ಐಪಿಎಲ್ 2023 | ಚೆನ್ನೈ ಬೌಲಿಂಗ್‌ ದಾಳಿಗೆ ಕುಸಿದ ಡೆಲ್ಲಿ; ವಾರ್ನರ್‌ ಪಡೆಗೆ ಏಳನೇ ಸೋಲು

Date:

ಚೆನ್ನೈ ಸೂಪರ್‌ ಕಿಂಗ್ಸ್‌ನ ಸಂಘಟಿತ ಬೌಲಿಂಗ್‌ ನೆರವಿನಿಂದ ಧೋನಿ ಪಡೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 27 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿತು.

- Advertisement -

ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 55ನೇ ಪಂದ್ಯದಲ್ಲಿ ಸಿಎಸ್‌ಕೆ ನೀಡಿದ 168 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140 ರನ್‌ ಗಳಿಸಲಷ್ಟೆ ಶಕ್ತವಾಯಿತು. ಚೆನ್ನೈ ಪರ ಮತೀಶಾ ಪತಿರಾನ 37/3 ಹಾಗೂ ದೀಪಕ್‌ ಚಹಾರ್ 28/2 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಡೆಲ್ಲಿ ಕ್ಯಾಪಿಟಲ್ಸ್ ಪರ ರಿಲೀ ರೋಸೌವ್ 35, ಮನೀಶ್ ಪಾಂಡೆ 27 ಹಾಗೂ ಅಕ್ಸರ್ ಪಟೇಲ್ 21 ರನ್‌ ಗಳಿಸಿದ್ದು ಉಳಿದ ಬ್ಯಾಟ್ಸಮನ್‌ಗಳ್ಯಾರು ಹೆಚ್ಚು ಪ್ರತಿರೋಧ ತೋರಲಿಲ್ಲ. ಏಳು ಸೋಲುಗಳನ್ನು ಕಂಡಿರುವ ಡೇವಿಡ್ ವಾರ್ನರ್‌ ಪಡೆ ಬಹುತೇಕ ಐಪಿಎಲ್‌ನಿಂದ ನಿರ್ಗಮಿಸುವ ಸಾಧ್ಯತೆ ಹೆಚ್ಚಾಗಿದೆ. ಸಿಎಸ್‌ಕೆ ಕೂಡ ಏಳು ಜಯ ದಾಖಲಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಇದಕ್ಕೂ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ 20ರ ಗಡಿ ದಾಡಿದ ಆರು ಬ್ಯಾಟ್ಸಮನ್‌ಗಳ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 167 ರನ್‌ ಪೇರಿಸಿತು.

ರುತುರಾಜ್‌ ಗಾಯಕ್‌ವಾಡ್ (24),ಅಜಿಂಕ್ಯಾ ರಹಾನೆ (21),ಶಿವಂ ದುಬೆ (25),ಅಂಬಾಟಿ ರಾಯುಡು (23),ರವೀಂದ್ರ ಜಡೇಜ (21) ಹಾಗೂ ನಾಯಕ ಎಂ ಎಸ್‌ ಧೋನಿ (20) ರನ್‌ ಗಳಿಸಿದರು. ಇವರಲ್ಲಿ ಧೋನಿ 9 ಎಸೆತಗಳಲ್ಲಿ 2 ಸಿಕ್ಸರ್‌ 1 ಬೌಂಡರಿಯೊಂದಿಗೆ 20, ಶಿವಂ ದುಬೆ 12 ಚೆಂಡುಗಳಲ್ಲಿ 3 ಭರ್ಜರಿ ಸಿಕ್ಸರ್‌ಗಳೊಂದಿಗೆ 25 ರನ್‌ಗಳನ್ನು ವೇಗವಾಗಿ ಗಳಿಸಿದರು.

ಇನ್ನುಳಿದಂತೆ ಡಿವಾನ್ ಕಾನ್ವೆ 13 ಎಸೆತಗಳಲ್ಲಿ 10 ರನ್, ದೀಪಕ್ ಚಹರ್ 2 ಎಸೆತಗಳಲ್ಲಿ ಅಜೇಯ 1 ರನ್ ಹಾಗೂ ತುಷಾರ್ ದೇಶಪಾಂಡೆ ಒಂದು ಎಸೆತವನ್ನು ಎದುರಿಸಿ ಯಾವುದೆ ರನ್ ಗಳಿಸದೇ ಅಜೇಯರಾಗಿ ಉಳಿದರು.

ಡೆಲ್ಲಿ ತಂಡದ ಮಿಷಲ್ ಮಾರ್ಷ್ 18/3, ಅಕ್ಷರ್ ಪಟೇಲ್ 27/2, ಕುಲ್‌ದೀಪ್‌ ಯಾದವ್ 28/1, ಲಲಿತ್‌ ಯಾದವ್ 34/1 ಹಾಗೂ ಖಲೀಲ್‌ ಯಾದವ್ 32/1 ವಿಕೆಟ್ ಕಬಳಿಸಿ ಸಿಎಸ್‌ಕೆಯನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...