ಐಪಿಎಲ್‌ 2023 | ಚೆನ್ನೈ ಮೈದಾನದಲ್ಲಿ ಬಲಾಢ್ಯರ ಮುಖಾಮುಖಿ

Date:

Advertisements
  • ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿ ಚೆನ್ನೈ
  • ನಾಯಕನಾಗಿ ಧೋನಿಗೆ 200ನೇ ಪಂದ್ಯ

ಐಪಿಎಲ್‌ 16ನೇ ಆವೃತ್ತಿಯ 17ನೇ ಪಂದ್ಯ ಬಲಾಢ್ಯರ ಮುಖಾಮುಖಿಗೆ ವೇದಿಕೆಯಾಗಲಿದೆ. ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿರುವ ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌, ಸಿಎಸ್‌ಕೆ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್‌ ಸವಾಲನ್ನು ಎದುರಿಸಲಿದೆ.

2008ರಿಂದಲೂ ಚೆನ್ನೈ ಫ್ರಾಂಚೈಸಿ ಸಾರಥ್ಯ ವಹಿಸಿರುವ ಎಂ ಎಸ್ ಧೋನಿ, ಬುಧವಾರ, ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು 200ನೇ ಪಂದ್ಯದಲ್ಲಿ ಮುನ್ನಡೆಸಲಿದ್ದಾರೆ.

ಈ ಋತುವಿನಲ್ಲಿ ಇದುವರೆಗೆ ಆಡಿದ ಎಲ್ಲಾ ಮೂರು ಪಂದ್ಯಗಳಲ್ಲೂ ಸಂಜು ಸ್ಯಾಮ್ಸನ್‌ ಸಾರಥ್ಯದ ರಾಯಲ್ಸ್‌, 190ಕ್ಕೂ ಅಧಿಕ ಮೊತ್ತವನ್ನು ಕಲೆಹಾಕಿದೆ.

Advertisements

ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್, ಎರಡು ಪಂದ್ಯಗಳಲ್ಲಿ ಮೊದಲ ಓವರ್‌ನಲ್ಲೇ ಎರಡೆರಡು ವಿಕೆಟ್‌ ಪಡೆಯುವ ಮೂಲಕ ಎದುರಾಳಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದಾರೆ.

ಆದರೆ ಎಂಎಸ್ ಧೋನಿ ಮುನ್ನಡೆಸುವ ಚೆನ್ನೈ ತಂಡವನ್ನು ಅವರದ್ದೇ ಮೈದಾನದಲ್ಲಿ ಮಣಿಸುವುದು ಸುಲಭದ ಮಾತಲ್ಲ. ಐಪಿಎಲ್‌ನಲ್ಲಿ ತವರಿನಲ್ಲಿ ಆಡಿದ 57 ಪಂದ್ಯಗಳಲ್ಲಿ 41ರಲ್ಲೂ ಸಿಎಸ್‌ಕೆ ಗೆಲುವಿನ ಪತಾಕೆ ಹಾರಿಸಿದೆ. ಗೆಲುವಿನ ಪ್ರಮಾಣ ಶೇ. 72%.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಮನೆಗೆಲಸ ಮಾಡುತ್ತಿದ್ದ ಕ್ರಿಕೆಟಿಗ ಇಂದು ಐಪಿಎಲ್‌ ಹೀರೋ

ಸ್ಪಿನ್‌ ಸ್ನೇಹಿ ಪಿಚ್‌

ಎಂಎಂ ಚಿದಂಬರಂ ಸ್ಟೇಡಿಯಂನ ಪಿಚ್‌ ಸಾಮಾನ್ಯವಾಗಿ ಸ್ಪಿನ್ನರ್‌ಗಳಿಗೆ ನೆರವು ನೀಡುತ್ತದೆ. ರಾಜಸ್ಥಾನ ತಂಡದಲ್ಲಿ ರವಿಚಂದ್ರನ್‌ ಆರ್ ಅಶ್ವಿನ್, ಮತ್ತು ಯಜ್ವೇಂದ್ರ ಚಹಾಲ್‌ ಪ್ರಮುಖ ಸ್ಪಿನ್‌ ಅಸ್ತ್ರವಾಗಿದ್ದಾರೆ.

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ  ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಲೋಕಲ್‌ ಬಾಯ್ ಆರ್‌ ಅಶ್ವಿನ್‌ ಹೆಸರಿನಲ್ಲಿರುವುದು ಗಮನಾರ್ಹ.

ಸಿಎಸ್‌ಕೆ ಬಳಗದಲ್ಲಿ ಮೊಯಿನ್ ಅಲಿ, ರವೀಂದ್ರ ಜಡೇಜಾ, ಮಿಷೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ ಸ್ಪಿನ್‌ ವಿಭಾಗವನ್ನು ನಿಭಾಯಿಸಲಿದ್ದಾರೆ.

ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿ ಚೆನ್ನೈ

ಐಪಿಎಲ್‌ 16ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡಕ್ಕೆ ಶರಣಾಗಿದ್ದ ಸಿಎಸ್‌ಕೆ, ನಂತರದ ಎರಡು ಪಂದ್ಯಗಳಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ವಿರುದ್ಧ ಗೆಲುವಿನ ನಗೆ ಬೀರಿದೆ.

ಚೆನ್ನ ಮತ್ತೊಂದೆಡೆ ರಾಯಲ್ಸ್‌, ಸನ್‌ರೈಸರ್ಸ್ ಹೈದರಾಬಾದ್‌, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದ್ದು, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಕಟ ಪೈಪೋಟಿ ನೀಡಿ ಸೋಲು ಕಂಡಿತ್ತು.

ಸಂಭಾವ್ಯ ತಂಡ

ಚೆನ್ನೈ ಸೂಪರ್​ ಕಿಂಗ್ಸ್​: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ವಿಕೆಟ್​ ಕೀಪರ್​), ಮಿಷೆಲ್ ಸ್ಯಾಂಟ್ನರ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ

ರಾಜಸ್ಥಾನ ರಾಯಲ್ಸ್​: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್​​ ಕೀಪರ್​), ಧ್ರುವ್ ಜುರೆಲ್ / ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ಆರ್ ಅಶ್ವಿನ್, ಎಂ ಅಶ್ವಿನ್, ಟ್ರೆಂಟ್ ಬೌಲ್ಟ್, ಯಜ್ವೇಂದ್ರ ಚಹಾಲ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X