ಐಪಿಎಲ್ 2023 | ಡೆಲ್ಲಿ ತಂಡದ ಆಟಗಾರರ ದುಬಾರಿ ವಸ್ತುಗಳು, ಬ್ಯಾಟ್ ನಾಪತ್ತೆ

Date:

  • ದೆಹಲಿ ತಂಡದ ಆಟಗಾರರ ಅಮೂಲ್ಯ ವಸ್ತುಗಳು, ಬ್ಯಾಟ್ ನಾಪತ್ತೆ
  • ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ಪಂದ್ಯದ ನಂತರ ಲಗೇಜ್ ಸಮಸ್ಯೆ

ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಬ್ಯಾಟ್ ನಾಪತ್ತೆ ಆಗಿರುವ ಅಥವಾ ಕಳ್ಳತನವಾಗಿರುವ ಆಘಾತಕಾರಿ ಘಟನೆ ಬುಧವಾರ ಬೆಳಕಿಗೆ ಬಂದಿದೆ.

- Advertisement -

ಬೆಂಗಳೂರಿನಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ನಡುವೆ ಪಂದ್ಯ ನಡೆದಿತ್ತು. ಇದಾದ ಬಳಿಕ ಕ್ಯಾಪಿಟಲ್ಸ್ ತಂಡದ ಆಟಗಾರರು ವಿಮಾನದಲ್ಲಿ ದೆಹಲಿಗೆ ಮರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆಟಗಾರರ ಬ್ಯಾಟ್ ಮತ್ತು ಇತರ ವಸ್ತುಗಳನ್ನು ಒಳಗೊಂಡಿದ್ದ ಲಗೇಜ್ ಒಂದು ದಿನದ ಬಳಿಕ ಕಾರ್ಗೋ ವಿಮಾನದಲ್ಲಿ ಬೆಂಗಳೂರಿನಿಂದ ದೆಹಲಿ ವಿಮಾನ ನಿಲ್ದಾಣ ತಲುಪಿತ್ತು. ಆಗಲೇ ವಸ್ತುಗಳು ಮತ್ತು ಬ್ಯಾಟ್ ನಾಪತ್ತೆ ಆಗಿರುವುದು ಅರಿವಾಗಿದೆ.

ಆಟಗಾರರ ಬ್ಯಾಗ್‌ನಲ್ಲಿದ್ದ ಬ್ಯಾಟ್‌, ಪ್ಯಾಡ್‌, ಶೂ, ಥೈ ಪ್ಯಾಡ್‌ (ತೊಡೆಯ ಭಾಗಕ್ಕೆ ಕಟ್ಟುವ ಪ್ಯಾಡ್‌) ಗ್ಲೌಸ್ ಸೇರಿದಂತೆ ಕಿಟ್‌ ಬ್ಯಾಗ್‌ನ ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಾಣೆಯಾಗಿದ್ದವು.

ಯುವ ಆಟಗಾರ ಯಶ್ ಧುಲ್’ಗೆ ಸೇರಿದ 5, ನಾಯಕ ಡೇವಿಡ್ ವಾರ್ನರ್ ಮತ್ತು ಫಿಲ್ ಸಾಲ್ಟ್ ಅವರ 3 ಬ್ಯಾಟ್‌ಗಳು ಸೇರಿದಂತೆ ಒಟ್ಟು 16 ಬ್ಯಾಟ್‌ಗಳು ಕಾಣೆಯಾಗಿವೆ. ವಿದೇಶಿ ಆಟಗಾರರ 1 ಲಕ್ಷ ಮೌಲ್ಯದ ಬ್ಯಾಟ್‌ಗಳು ಕಳ್ಳತನವಾಗಿವೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಜೈಪುರದಲ್ಲಿ ‘ಸೂಪರ್’ ಸವಾಲಿಗೆ ಸಜ್ಜಾದ ರಾಜಸ್ಥಾನ ರಾಯಲ್ಸ್

ಬ್ಯಾಟ್ ಸೇರಿದಂತೆ ಬೆಲೆಬಾಳುವ ವಸ್ತುಗಳು ಕಾಣೆಯಾದ ವಿಚಾರವನ್ನು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮತ್ತು ಪೊಲೀಸ್ ಗಮನಕ್ಕೆ ತರಲಾಗಿದೆ ಎಂದು ತಂಡದ ಆಡಳಿತ ಮಂಡಳಿ ತಿಳಿಸಿದೆ.

ಐಪಿಎಲ್ 16ನೇ ಆವೃತ್ತಿಯಲ್ಲಿ ಸತತ ಐದು ಪಂದ್ಯಗಳ ಸೋಲಿನಿಂದ ಕಂಗೆಟ್ಟಿರುವ ಡೇವಿಡ್ ವಾರ್ನರ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್‌, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಏಪ್ರಿಲ್‌ 20, ಗುರುವಾರದಂದು ತವರು ಮೈದಾನ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ವಾರ್ನರ್ ಪಡೆ, ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವನ್ನು ಎದುರಿಸಲಿದೆ.

ಪ್ಲೇ ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳಲ್ಲೂ
ಗೆಲುವಿನ ದಾರಿ ಹಿಡಿಯುವುದು ಅತ್ಯಗತ್ಯ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...