌. ರಾಹುಲ್‌, 19ನೇ ಓವರ್‌ನಲ್ಲಿ ಕೊನೆಯ ಬ್ಯಾಟರ್‌ ಆಗಿ ಆಗಮಿಸಿದ್ದು ಲಕ್ನೋ ತಂಡಕ್ಕೆ ಹಿನ್ನಡೆಯಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಗುಜರಾತ್ ವಿರುದ್ಧ ಡೆಲ್ಲಿಗೆ 4 ರನ್‌ಗಳ ಜಯ

ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 40ನೇ ಪಂದ್ಯದಲ್ಲಿ...

ಐಪಿಎಲ್ | ಸ್ಟೋಯ್ನಿಸ್ ಭರ್ಜರಿ ಶತಕ: ಚೆನ್ನೈಗೆ ತವರಲ್ಲೇ ರೋಚಕವಾಗಿ ಸೋಲುಣಿಸಿದ ಲಕ್ನೋ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್...

ಮುಂಬೈ – ರಾಜಸ್ಥಾನ್ ಐಪಿಎಲ್ ಪಂದ್ಯ; ಚಾಹಲ್ – ಜೈಸ್ವಾಲ್ ವಿನೂತನ ದಾಖಲೆ

ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ...

ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ಶೇ.50 ರಷ್ಟು ದಂಡ

ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್‌ ತಂಡದ ವಿರುದ್ಧದ ಪಂದ್ಯದಲ್ಲಿ ಅಂಪೈರ್‌ ವಿರುದ್ಧ ವಾಗ್ವಾದ...